Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರಾಕೃತಿಕ ವಿಕೋಪ : ಸಹಕಾರಕ್ಕೆ ಡಿವೈಎಸ್ಪಿ ಚಂದ್ರಶೇಖರ್ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರಾಕೃತಿಕ ವಿಕೋಪ : ಸಹಕಾರಕ್ಕೆ ಡಿವೈಎಸ್ಪಿ ಚಂದ್ರಶೇಖರ್ ಮನವಿ*

ಜುಲೈ 5, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಜು.5 NEWS DESK : ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಾಗಿ ಮಳೆಯಾಗುತ್ತಿದ್ದು, ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆ ಮೇರೆ ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಪ್ರಾಕೃತಿಕ ವಿಕೋಪಗಳು ಸಂಭವಿಸಿದ್ದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ವಿವಿಧ ಗ್ರಾಮಗಳ ಮುಖಂಡರೊಂದಿಗೆ ಸಭೆ ನಡೆಸಲಾಯಿತು. ಗುಂಡುಗುಟ್ಟಿ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಸಭೆಯಲ್ಲಿ ಮಾತನಾಡಿದ ಡಿವೈಎಸ್ಪಿ ಚಂದ್ರಶೇಖರ್ ಅವರು ಜಿಲ್ಲೆಯಲ್ಲಿ ಅತೀವ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ವರದಿಯನುಸಾರ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚುಮಳೆಯಾದ ಹಿನ್ನಲೆ ಭೂಮಿಯು ಸಡಿಲತೆಗೊಳ್ಳುತ್ತದೆ ಇಂತಹ ಸಂದರ್ಭಗಳಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಅಂತಹ ಸಂದರ್ಭದಲ್ಲಿ ವಿಡಿಯೋ ಚಿತ್ರೀಕರಣ ಮಾಡದೆ ಅಪತ್ತು ಸಂಭವಿಸಿದ ಸ್ಥಳದ ತುರ್ತು ಮಾಹಿತಿಯನ್ನು ಸಂಬಂಧಿಸಿದ ಇಲಾಖೆ ರವಾನಿಸಿ ತಮ್ಮಿಂದಾಗುವ ಅಮೂಲ್ಯ ಜೀವಗಳ ರಕ್ಷಣಾ ಕಾರ್ಯಕ್ಕೆ ಮುಂದಾಗಬೇಕೆಂದು ಕರೆ ನೀಡಿದರು. ಈ ವ್ಯಾಪ್ತಿಯಲ್ಲಿ ಹಲವಷ್ಟು ಕುಗ್ರಾಮಗಳನ್ನು ಹೊಂದಿರುವ ಕೇಂದ್ರವಾಗಿದೆ ಈ ಹಿಂದೆಯು ಹಲವು ಕಹಿಘಟನೆಗಳು ಸಂಭವಿಸಿರುವುದನ್ನು ಮೆಲುಕು ಹಾಕುವ ಮೂಲಕ ತುರ್ತು ಸಂದರ್ಭದಲ್ಲಿ ಬರೆ ಕುಸಿತ, ರಸ್ತೆಗೆ ಮರಗಳು ಉರುಳಿದ ಸಂದರ್ಭ ಕೂಡಲೇ ರಕ್ಷಣಾ ಕಾರ್ಯಕ್ಕೆ ಧಾವಿಸಲು ಜೆಸಿಬಿ, ಕ್ರೇನ್ ಮಾಲೀಕರು ಮತ್ತು ಆಪರೇಟರ್‍ಗಳು, ಆಂಬುಲೆನ್ಸ್ ಮತ್ತು ಅವುಗಳ ಚಾಲಕರು ಮತ್ತು ಮಾಲೀಕರು ಮತ್ತು ಲಭ್ಯವಿರುವ ವುಡ್ ಕಟ್ಟರ್‍ಗಳ ಮಾಲೀಕರುಗಳು. ಸ್ವಯ ಸೇವಾ ಸಂಘಗಳು, ಮುಖಂಡರುಗಳು ತಮ್ಮೊಂದಿಗೆ ಸಹಕಾರಕ್ಕೆ ಮುಂದಾಗಬೇಕೆಂದು ಮನವಿ ಮಾಡಿದರು. ಕುಶಾಲನಗರ ವೃತ್ತ ನಿರೀಕ್ಷಕರಾದ ದಿನೇಶ್‍ಕುಮಾರ್ ಮಾತನಾಡಿ, ಅಪಾಯದ ಅಂಚಿನಲ್ಲಿರುವ ಸ್ಥಳಗಳ ಮಾಹಿತಿ ನೀಡುವಂತೆ ಸೂಚಿಸಿದರಲ್ಲದೆ ತಾವುಗಳು ಸಲ್ಲಿಸಿದ ಮನವಿಯನ್ನು ಸರಕಾರಕ್ಕೂ ಜಿಲ್ಲಾಡಳಿತಕ್ಕೆ ಕಳುಹಿಸುವ ಇದಕ್ಕೆ ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳಲಾಗುವುದೆಂದು ಅವರು ಹೇಳಿದರು. ಇದೇ ಸಂದರ್ಭ ಪಂಚಾಯಿತಿ ಸದಸ್ಯರುಗಳಾದ ಪ್ರಸಾದ್ ಕುಟ್ಟಪ್ಪ, ರಫೀಕ್‍ಖಾನ್, ಶಬ್ಬೀರ್, ಬಿ.ಕೆ.ಪ್ರಶಾಂತ್ ಅವರುಗಳು ಮಾತನಾಡಿ, ಸುಂಟಿಕೊಪ್ಪ ಪಟ್ಟಣದ ಪಂಪ್ ಬಡಾವಣೆಯು ಅಪಾಯದ ಅಂಚಿನಲ್ಲಿದ್ದು, ಈ ಭಾಗದಲ್ಲಿ ನೂರಾರು ಕುಟುಂಬವು ವಾಸಿಸುತ್ತಿದ್ದಾರೆ. ಅಪಾಯದ ಅಂಚಿನಲ್ಲಿರುವ ಸ್ಥಳದಲ್ಲೇ ಅಂಗನವಾಡಿ ಕೇಂದ್ರ ಕಾರ್ಯಚರಿಸುತ್ತಿದೆ ಮುಂದೆ ಅನಾಹುತ ಸಂಭವಿಸುವ ಮುನ್ನ ಇದಕ್ಕೆ ಸೂಕ್ತ ರೀತಿಯ ಪರಿಹಾರವನ್ನು ಕಂಡುಕೊಳ್ಳಬೇಕೆಂದು ಆಗ್ರಹಿಸಿದರು. ಸಭೆಯಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್, ಅಧ್ಯಕ್ಷ ಪಿ.ಆರ್.ಸುನಿಕುಮಾರ್, ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಮೋಹನ್‍ರಾಜ್ ಮಾತನಾಡಿದರು. ಸಭೆಯಲ್ಲಿ ಕಂದಾಯ ಇಲಾಖೆ ಗ್ರಾವi ಆಡಳಿತಾಧಿಕಾರಿ ಉಮೇಶ್, ಚೆಸ್ಕಾಂ, ಶಿಕ್ಷಣ ಇಲಾಖೆ, ಪೊಲೀಸ್ ಸಿಬ್ಬಂದಿಗಳು, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.