Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್‍ನಿಂದ ಮೂಕೊಂಡ ನಿತಿನ್ ಕುಶಾಲಪ್ಪರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್‍ನಿಂದ ಮೂಕೊಂಡ ನಿತಿನ್ ಕುಶಾಲಪ್ಪರಿಗೆ ಸನ್ಮಾನ*

ಜುಲೈ 5, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.5 NEWS DESK : ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪ್ರಶಸ್ತಿಗೆ ಭಾಜನರಾದ ಮೂಕೊಂಡ ನಿತಿನ್ ಕುಶಾಲಪ್ಪ ಅವರನ್ನು ಕೊಡಗು ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ನಗರದ ಸಾಲು ಮರದ ತಿಮ್ಮಕ್ಕ ಪಾರ್ಕ್ ಸಮೀಪದ ಖಾಸಗಿ ಕೆಫೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಭವನದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್‍ನ ಅಧ್ಯಕ್ಷೆ ಎಂ.ಎ.ರುಬೀನಾ ಹಾಗೂ ಪದಾಧಿಕಾರಿಗಳು ಸನ್ಮಾನಿಸಿ, ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಮೂಕೊಂಡ ನಿತಿನ್ ಕುಶಾಲಪ್ಪ ಅವರು, ಮಕ್ಕಳಿಗಾಗಿ ದಕ್ಷಿಣ ಜನಪದ ಕತೆಗಳ ಕುರಿತು ಬರೆದ ಪಫಿನ್ ಬುಕ್ಸ್ ಪ್ರಕಟಿತ “ದಕ್ಷಿಣ: ಸೌತ್ ಇಂಡಿಯನ್ ಮಿಥ್ಸ್ ಅಂಡ್ ಫೇಬಲ್ಸ್ ರಿಟೋಲ್ಡ್’ ಇಂಗ್ಲಿಷ್ ಕೃತಿಗೆ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪುರಸ್ಕಾರ ಲಭಿಸಿದೆ ಎಂದರು. ಕರ್ನಾಟಕದಿಂದ 3 ಹೆಸರು ಬಂದಿದ್ದು, ಕನ್ನಡ ಸಾಹಿತ್ಯದಲ್ಲಿ ಇಬ್ಬರು ಹಾಗೂ ಇಂಗ್ಲಿಷ್ ಸಾಹಿತ್ಯದಲ್ಲಿ ತನಗೆ ಲಭಿಸಿರುವುದಾಗಿ ತಿಳಿಸಿದರು. ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ ತನ್ನ ಸಾಹಿತ್ಯಾಸಕ್ತಿಯನ್ನು ಗುರುತಿಸಿ ಗೌರವಿಸುತ್ತಿರುವುದು ಸಂತಸ ತಂದಿದೆ ಎಂದು ಹೇಳಿದರು. ಕನ್ನಡ ಭವನದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ಕೊಡಗು ಮೂಲದ ಲೇಖಕ ಮೂಕೊಂಡ ನಿತಿನ್ ಕುಶಾಲಪ್ಪ ಅವರು ಭಾರತದ ಅತೀ ದೊಡ್ಡ ಮಕ್ಕಳ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿರುವುದು ಜಿಲ್ಲೆಗೆ ಹಾಗೂ ಕನ್ನಡ ನಾಡಿಗೆ ಹೆಮ್ಮೆಯ ವಿಷಯ ಎಂದರು. ನಿತಿನ್ ಕುಶಾಲಪ್ಪ ಪ್ರತಿಭಾವಂತ ಯುವ ಸಾಹಿತಿಯಾಗಿದ್ದು, ಸರಳತೆಯನ್ನು ಮೈಗೂಡಿಸಿಕೊಂಡವರಾಗಿದ್ದಾರೆ. ಇವರು ಸಾಫ್ಟ್‍ವೇರ್ ಅಭಿವೃದ್ಧಿ ಉದ್ಯಮದ ಜೊತೆಗೆ ಸಾಹಿತ್ಯದಲ್ಲೂ ತೊಡಗಿಕೊಳ್ಳುವ ಮೂಲಕ ಯುವ ಸಾಹಿತಿಗಳಿಗೆ ಮಾದರಿಯಾಗಿದ್ದಾರೆ. ಸಾಧನೆಗೆ ಪೋಷಕರ ಪ್ರೋತ್ಸಾಹ ಅಗತ್ಯ. ಅದರಂತೆ ಪೋಷಕರು ಮನಗ ಸಾಹಿತ್ಯಾಸಕ್ತಿಗೆ ಬೆಂಬಲ ನೀಡಿರುವುದು ಶ್ಲಾಘನೀಯ ಎಂದರು. ಮುಂದಿನ ದಿನಗಳಲ್ಲಿಯೂ ಮತ್ತಷ್ಟು ಸಂಶೋಧನೆ ಕೃತಿಗಳು ಹೊರಬರುವಂತಾಗಲಿ ಎಂದು ಹಾರೈಸಿದರು. ಕನ್ನಡ ಭವನ ಮತ್ತು ಚುಟುಕು ಸಾಹಿತ್ಯ ಪರಿಷತ್ತು ಹಲವು ಸಾಧಕರನ್ನು ಗುರುತಿಸಿ, ಪ್ರೋತ್ಸಾಹಿಸುತ್ತಿದೆ ಎಂದರು. ಮೂಕೊಂಡ ನಿತಿನ್ ಕುಶಾಲಪ್ಪ ಅವರ ತಾಯಿ ಪುಷ್ಪ ದಮಯಂತಿ ಮಾತನಾಡಿ, ಸಾಹಿತ್ಯಾಸಕ್ತರಿಗೆ ಪ್ರೋತ್ಸಾಹ ನೀಡುವುದರಿಂದ ಸಾಹಿತ್ಯ ಕ್ಷೇತ್ರದ ಬೆಳವಣಿಗೆಗೆ ಕಾಣುತ್ತದೆ. ಬಾಲ್ಯದಿಂದಲೂ ಬರವಣಿಗೆಯಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ಪುತ್ರ ಉದ್ಯೋಗದ ಜೊತೆಗೆ ಬರವಣಿಗೆಯನ್ನು ಮೈಗೂಡಿಸಿಕೊಂಡಿದ್ದಾರೆ. ಯುವಜನತೆ ತಮ್ಮ ಉದ್ಯೋಗದ ಜೊತೆಗೆ ಆಸಕ್ತಿ ಕ್ಷೇತ್ರಕ್ಕೂ ಆದ್ಯತೆ ನೀಡುವಂತಾಗಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಮೂಕೊಂಡ ನಿತಿನ್ ಕುಶಾಲಪ್ಪ ಅವರ ತಂದೆ ಮೂಕೊಂಡ ಪೂಣಚ್ಚ, ಚುಟುಕು ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾದ ಪೇರಿಯಂಡ ಯಶೋಧ, ಪ್ರಧಾನ ಕಾರ್ಯದರ್ಶಿ ನಿವ್ಯ ದೇವಯ್ಯ, ನಿರ್ದೇಶಕರಾದ ಲೋಹಿತ್ ಮಾಗುಲುಮನೆ, ಹರ್ಷಿತಾ ಶೆಟ್ಟಿ ಮನವಳಿಕೆಗುತ್ತು, ರಂಜಿತ್ ಜಯರಾಂ, ಲೋಕೇಶ್ ಕಾಟಕೇರಿ, ಎಸ್.ಆರ್.ವತ್ಸಲ, ಹೇಮಾ ಅಜಿತ್, ಅರುಣ್ ಕುಮಾರ್, ರಿಶಾ, ಇಷಾ, ಶಿವ ಕರ್ಣಂಗೇರಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.