Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೈತಾಡಿ ಗ್ರಾಮದಲ್ಲಿ ಘರ್ ಘರ್ ಶೌರ್ಯ ಸನ್ಮಾನ್ : ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಪೆಮ್ಮಂಡ ಕಾವೇರಪ್ಪಗೆ ಪುಷ್ಪ ನಮನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೈತಾಡಿ ಗ್ರಾಮದಲ್ಲಿ ಘರ್ ಘರ್ ಶೌರ್ಯ ಸನ್ಮಾನ್ : ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಪೆಮ್ಮಂಡ ಕಾವೇರಪ್ಪಗೆ ಪುಷ್ಪ ನಮನ*

ಜುಲೈ 7, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.7 NEWS DESK : 26ನೇ ವರ್ಷದ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ವೀರ ಯೋಧರ ಸ್ಮರಣಾರ್ಥ, 1999ರ ಕಾರ್ಗಿಲ್ ಯುದ್ಧದ ಸಮಯದಲ್ಲಿ ಮಣ್ಣಿನ ವೀರ ಪುತ್ರರು ಮಾಡಿದ ಅತ್ಯುನ್ನತ ತ್ಯಾಗಗಳನ್ನು ಗೌರವಿಸಲು ಮತ್ತು ಸ್ಮರಿಸಲು ಭಾರತೀಯ ಸೇನೆಯು ಘರ್ ಘರ್ ಶೌರ್ಯ ಸನ್ಮಾನ್ ವಿಶೇಷ ಸಂಪರ್ಕ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಮೂಲಕ ಕುಟುಂಬವನ್ನ ಗೌರವಿಸಿ ನಿಮ್ಮೊಂದಿಗೆ ಭಾರತೀಯ ಸೇನೆ ಸದಾ ಇರುತ್ತದೆ ಎಂಬ ಸಂದೇಶ ಸಾರುವ ಮೂಲಕ ಸೇನೆ ವತಿಯಿಂದ ಸ್ಮರಣಿಕೆ ಮತ್ತು ಕೃತಜ್ಞತಾ ಪತ್ರವನ್ನು ಪ್ರಧಾನ ಮಾಡುವ ಕಾರ್ಯಕ್ರಮ ವಿರಾಜಪೇಟೆ ತಾಲೂಕಿನ ಮೈತಾಡಿ ಗ್ರಾಮದಲ್ಲಿ ನಡೆಯಿತು. ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಮತ್ತು ಮೂವರು ಇತರ ಶ್ರೇಣಿಗಳು (ಒಆರ್) ಒಳಗೊಂಡ ಸೇನಾ ನಿಯೋಗದ ಆರು ಮಂದಿ ತಂಡ ಕಾರ್ಗಿಲ್ ಯುದ್ಧ ವೀರರ ಕುಟುಂಬವನ್ನು ಭೇಟಿಯಾಗಿ ಹುತಾತ್ಮ ಯೋಧರ ಸೇವೆಯನ್ನ ಗೌರವಿಸಿ ಸೇನೆ ಸದಾ ಕುಟುಂಬದೊಂದಿಗೆ ಇರುತ್ತದೆ ಎಂಬ ಸಂದೇಶದೊಂದಿಗೆ ಕಾರ್ಗಿಲ್ ಯುದ್ಧದಲ್ಲಿ ವೀರ ಮರಣ ಹೊಂದಿದ ಕಾವೇರಪ್ಪನವರ ಸಮಾಧಿಗೆ ತೆರಳಿ ಗೌರವ ಪೂರಕವಾಗಿ ಪುಷ್ಪ ನಮನ ಸಲ್ಲಿಸಿ ಸೇನಾ ಗೌರವ ಸೂಚಿಸಿದರು. ಜೂನಿಯರ್ ಕಮಿಷನ್ಡ್ ಆಫೀಸರ್ ನಾಯಬ್/ಸುಭೇದಾರ್ ಕಿಂಗಸ್ಲೀನ್ ಮಾತನಾಡಿ, ಈ ಪ್ರಯತ್ನವು ಕೇವಲ ಗೌರವವಲ್ಲ, ಬದಲಾಗಿ ಭಾರತೀಯ ಸೇನೆ ಮತ್ತು ಅದರ ವೀರ ಸೈನಿಕರ ನಡುವಿನ ಅವಿನಾಭಾವ ಬಾಂಧವ್ಯದ ಪುನರುಚ್ಚರಣೆಯಾಗಿದೆ. ಇದು ಹುತಾತ್ಮರನ್ನು ಗೌರವಿಸುವ ಮತ್ತು ಅವರ ಕುಟುಂಬಗಳೊಂದಿಗೆ ನಿಲ್ಲುವ ನಮ್ಮ ಆಳವಾದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು. ಸೇನಾ ತಂಡದೊಂದಿಗೆ ಆಗಮಿಸಿದ ಕೊಡಗಿನ ನಂಜರಾಯಪಟ್ಟಣದ ನಾಯಬ್ ಸುಭೇದಾರ್ ಸಿ.ಎಲ್.ತಿಲಕ್ ಮಾತನಾಡಿ, ಕೊಡಗಿನ ವೀರ ಪುತ್ರ ಕಾವೇರಪ್ಪ ಹುತಾತ್ಮರಾಗಿ 26 ವರ್ಷ ಕಳೆದಿದೆ. ದೇಶಕ್ಕಾಗಿ ತ್ಯಾಗ ಮಾಡಿ ಹುತಾತ್ಮ ಯೋಧರನ್ನು ಗೌರವಿಸುವ ಹಾಗೂ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಭಾರತೀಯ ಸೇನೆ ಮಾಡುತ್ತಿರುವುದು ಹೆಮ್ಮೆಯ ವಿಷಯ. ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಸೇರುವ ಮೂಲಕ ದೇಶ ಸೇವೆ ಮಾಡಬೇಕೆಂದು ಹೇಳಿದರು. ಹುತಾತ್ಮ ಯೋಧ ಕಾವೇರಪ್ಪ ಅವರ ಪತ್ನಿ ಶೋಭಾ ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾಗಿ 26 ವರ್ಷ ಕಳೆದಿದೆ. ಈ ಸಂದರ್ಭ ಭಾರತೀಯ ಸೇನೆ ಹುತಾತ್ಮರನ್ನ ಗೌರವಿಸುವ ಮೂಲಕ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಮಾಡುತ್ತಿದೆ ಎಂದು ಸೇನೆಯ ಕಾಳಜಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಹೋದರ ಅರುಣ್ ಮಾತನಾಡಿದರು. ಇದೇ ಸಂದರ್ಭ ಗ್ರಾಮಕ್ಕೆ ಆಗಮಿಸಿದ ಸೇನಾ ತಂಡದವರನ್ನು ಹೂಗುಚ್ಛ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡು ಸನ್ಮಾನಿಸಲಾಯಿತು. ಗ್ರಾಮದ ಪ್ರಮುಖರಾದ ಅರುಣ್, ಅಪ್ಪಯ್ಯ, ಸಿಂದು, ಪೊನ್ನಪ್ಪ, ನಾಣಯ್ಯ, ಲೋಕೇಶ್, ಸುರೇಶ್, ಜೋಯಪ್ಪ, ಈರಪ್ಪ, ಸುಬಯ್ಯ, ಸೇನಾ ಸಿಬ್ಬಂದಿಗಳಾದ ಹವಲ್ದಾರ್ ರಿಜಿಶ, ಲಕ್ಷ್ಮಣ, ರಮೇಶ್ ರೆಡ್ಡಿ, ಸೈಯೂಜ್ ಸೇರಿದಂತೆ ಮತ್ತಿತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.