
ಮಡಿಕೇರಿ ಜು.8 NEWS DESK : ಸೋಮವಾರಪೇಟೆ ಕ್ರಿಯೇಟಿವ್ ಅಕಾಡೆಮಿ ವಿದ್ಯಾಸಂಸ್ಥೆಗೆ ಮೈಸೂರು-ಕೊಡಗು ಸಂಸದರಾದ ಯದುವೀರ್ ಒಡೆಯರ್ ಭೇಟಿ ನೀಡಿದರು. ಶಾಲೆಯ ಶೈಕ್ಷಣಿಕ ಪ್ರಗತಿಯ ಬಗ್ಗೆ ಆಡಳಿತ ಮಂಡಳಿ, ಶಿಕ್ಷಕರೊಂದಿಗೆ ಚರ್ಚಿಸಿದರು. ನಂತರ ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಿಸಿ ಶುಭಹಾರೈಸಿದರು. ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಾಜಿ ಶಾಸಕ ಅಪಚ್ವು ರಂಜನ್, ಮಡಿಕೇರಿ ನಗರ ಬಿಜೆಪಿ ಪದಾಧಿಕಾರಿಗಳು, ಸೋಮವಾರಪೇಟೆ ಕಾರ್ಯಕರ್ತರು ಪಾಲ್ಗೊಂಡರು.









