
ಮಡಿಕೇರಿ ಜು.8 NEWS DESK : ಮಡಿಕೇರಿ ತಾಲೂಕಿನ ಮೇಕೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ರೂ.20 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಮೇಕೇರಿ- ಬಿಳಿಗೇರಿಯಿಂದ ತೋರಮಣ ಸಂಪರ್ಕ ರಸ್ತೆ ಹಾಗೂ ಬಿಳಿಗೇರಿ ಶಾದಿಯಾಲ್ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಹಾಕತ್ತೂರು ಗ್ರಾ.ಪಂ ವ್ಯಾಪ್ತಿಯ ಚೂರಿಕಾಡು ರಸ್ತೆ 15 ಲಕ್ಷ ರೂ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಇತರರು ಇದ್ದರು.









