
ವಿರಾಜಪೇಟೆ ಜು.8 NEWS DESK : ಕಂಡಂಗಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಹಣ್ಣಿನ ಸಸಿಗಳು, ಗಿಡಮೂಲಿಕೆ ಸಸಿಗಳನ್ನು ನೆಡಲಾಯಿತು. ಈ ಸಂದರ್ಭ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೂಕಚಂಡ ಪ್ರಸನ್ನ ಸುಬ್ಬಯ್ಯ, ಡಿ.ಆರ್.ಎಫ್.ಓ ಶ್ರೀಧರ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂಡಂಗಾಲದ ಕಾವೇರಿ ಇಕೋ ಕ್ಲಬ್‍ನ ವಿದ್ಯಾರ್ಥಿಗಳು, ಶಿಕ್ಷಕ ವೃಂದ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದರು.








