
ಮಡಿಕೇರಿ ಜು.9 NEWS DESK : ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಸೋಮವಾರಪೇಟೆ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರವಾಸ ಮಾಡಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಭೇಟಿ ಮಾಡಿದರು. ಶಾಂತಳ್ಳಿ ಮತ್ತು ಬೆಟ್ಟದಳ್ಳಿ
ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಂಸದರು, ಕೊಡಗಿನ ಸರ್ವತೋಮುಖ ಅಭಿವೃದ್ಧಿಗೆ ಬದ್ಧವಾಗಿರುವುದಾಗಿ ಘೋಷಿಸಿದ ಅವರು, ಕರ್ನಾಟಕ ರಾಜ್ಯಕ್ಕೆ ಬಿಜೆಪಿ ಸರ್ಕಾರದ ಅನಿವಾರ್ಯತೆಯಿದ್ದು, ಪಕ್ಷ ಸಂಘಟನೆಗೆ ಶ್ರಮ ವಹಿಸಬೇಕೆಂದು ಕರೆ ನೀಡಿದರು. ಜಿಲ್ಲಾ ಅಧ್ಯಕ್ಷ ರವಿ ಕಾಳಪ್ಪ, ಮಂಡಲ ಅಧ್ಯಕ್ಷ ಗೌತಮ್ ಗೌಡ, ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಎಸ್.ಜಿ.ಮೇದಪ್ಪ, ನಿಕಟ ಪೂರ್ವ ಜಿಲ್ಲಾ ಅಧ್ಯಕ್ಷ ಭಾರತೀಶ್, ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಚಲನ್ ಕುಮಾರ್, ಮಹೇಶ್ ಜೈನಿ, ವಿ.ಕೆ.ಲೋಕೇಶ್ , ಶಕ್ತಿ ಕೇಂದ್ರ ಅಧ್ಯಕ್ಷರಾದ ಮಧು, ದೇಶರಾಜ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಪದಾಧಿಕಾರಿಗಳು, ಮೋರ್ಚಾ ಪ್ರಮುಖರು, ಬೂತ್ ಅಧ್ಯಕ್ಷರು ಕಾರ್ಯಕರ್ತರು ಉಪಸ್ಥಿತರಿದ್ದರು.








