Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*
  • *ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*
  • *ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
  • *ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಸಮಾಜ ಸುಧಾರಣೆಗೆ ಶಿವಶರಣ ಹಡಪದ ಅಪ್ಪಣ್ಣನವರ ಕೊಡುಗೆ ಅಪಾರ : ಕೆ.ಎ.ಸೌಮ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಸಮಾಜ ಸುಧಾರಣೆಗೆ ಶಿವಶರಣ ಹಡಪದ ಅಪ್ಪಣ್ಣನವರ ಕೊಡುಗೆ ಅಪಾರ : ಕೆ.ಎ.ಸೌಮ್ಯ*

ಜುಲೈ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.10 NEWS DESK : ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರಿಗೆ ಶಿವಶರಣ ಹಡಪದ ಅಪ್ಪಣ್ಣ ಅವರು ಆತ್ಮೀಯರಾಗಿ, ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ ಎಂದು ಕುಶಾಲನಗರದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಕೆ.ಎ.ಸೌಮ್ಯ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ನಡೆದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶರಣರು 12ನೇ ಶತಮಾನದಲ್ಲಿ ತಮ್ಮ ವಚನಗಳ ಮೂಲಕ ಸಾಮಾಜಿಕ ಬದಲಾವಣೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ಆ ನಿಟ್ಟಿನಲ್ಲಿ ಬಸವಣ್ಣನವರ ಜೊತೆಗೂಡಿ ಹಡಪದ ಅಪ್ಪಣ್ಣ ಅವರು ಸಮಾಜ ಸುಧಾರಣೆಗೆ ಪ್ರಯತ್ನಿಸಿದ್ದಾರೆ ಎಂದು ನುಡಿದರು. ಹಡಪದ ಅಪ್ಪಣ್ಣ ಅವರು 12ನೇ ಶತಮಾನದಲ್ಲಿ ಧಾರ್ಮಿಕ, ಸಾಮಾಜಿಕವಾಗಿ ಎಲ್ಲರನ್ನು ಮೇಲೆತ್ತುವಲ್ಲಿ ಶ್ರಮಿಸಿದ್ದಾರೆ. ಎಲ್ಲರಿಗೂ ಸಮಾನತೆ ಕಲ್ಪಿಸಲು ಶ್ರಮಿಸಿದ್ದಾರೆ. ಕಂದಾಚಾರವನ್ನು ಗಟ್ಟಿಯಾಗಿ ಪ್ರಶ್ನಿಸುವ ಮೂಲಕ ಅಸಮಾನತೆ ಹೋಗಲಾಡಿಸಲು ಶ್ರಮಿಸಿದ್ದಾರೆ ಎಂದರು. ಹಡಪದ ಅಪ್ಪಣ್ಣ ಅವರ ಕಾಲ ಕ್ರಿ.ಶ.1160 ಎಂದು ಗುರುತಿಸಲಾಗಿದ್ದು, ವಿಜಯಪುರ ಜಿಲ್ಲೆಯ ಬಸವನ ಬಾಗೆವಾಡಿಯ ಬಸಬೀನಾಳ ಅವರ ಜನ್ಮ ಸ್ಥಳವಾಗಿದೆ ಎಂದು ತಿಳಿಸಿದರು. ಹಡಪದ ಅಪ್ಪಣ್ಣ ಅವರ ಇಷ್ಟದೇವರು ಬಸವಪ್ರಿಯ ಕೂಡಲ ಚೆನ್ನಬಸವಣ್ಣ ಎಂಬ ಅಂಕಿತ ನಾಮದ ಮೂಲಕ 250 ಕ್ಕೂ ಹೆಚ್ಚು ವಚನಗಳನ್ನು ಬರೆದಿದ್ದಾರೆ. ಆ ದಿಸೆಯಲ್ಲಿ ವಚನ ಚಳುವಳಿಗೆ ಮಹತ್ತರ ಕೊಡುಗೆ ನೀಡಿದ್ದಾರೆ ಎಂದು ಸೌಮ್ಯ ಹೇಳಿದರು. ಹಡಪ ಎಂದರೆ ಚೀಲ ಎಂದರ್ಥ, ಕಾಯಕವೇ ಕೈಲಾಸ ಎಂಬಂತೆ ಚೀಲದಲ್ಲಿ ಉಪಕರಣ ಇಟ್ಟುಕೊಂಡು ವೃತ್ತಿ ನಡೆಸಿಕೊಂಡು ಹೋಗುತ್ತಿದ್ದರು. ಅನುಭವ ಮಂಟಪದಲ್ಲಿ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಬಲಗೈ ಬಂಟನಂತಿದ್ದು ಹಡಪದ ಅಪ್ಪಣ್ಣ ಅವರು ಕಾರ್ಯನಿರ್ವಹಿಸಿದ್ದಾರೆ ಎಂದರು. ಹಡಪದ ಅಪ್ಪಣ್ಣ ಅವರು ತಮ್ಮ ಜೀವಿತ ಅವಧಿಯಲ್ಲಿ ಬಸವಣ್ಣನವರಿಗೆ ಹತ್ತಿರವಾಗಿದ್ದರು. ನಡೆ ನುಡಿಯಲ್ಲಿ ಬದುಕಿನಲ್ಲಿ ಆದರ್ಶಮಯವಾಗಿದ್ದರು ಎಂದು ಹೇಳಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಮಾತನಾಡಿ 12ನೇ ಶತಮಾನದಲ್ಲಿ ಬಸವಣ್ಣನವರ ಜೊತೆ ಎಲ್ಲಾ ಸಮಾಜದವರು ಸೇರಿ ಸಾಮಾಜಿಕ ಕ್ರಾಂತಿಯನ್ನು ಉಂಟು ಮಾಡಿದರು. ಸಮ ಸಮಾಜ ನಿರ್ಮಾಣಕ್ಕೆ ಎಲ್ಲಾ ವಚನಕಾರರು ಶ್ರಮಿಸಿದ್ದಾರೆ ಎಂದು ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಮಾತನಾಡಿ ಶಿವಶರಣ ಹಡಪದ ಅಪ್ಪಣ್ಣ ಅವರ ಆದರ್ಶಗಳನ್ನು ತಿಳಿದುಕೊಳ್ಳುವಂತಾಗಬೇಕು. ಬಸವಣ್ಣನವರಿಗೆ ಆತ್ಮೀಯರಾಗಿದ್ದ ಹಡಪದ ಅಪ್ಪಣ್ಣ ಅವರು ಮೌಢ್ಯತೆ ಮತ್ತು ಕಂದಾಚಾರ ಹೋಗಲಾಡಿಸಲು ಶ್ರಮಿಸಿದ್ದಾರೆ ಎಂದರು. ವೈಚಾರಿಕತೆ ಹಾಗೂ ವೈಜ್ಞಾನಿಕತೆಗೆ ಒತ್ತು ನೀಡಿದ್ದ ಹಡಪದ ಅಪ್ಪಣ್ಣ ಅವರು ಅನುಭವ ಮಂಟಪದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು ಎಂದು ನುಡಿದರು. ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೆ.ಎಸ್.ದೊರೇಶ್, ತಹಶೀಲ್ದಾರರಾದ ಪ್ರವೀಣ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪ ಯೋಜನಾ ಸಮನ್ವಯಾಧಿಕಾರಿ ಎಂ.ಕೃಷ್ಣಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಮಣಜೂರು ಮಂಜುನಾಥ್, ಬಿ.ಸಿ.ಶಂಕರಯ್ಯ, ರಮ್ಯ, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*

ಮಾರ್ಚ್ 22, 2026

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.22 : ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡುಬಿಟ್ಟು ಗ್ರಾಮಸ್ಥರಲ್ಲಿ…

*ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*

ಮಾರ್ಚ್ 22, 2026

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026

*ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.