Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ : ಸೈನ್ಯ, ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಪ್ರಗತಿಯ ಪ್ರತೀಕ : ಸಿಎಂ ಸಿದ್ದರಾಮಯ್ಯ ಮೆಚ್ಚುಗೆ
ಇತ್ತೀಚಿನ ಸುದ್ದಿಗಳು ಕರ್ನಾಟಕ

ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ : ಸೈನ್ಯ, ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಪ್ರಗತಿಯ ಪ್ರತೀಕ : ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಜುಲೈ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಜು.12 NEWS DESK : ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ, ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಯಾವುದೇ ಸಂಘಟನೆ 25 ವರ್ಷ ಪೂರೈಸಿದರೆ ಅದು ದೊಡ್ಡ ಯಶಸ್ಸು. ಕರ್ನಾಟಕ ರಾಜ್ಯ ಅಹಲ್ಯಾ ಬಾಯಿ ಹೋಳ್ಕರ್ ಮಹಿಳಾ ಸಂಘ ಅತ್ಯಂತ ಯಶಸ್ವಿ ಆಗಿದೆ. ಇದಕ್ಕಾಗಿ ಶ್ರಮಿಸಿದ ಯಲ್ಲಮ್ಮ ಮತ್ತು ಜೊತೆಗಿರುವ ಪ್ರತಿಯೊಬ್ಬರೂ ಅಭಿನಂದನಾರ್ಹರು ಎಂದರು.  ಶಿಕ್ಷಣ-ಸಂಘಟನೆ-ಹೋರಾಟ ಅಂಬೇಡ್ಕರ್ ಅವರು ಶೋಷಿತ ಜಾತಿ-ಸಮುದಾಯಗಳಿಗೆ ಕೊಟ್ಟಿರುವ ಮಂತ್ರ. ಶೂದ್ರರು ಮತ್ತು ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಆದರೆ ಅಂಬೇಡ್ಕರ್ ಅವರ ಕಾರಣದಿಂದ ಶೂದ್ರ ಮತ್ತು ಮಹಿಳಾ ಕುಲಕ್ಕೆ ಶಿಕ್ಷಣ ಕಲಿಯುವ ಅವಕಾಶ ಒದಗಿ ಬಂತು. ಇದಕ್ಕೆ ನಮ್ಮ ಸಂವಿಧಾನ ನೀಡಿದ ಕಡ್ಡಾಯ ಶಿಕ್ಷಣ ಕಾನೂನು ನೆರವಾಯಿತು ಎಂದರು. ಕುರುಬರಿಗೆ ಅಕ್ಷರ ಹತ್ತಲ್ಲ, ಶಿಕ್ಷಣ ಏಕೆ ಎಂದು ನಮ್ಮ ಅಜ್ಜಿ ಹೇಳುತ್ತಿದ್ದರು. ಆದರೆ, ನಾನು ಶಾಲೆಗೆ ಹೋಗಿ ಕಾನೂನು ಪದವಿ ಪಡೆದು ಮುಖ್ಯಮಂತ್ರಿಯೂ ಆದೆ. ನಾನು ಶಾಲೆಗೆ ಹೋಗಿ ಶಿಕ್ಷಣ ಕಲಿಯುವ ಅವಕಾಶ ಉಪಯೋಗಿಸಿಕೊಳ್ಳದಿದ್ದರೆ ನಾನೂ ಹಸು, ಕುರಿ ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ರಾಣಿ ಅಹಲ್ಯಾ ಬಾಯಿ ಅವರ ಶಿಕ್ಷಣ ಕ್ರಾಂತಿ ಈ ಮಹಿಳಾ ಸಂಘಟನೆ ಸೇರಿದಂತೆ ಎಲ್ಲರಿಗೂ ಪ್ರೇರಣೆ ಆಯಿತು. ರಾಣಿ 20 ವರ್ಷ ಅಧಿಕಾರದಲ್ಲಿದ್ದರೂ ತನ್ನ ಸಾಮ್ರಾಜ್ಯ ಉಳಿಸಲು ಅಗತ್ಯವಾದ ಎಲ್ಲಾ ಅರ್ಹತೆಗಳನ್ನು ಬೆಳೆಸಿಕೊಂಡಿದ್ದರೂ, ಸಾಮ್ರಾಜ್ಯ ವಿಸ್ತರಿಸುವ ಹಪಾಹಪಿ ಇರಲಿಲ್ಲ. ಖಜಾನೆ ತುಂಬಿದ್ದರೂ ಸರಳ ಜೀವನ ನಡೆಸುತ್ತಾ, ಸುಸ್ಥಿರ ಆಡಳಿತ, ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಿದ್ದ ರಾಣಿ ಅಹಲ್ಯಾ ಬಾಯಿ ಅವರು ಬಾಲ್ಯ ವಿವಾಹ ನಿಲ್ಲಿಸುವ ಮೂಲಕ ಸಾಮಾಜಿಕ ಬದಲಾವಣೆಯಲ್ಲೂ ಪ್ರಮುಖ ಪಾತ್ರ ವಹಿಸಿದರು. ಜಾತ್ಯತೀತ ಮನೋಭಾವ ಹೊಂದಿದ್ದ ಅಹಲ್ಯಾ ಬಾಯಿ ಆಗಲೇ ಅಂತರ್ಜಾತಿ ವಿವಾಹ ಮಾಡಿಸಿದ್ದರು ಎಂದು ಹೇಳಿದರು. ಮಹಿಳೆಯರ ಸಬಲೀಕರಣಕ್ಕೆ ನಮ್ಮ ಸರ್ಕಾರ ಗೃಹಲಕ್ಷ್ಮಿ, ಶಕ್ತಿ ಯೋಜನೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದಾಗಿದೆ. ಇದರಿಂದ ಸಮಾಜಕ್ಕೆ, ಮಹಿಳಾ ಕುಲಕ್ಕೆ ಶಕ್ತಿ ಬಂದಿದೆಯೇ ಹೊರತು ಯಾರೂ ಸೋಮಾರಿಗಳಾಗಿಲ್ಲ ಎಂದರು.  ಇದೇ ಸಂದರ್ಭ ರಾಜ್ಯ ಅಹಲ್ಯಾಬಾಯಿ ಮಹಿಳಾ ಸಂಘಕ್ಕೆ ಬೆಂಗಳೂರಿನಲ್ಲಿ ಜಮೀನು ನೀಡಲಾಗುವುದು ಎಂದು ಸಿ.ಎಂ ಘೋಷಣೆ ಮಾಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮದಲಾಪುರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮಾಲಿನ್ಯ ಮುಕ್ತ ದೀಪಾವಳಿ ಆಚರಣೆಯ ಸಂಕಲ್ಪ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.9: ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಇಕೋ ಕ್ಲಬ್, ಭಾರತ್ ಸ್ಕೌಟ್ಸ್ ಮತ್ತು…

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಪೆಟ್ರೋಲ್‌ಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥನಾಲ್ ಮಿಶ್ರಣ: ಕೇಂದ್ರದ ವಿರುದ್ಧ ಎಂ. ಲಕ್ಷ್ಮಣ್ ಆರೋಪ

ನವೆಂಬರ್ 9, 2026

ನ.17ರಂದು ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ

ನವೆಂಬರ್ 9, 2026

7ನೇ ಹೊಸಕೋಟೆಯಲ್ಲಿ ಬೃಹತ್ ರಕ್ತದಾನ ಶಿಬಿರ: 40 ಮಂದಿ ರಕ್ತದಾನ

ನವೆಂಬರ್ 9, 2026

ನ.12ರಂದು ಮಡಿಕೇರಿಯ ಶ್ರೀ ವಿಜಯ ವಿನಾಯಕ ದೇವಾಲಯದ 28ನೇ ವಾರ್ಷಿಕೋತ್ಸವ

ನವೆಂಬರ್ 9, 2026

ವಿವಿಧ ವೇದಿಕೆಗಳಲ್ಲಿ ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ ತಂಡದ ಸಾಧನೆಯ ಮೆರುಗು

ನವೆಂಬರ್ 9, 2026

ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಲಕ್ಷ್ಮಿ ಪೂಜೆ

ನವೆಂಬರ್ 9, 2026

ಬೆಕ್ಕೆ ಸುಡ್ಲೂರಿನಲ್ಲಿ ಪ್ರಥಮ ಬಾರಿಗೆ ‘ಒತೋರ್ಮೆ’ ಸಂಭ್ರಮ; ನೂತನ ಮುಖ್ಯದ್ವಾರ, ಬಸ್ ನಿಲ್ದಾಣ ಉದ್ಘಾಟನೆ; ಕ್ರೀಡಾ-ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು

ನವೆಂಬರ್ 9, 2026

ರಾಜ್ಯಮಟ್ಟದ ಅಥ್ಲೆಟಿಕ್ಸ್ ರಿಲೇ ಸ್ಪರ್ಧೆಯಲ್ಲಿ ಜಿಲ್ಲೆಗೆ 7ನೇ ಸ್ಥಾನ: ಕಾವೇರಿ ಶಾಲೆಯ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.