Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*
  • *ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*
  • *ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 
  • *ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತೊರೆನೂರು : ವಚನ ಸಾಹಿತ್ಯಕ್ಕೆ ಹಳಕಟ್ಟಿ ಕೊಡುಗೆ ಅಪಾರ : ಪ್ರೊ. ಅಶೋಕ ಸಂಗಪ್ಪ ಆಲೂರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತೊರೆನೂರು : ವಚನ ಸಾಹಿತ್ಯಕ್ಕೆ ಹಳಕಟ್ಟಿ ಕೊಡುಗೆ ಅಪಾರ : ಪ್ರೊ. ಅಶೋಕ ಸಂಗಪ್ಪ ಆಲೂರ*

ಜುಲೈ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.12 NEWS DESK : ಕಾಯಕ ಮಹತ್ವ, ತ್ರಿವಿಧ ದಾಸೋಹ ಪರಿಕಲ್ಪನೆ, ಸಾಮಾಜಿಕ ಸಮಾನತೆ, ಸ್ತ್ರೀ ಸಮಾನತೆ, ದಯೆ ಮತ್ತು ಧರ್ಮದ ಪರಿಕಲ್ಪನೆ, ಅನುಭಾವ, ಸಮ ಸಮಾಜದ ನಿರ್ಮಾಣ ಮೊದಲಾದ ವಿಶ್ವ ಮೌಲಿಕ ಆಶಯಗಳನ್ನು ಶರಣರ ವಚನಗಳಲ್ಲಿ ಕಾಣಬಹುದಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರ ಅಭಿಪ್ರಾಯಪಟ್ಟರು. ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಪುಣ್ಣಿಮೆ ಪೂಜಾ ಕಾರ್ಯಕ್ರಮ, ಶಿವಾನುಭವ ಗೋಷ್ಠಿ ಮತ್ತು ಫ.ಗು‌.ಹಳಕಟ್ಟಿಯವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಸವಾದಿ ಶರಣರು ನಡೆ-ನುಡಿ ಒಂದಾಗಿಸಿಕೊಂಡು ಬದುಕಿದವರು. ಕ್ರಿ.ಶ. ಹನ್ನೆರಡನೇ ಶತಮಾನದಲ್ಲಿಯೇ ಕರ್ಮಠತನದ ಸಾಮಾಜಿಕ ವ್ಯವಸ್ಥೆಯ ವರ್ಗ-ಜಾತಿ-ಲಿಂಗ ತಾರತಮ್ಯವನ್ನು ನೇರವಾಗಿ ವಿರೋಧಿಸಿ ಸಮ ಸಮಾಜದ ಮಾನವೀಯ ಮೌಲ್ಯಗಳನ್ನು ಇಡೀ ಜಗತ್ತಿಗೆ ಸಾರಿದರು. ಜನಪರವಾದ ಮತ್ತು ಲೋಕಕಲ್ಯಾಣಕರವಾದ ಚಿಂತನೆಗಳು ಬಸವಾದಿ ಶರಣರ ವಚನಗಳಲ್ಲಿ ಕಂಡುಬರುತ್ತದೆ. ವಚನ ಪಿತಾಮಹ, ವಚನ ಕಮ್ಮಟ, ರಾವ್ ಬಹದ್ದೂರ್, ರಾವ್ ಸಾಹೇಬ್ ಎಂದೇ ಪ್ರಸಿದ್ಧರಾಗಿದ್ದ  ಫ.ಗು. ಹಳಕಟ್ಟಿಯವರು ತಮ್ಮ ವಕೀಲ ವೃತ್ತಿಯನ್ನು ತ್ಯಜಿಸಿ ಇಡೀ ತಮ್ಮ ಬದುಕನ್ನು ಶರಣರ ವಚನಗಳನ್ನು ಸಂಗ್ರಹಿಸಿ ಪ್ರಕಟಿಸುವುದಕ್ಕಾಗಿ ಮುಡಿಪಾಗಿಟ್ಟವರು. ತಮ್ಮ ಬದುಕಿನಲ್ಲಿ ಎದುರಾದ ಹಲವಾರು ಕಷ್ಟ ಕಾರ್ಪಣ್ಯದ ಸಂದಿಗ್ಧತೆಯ ಪರಿಸ್ಥಿತಿಗಳ ನಡುವೆಯೂ ಯಾವುದೇ ಪ್ರತಿಫಲಾಪೇಕ್ಷೆ ಬಯಸದೆ ಬಸವಾದಿ ಶರಣರ ಸಮಗ್ರ ವಚನಗಳನ್ನು ಕನ್ನಡ ನಾಡಿಗೆ ನೀಡಿದಂತಹ ನಿಸ್ವಾರ್ಥ ಸೇವೆ ಅವರದು ಎಂದು ಹೇಳಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿಯವರು ಆಶೀರ್ವಚನ ನೀಡುತ್ತಾ, ತಮ್ಮ ವಚನಗಳ ಮೂಲಕ ಅಂತರಂಗದ ಆತ್ಮಸಾಕ್ಷಿಯಾಗಿ ಇಡೀ ಮನುಕುಲಕ್ಕೆ ಸಾರ್ಥಕ ಜೀವನದ ದಾರ್ಶನಿಕ ಮೌಲ್ಯಗಳನ್ನು ಸಾರಿದ ಶ್ರೇಯಸ್ಸು ಈ ನಾಡಿನ ಶರಣರಿಗೆ ಸಲ್ಲುತ್ತದೆ ಎಂದು ತಿಳಿಸಿದರು.  ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು  ವಹಿಸಿದ್ದ ತೊರೆನೂರು ವಿರಕ್ತ ಮಠದ ಪೀಠಾಧ್ಯಕ್ಷರಾದ ಶ್ರೀ ಮಲ್ಲೇಶ ಸ್ವಾಮಿಗಳು ಆಶೀರ್ವಚನ ನೀಡಿದರು. ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಕೊಡಗು ಘಟಕದ ಅಧ್ಯಕ್ಷರಾದ  ಹೆಚ್.ವಿ. ಶಿವಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಪದಾಧಿಕಾರಿಗಳು ಮತ್ತು ಮಠದ ಭಕ್ತ ಮಂಡಳಿ ಹಾಗೂ ಅಕ್ಕನ ಬಳಗದವರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 3: ವಲಯ ಮಟ್ಟದ ಕ್ರೀಡಾಕೂಟಗಳಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ…

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*

ಸೆಪ್ಟೆಂಬರ್ 2, 2026

*ಸೆ.5 ಮತ್ತು 6 ರಂದು ಮಡಿಕೇರಿಯಲ್ಲಿ ‘KOA-MYCON’ ಮಧ್ಯವಾರ್ಷಿಕ ಸಮ್ಮೇಳನ*

ಸೆಪ್ಟೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.