Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆ : 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆ : 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ

ಜುಲೈ 14, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು, ಜು.14 NEWS DESK : ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ಮುಖ್ಯಮಂತ್ರಿ ವಿವರಿಸಿದರು. :: ಸಿಗಂದೂರು ಕಾರ್ಯಕ್ರಮ-ಶಿಷ್ಠಾಚಾರ ಪಾಲನೆಯಾಗಿಲ್ಲ:: ಸಿಗಂದೂರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಕಾರ್ಯಕ್ರಮದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ. ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದರು. ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಸಂಬಂಧಪಟ್ಟ ಸಾಗರ ತಾಲ್ಲೂಕಿನ ಇಂದಿನ ಕಾರ್ಯಕ್ರಮವನ್ನು ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ. ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವೇ. ಇಲ್ಲಿ ಶಿಷ್ಠಾಚಾರದ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಠಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲಿ, ಸಂಬಂಧಪಟ್ಟ ಇಲಾಖಾ ಸಚಿವರನ್ನಾಗಲೀ, ಸ್ಥಳೀಯ ಶಾಸಕರನ್ನಾಗಲೀ ಆಮಂತ್ರಣ ನೀಡಲಾಗಿಲ್ಲ ಎಂದರು. :: ಕನ್ನಡದ ಮೇರುನಟಿ ಬಿ.ಸರೋಜಾದೇವಿ ನಿಧನ: ಮುಖ್ಯಮಂತ್ರಿಗಳ ಸಂತಾಪ :: ಭಾರತೀಯ ಚಿತ್ರರಂಗದ ಖ್ಯಾತ ಚಿತ್ರನಟಿ ಬಿ.ಸರೋಜಾದೇವಿ ಅವರ ನಿಧನದ ಬಗ್ಗೆ ಸಂತಾಪ ಸೂಚಿಸುತ್ತಾ ಮಾತನಾಡಿದ ಮುಖ್ಯಮಂತ್ರಿಗಳು, ಬಿ.ಸರೋಜಾದೇವಿಯವರು ಕನ್ನಡ ನಾಡು ಕಂಡ ಪ್ರತಿಭಾವಂತ ಕಲಾವಿದರಾಗಿದ್ದರು. ಬಹುಭಾಷಾ ನಟಿಯಾಗಿದ್ದ ಅವರು ಅಪ್ರತಿಮ ಕಲಾವಿದರಾಗಿದ್ದು, ಅವರ ಸಾವಿನಿಂದ ಇಡೀ ಕಲಾಜಗತ್ತು ಬಡವಾಗಿದೆ. ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬವರ್ಗ ಹಾಗೂ ಅಭಿಮಾನಿ ಬಳಗಕ್ಕೆ ದು:ಖವನ್ನು ಭರಿಸುವ ಶಕ್ತಿ ತುಂಬಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.