Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಗ್ರಾಮಗಳ ಅಭಿವೃದ್ಧಿಗೆ ಅಧಿಕಾರಿಗಳ ದಕ್ಷತೆ-ಪ್ರಾಮಾಣಿಕತೆ ಅಗತ್ಯವಿದೆ : ಕೆ.ಮೊಣ್ಣಪ್ಪ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗ್ರಾಮಗಳ ಅಭಿವೃದ್ಧಿಗೆ ಅಧಿಕಾರಿಗಳ ದಕ್ಷತೆ-ಪ್ರಾಮಾಣಿಕತೆ ಅಗತ್ಯವಿದೆ : ಕೆ.ಮೊಣ್ಣಪ್ಪ

ಜುಲೈ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜು.15 NEWS DESK : ಸಮಾಜದ ಉತ್ತಮ ಅಭಿವೃದ್ಧಿಗೆ ಮತ್ತು ಗ್ರಾಮಗಳ ಮೂಲಭೂತ ಸೌಕರ್ಯಗಳಿಗೆ ಅಧಿಕಾರಿಗಳು ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿದಾಗ ಗ್ರಾಮಗಳು ಅಭಿವೃದ್ಧಿಯಾಗಲು ಸಾಧ್ಯ ಎಂದು ಹೊದ್ದೂರು ಗ್ರಾಮ ಪಂಚಾಯಿತಿ ಸದಸ್ಯ ಮತ್ತು ಕಾನ್ಸೀರಾಂಜೀ ನಗರದ ಸ್ಥಾಪಕಾಧ್ಯಕ್ಷ ಕೆ.ಮೊಣ್ಣಪ್ಪ ಅಭಿಪ್ರಾಯಪಟ್ಟರು. ಸಮಾಜ ಕಲ್ಯಾಣ ಇಲಾಖೆಯ ಕೇಂದ್ರ ಕಚೇರಿಯಲ್ಲಿ ನಿರ್ದೇಶಕರಾದ ಶೇಖರ್ ಅವರನ್ನು ಹೊದ್ದೂರು ಗ್ರಾಮ ಪಂಚಾಯಿತಿಯ ಸದಸ್ಯರು ಮತ್ತು ಕಾನ್ಸೀರಾಂಜೀ ನಗರದ ಪಾಲೆಮಾಡುವಿನ ನಿವಾಸಿಗಳ ಪರವಾಗಿ ಸನ್ಮಾನಿಸಿ ಮಾತನಾಡಿದರು. ಅಧಿಕಾರಿಗಳನ್ನು ಸರಕಾರದ ಮಾನದಂಡದಂತೆ ಕರ್ತವ್ಯದ ಧ್ಯೇಯೋದ್ದೇಶದಿಂದ ಪ್ರಮಾಣ ವಚನ ಮಾಡಿ ಬರುತ್ತಾರೆ. ಸರ್ಕಾರಿ ಹುದ್ದೆಯಲ್ಲಿರುವ ಶೇ.75 ರಷ್ಟು ಅಧಿಕಾರಿಗಳು ನಾಮಕಾವಸ್ಥೆಗೆ ಕೆಲಸ ಮಾಡುತ್ತಾ ದರ್ಪ ಮತ್ತು ಬೇಜವಾಬ್ದಾರಿತನದಿಂದ ಕೂಡಿದ್ದು ಅಧಿಕಾರಿಗಳ ಭ್ರಷ್ಟಾಚಾರವು ತಾಂಡವವಾಡುತ್ತಿದೆ. ಇಂತಹ ಅಧಿಕಾರಿಗಳನ್ನು ಸಮಾಜವು ಸೂಕ್ಷ್ಮವಾಗಿ ನೋಡುತ್ತಿದೆ ಎಂಬ ಅರಿವು ಮೂಡಿಸಬೇಕು. ಆದ್ದರಿಂದ, ನಿಷ್ಠಾವಂತ ಅಧಿಕಾರಿಗಳಿಗೆ ಸನ್ಮಾನ ಅಭಿನಂದನೆಯನ್ನು ಸಲ್ಲಿಸುವ ಮೂಲಕ ಅಧಿಕಾರಿಗಳ ಜವಾಬ್ದಾರಿ ಮತ್ತು ಕರ್ತವ್ಯವನ್ನು ಹೆಚ್ಚಿಸಿ ಪ್ರಜ್ನಾವಂತ ಸಮಾಜಕ್ಕೆ ಮತ್ತು ಅಧಿಕಾರಿಗಳಿಗೆ ತಿಳಿಯಪಡಿಸುವ ಅಗತ್ಯವಿದೆ ಎಂದರು. ಕಾನ್ಸಿರಾಂಜೀ ನಗರ ಪಾಲೆಮಾಡುವಿನಂತಹ ಕುಗ್ರಾಮಗಳ ಅಭಿವೃದ್ಧಿಗೆ ಮತ್ತು ಮೂಲಭೂತ ಸೌಕರ್ಯಗಳ ನೆರವಿಗೆ ಶೇಖರ್ ಅವರ ದಕ್ಷತೆಯ ಕರ್ತವ್ಯ ನಿಷ್ಠೆ ಮತ್ತು ಪ್ರೀತಿ ಪೂರಕವಾಗಿರುತ್ತದೆ. ಇವರಂತ ಅಧಿಕಾರಿಗಳು ಭವಿಷ್ಯದ ಯುವ ಅಧಿಕಾರಿಗಳಿಗೆ ಸ್ಪೂರ್ತಿಯಾಗುತ್ತಾರೆ. ಇಂತಹ ಅಧಿಕಾರಿಗಳು ಜಿಲ್ಲೆಗೆ ಅಗತ್ಯವಿದೆ ಎಂದು ಆಶಯ ವ್ಯಕ್ತಪಡಿಸಿದರು. ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎ.ಹಂಸ ಮಾತನಾಡಿ, ಹೊದ್ದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಕಾರ್ಯಗಳಲ್ಲಿ ಮತ್ತು ಪಾಲೆಮಾಡುವಿನ ವಿಷಯದಲ್ಲಿ ಹೆಚ್ಚಿನ ಮುತೂವರ್ಜಿಯನ್ನು ವಹಿಸಿ ಮೊದಲ ಸರ್ಕಾರಿ ಬಸ್ಸು, ಹಕ್ಕು ಪತ್ರವನ್ನು ನೀಡಿರುವುದು, ಅದೇ ರೀತಿ ನೂತನವಾದ ಕಾಂಕ್ರೀಟ್ ರಸ್ತೆಗಳು, ಹೀಗೆ ಅಭಿವೃದ್ಧಿ ಕಾರ್ಯಗಳಲ್ಲಿ ಶೇಖರ್ ಅವರು ಕರ್ತವ್ಯ ನಿಷ್ಠೆಯನ್ನು ಮೆರೆದಿದ್ದಾರೆ ಎಂದು ಸಂತಸಪಟ್ಟರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ನಿರ್ದೇಶಕ ಶೇಖರ್ ಅವರು ಮಾತನಾಡಿ, ಅಧಿಕಾರಿಗಳು ಉತ್ತಮ ಕರ್ತವ್ಯಗಳನ್ನು ನಿರ್ವಹಿಸಲು ಶಾಸಕರಾದ ಡಾ. ಮಂತರ್ ಗೌಡ ಅವರು ಮುಕ್ತವಾದ ಸ್ವಾತಂತ್ರ್ಯವನ್ನು ನೀಡಿದ್ದು, ಅವರಿಗೆ ಧನ್ಯವಾದ ತಿಳಿಸುತ್ತೇನೆ ಮತ್ತು ಹೊದ್ದೂರು ಗ್ರಾಮ ಪಂಚಾಯಿತಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ವಿನೂತನವಾಗಿ ಅನುಷ್ಠಾನಕ್ಕೆ ತರುತ್ತದೆ ಇದೆ ರೀತಿ ಜಿಲ್ಲೆಯ ಎಲ್ಲಾ ಪಂಚಾಯಿತಿಗಳು ಬೆಳೆಯಬೇಕು ಎಂದು ಆಶಯ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಹೊದ್ದೂರು ಗ್ರಾಮ ಪಂಚಾಯಿತಿಯ ಸದಸ್ಯರಾದ ಎಂ.ಬಿ.ಹಮೀದ್, ಕುಸುಮಾವತಿ ಆನಂದ್, ನರೇಗಾ ಯೋಜನೆಯ ತಾಲೂಕು ಸಹ ನಿರ್ದೇಶಕರಾದ ಹೇಮಂತ್, ಇಲಾಖೆಯ ಸಿಬ್ಬಂದಿ ವರ್ಗದವರು ಕಾನ್ಸಿರಾಂಜಿ ನಗರ ಪಾಲೆಮಾಡುವಿನ ನಿವಾಸಿಗಳು ಹಾಜರಿದ್ದರು.
ಅಭಿವೃದ್ಧಿ ಅಧಿಕಾರಿಗಳಾದ ಎ.ಎ.ಅಬ್ದುಲಾ ಸ್ವಾಗತಿಸಿ, ವಂದಿಸಿದರು.

ವರದಿ :: ಎಂ ರಂಜಿತ್ ಮೌರ್ಯ 

Follow us Follow us
Share. WhatsApp Facebook Twitter Email Telegram Copy Link

Related Posts

ಮದಲಾಪುರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮಾಲಿನ್ಯ ಮುಕ್ತ ದೀಪಾವಳಿ ಆಚರಣೆಯ ಸಂಕಲ್ಪ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.9: ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಇಕೋ ಕ್ಲಬ್, ಭಾರತ್ ಸ್ಕೌಟ್ಸ್ ಮತ್ತು…

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಪೆಟ್ರೋಲ್‌ಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥನಾಲ್ ಮಿಶ್ರಣ: ಕೇಂದ್ರದ ವಿರುದ್ಧ ಎಂ. ಲಕ್ಷ್ಮಣ್ ಆರೋಪ

ನವೆಂಬರ್ 9, 2026

ನ.17ರಂದು ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ

ನವೆಂಬರ್ 9, 2026

7ನೇ ಹೊಸಕೋಟೆಯಲ್ಲಿ ಬೃಹತ್ ರಕ್ತದಾನ ಶಿಬಿರ: 40 ಮಂದಿ ರಕ್ತದಾನ

ನವೆಂಬರ್ 9, 2026

ನ.12ರಂದು ಮಡಿಕೇರಿಯ ಶ್ರೀ ವಿಜಯ ವಿನಾಯಕ ದೇವಾಲಯದ 28ನೇ ವಾರ್ಷಿಕೋತ್ಸವ

ನವೆಂಬರ್ 9, 2026

ವಿವಿಧ ವೇದಿಕೆಗಳಲ್ಲಿ ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ ತಂಡದ ಸಾಧನೆಯ ಮೆರುಗು

ನವೆಂಬರ್ 9, 2026

ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಲಕ್ಷ್ಮಿ ಪೂಜೆ

ನವೆಂಬರ್ 9, 2026

ಬೆಕ್ಕೆ ಸುಡ್ಲೂರಿನಲ್ಲಿ ಪ್ರಥಮ ಬಾರಿಗೆ ‘ಒತೋರ್ಮೆ’ ಸಂಭ್ರಮ; ನೂತನ ಮುಖ್ಯದ್ವಾರ, ಬಸ್ ನಿಲ್ದಾಣ ಉದ್ಘಾಟನೆ; ಕ್ರೀಡಾ-ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು

ನವೆಂಬರ್ 9, 2026

ರಾಜ್ಯಮಟ್ಟದ ಅಥ್ಲೆಟಿಕ್ಸ್ ರಿಲೇ ಸ್ಪರ್ಧೆಯಲ್ಲಿ ಜಿಲ್ಲೆಗೆ 7ನೇ ಸ್ಥಾನ: ಕಾವೇರಿ ಶಾಲೆಯ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.