
ಮಡಿಕೇರಿ ಜು.16 NEWS DESK : ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಘಟಕದ ರಾಷ್ಟ್ರೀಯ ಸಲಹಾ ಸಮಿತಿಯ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪಾಲ್ಗೊಂಡಿದ್ದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಎಐಸಿಸಿ ಓಬಿಸಿ ಸಲಹಾ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಗೊಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಸಭೆಯಲ್ಲಿ, ಹಿಂದುಳಿದ ವರ್ಗಗಳ ಏಳಿಗೆಯ ಬಗ್ಗೆ ಹಲವು ಪ್ರಮುಖ ಚರ್ಚೆ ನಡೆಯಿತು. ಸಭೆಯಲ್ಲಿ ಎಐಸಿಸಿ ಒಬಿಸಿ ಘಟಕದ ರಾಷ್ಟ್ರೀಯ ಅಧ್ಯಕ್ಷ ಡಾ.ಅನಿಲ್ ಜೈಹಿಂದ್, ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಿರಿಯ ನಾಯಕರುಗಳಾದ ಅಶೋಕ್ ಗೆಲ್ಲಾಟ್, ಸಚಿವ ಎನ್.ಎಸ್ ಬೋಸ್ ರಾಜ್, ಡಾ. ಎಂ.ವೀರಪ್ಪ ಮೊಯ್ಲಿ, ವಿ.ನಾರಾಯಣಸ್ವಾಮಿ ಹಾಗೂ ಸಿಡಬ್ಲ್ಯೂಸಿ ಸದಸ್ಯರು ಭಾಗವಹಿಸಿದರು.








