Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಡಿಕೆ : ಆ.24ಕ್ಕೆ ವಿಚಾರಣೆ ಮುಂದೂಡಿಕೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಡಿಕೆ : ಆ.24ಕ್ಕೆ ವಿಚಾರಣೆ ಮುಂದೂಡಿಕೆ

ಜುಲೈ 23, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜು.23 NEWS DESK : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಕೆಂದು ಒತ್ತಾಯಿಸುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ ಹಾರ್ವರ್ಡ್ ವಿದ್ವಾಂಸ, ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಜೋಶಿ ಅವರ ಸಮ್ಮುಖದಲ್ಲಿ ನಡೆಯಿತು. ನ್ಯಾಯಾಲಯವು ಮುಂದಿನ ವಿಚಾರಣೆಯನ್ನು 2025 ಆ.24 ಕ್ಕೆ ನಿಗಧಿ ಪಡಿಸಿತು. ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರ ನೇತೃತ್ವದಲ್ಲಿ ವಕೀಲರುಗಳಾದ ಕಿರಣ್ ನಾರಾಯಣ್, ಸತ್ಯ ಸಭರ್ವಾಲ್, ಪಲ್ಲಕ್ ಪಲ್ಲಕ್ ಬಿಷ್ಣೋಯ್, ಮಾಧಿಯಾ ನಯೀಮ್ ಹಾಗೂ ಅನನ್ಯ ದೀಕ್ಷಿತ್ ಉಪಸ್ಥಿತರಿದ್ದರು. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಅರ್ಜಿದಾರ ಸಂಖ್ಯೆ-2 ಆಗಿದ್ದಾರೆ. ಕೇಂದ್ರ ಗೃಹ ಮಂತ್ರಾಲಯ, ಕೇಂದ್ರ ಕಾನೂನು ಮಂತ್ರಾಲಯ ಮತ್ತು ಕರ್ನಾಟಕ ರಾಜ್ಯವನ್ನು ಪ್ರತಿವಾದಿ ಸಂಖ್ಯೆ ಕ್ರಮವಾಗಿ 1, 2 ಮತ್ತು 3 ಎಂದು ಉಲ್ಲೇಖಿಸಲಾಗಿದೆ. ವಿಚಾರಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎನ್.ಯು.ನಾಚಪ್ಪ ಅವರು, ಆ.24 ರಂದು ಡಾ.ಸುಬ್ರಮಣಿಯನ್ ಸ್ವಾಮಿ ಅವರು ನ್ಯಾಯಾಲಯದಲ್ಲಿ ಸಮಗ್ರ ವಾದ ಮಂಡನೆ ಮಾಡಲಿದ್ದಾರೆ. ಸಂವಿಧಾನದ ಆಶಯಗಳಿಗೆ ಪೂರಕವಾಗಿ ಕಾನೂನು ಹೋರಾಟದಿಂದ ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ನ್ಯಾಯ ಸಿಗಲಿದೆ ಎನ್ನುವ ವಿಶ್ವಾಸವಿದೆ ಎಂದರು. ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್‍ಟಿ ಟ್ಯಾಗ್ ಪಡೆಯುವ ಗುರಿ ಹೊಂದಿದ್ದೇವೆ. ಬೇಡಿಕೆ ತಾರ್ಕಿಕ ಅಂತ್ಯ ಕಾಣುವಲ್ಲಿಯವರೆಗೆ ಹೋರಾಟ ಮುಂದುವರಿಯಲಿದೆ. ಕಳೆದ 35 ವರ್ಷಗಳಿಂದ ಸಿಎನ್‍ಸಿ ಸಂಘಟನೆ ಕೊಡವರ ಸಾಂವಿಧಾನಿಕ ಹಕ್ಕುಗಳಿಗಾಗಿ ಶಾಂತಿಯುತ ಹೋರಾಟವನ್ನು ನಡೆಸಿಕೊಂಡು ಬರುತ್ತಿದೆ. ಕೊಡವರಿಗೆ ಕೊಡವ ಲ್ಯಾಂಡ್ ಬಿಟ್ಟರೆ ಬೇರೆ ಪ್ರದೇಶವಿಲ್ಲ, ಆದ್ದರಿಂದ ಕೊಡವ ಲ್ಯಾಂಡ್ ನ್ನು ಶಾಶ್ವತವಾಗಿ ಉಳಿಸಿಕೊಳ್ಳಲು ಕಾನೂನಿನ ನೆರವು ಕೋರಲಾಗಿದೆ ಎಂದು ತಿಳಿಸಿದರು. ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ, ಸ್ವ-ಆಡಳಿತ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳು, ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ, ವಿಶ್ವ ರಾಷ್ಟ್ರಸಂಸ್ಥೆಯ ಸ್ಥಳೀಯ ಮಾನ್ಯತೆ, ಭಾರತದ ಸಂವಿಧಾನದ ಪರಿಶಿಷ್ಟ ಪಟ್ಟಿಯ ಅಡಿಯಲ್ಲಿ ಸ್ಥಳೀಯ ಆದಿಮಸಂಜಾತ ಕೊಡವ ಏಕ-ಜನಾಂಗೀಯ ಅನಿಮಿಸ್ಟಿಕ್ ಕೊಡವರ ವರ್ಗೀಕರಣ ಇವುಗಳು ಸಿಎನ್‍ಸಿಯ ಪ್ರಮುಖ ಬೇಡಿಕೆಗಳು ಎಂದರು. ವಿಎಚ್‍ಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ, ರೇಖಾ ನಾಚಪ್ಪ, ಕಲಿಯಂಡ ಪ್ರಕಾಶ್, ಅರೆಯಡ ಗಿರೀಶ್, ನಂದೇಟಿರ ರವಿ, ಕಾಟುಮಣಿಯಂಡ ಉಮೇಶ್, ಕಾಂಡೇರ ಸುರೇಶ್, ಬೇಪಡಿಯಂಡ ದಿನು, ಬೇಪಡಿಯಂಡ ಬಿದ್ದಪ್ಪ, ಕಿರಿಯಮಾಡ ಶೆರಿನ್, ಅವರೇಮಾದಂಡ ಚಂಗಪ್ಪ, ವಿಎಚ್‍ಎಸ್ ರಾಜ್ಯಾಧ್ಯಕ್ಷ ನಿಕುಂಜ್ ಶಾ, ವಕೀಲರುಗಳಾದ ಎ.ಕೆ.ವಸಂತ್, ಉಮೇಶ್, ಪ್ರಮುಖರಾದ ಗುರುದತ್ ಶೆಟ್ಟಿ, ನಟರಾಜ್, ರವಿಶಂಕರ್, ಕಾವಡಿಚಂಡ ಮೇದಪ್ಪ, ಶಿವು, ಮಹೇಶ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಅಕ್ಟೋಬರ್ 23 ರಂದು ಪಾಲಿಬೆಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಅಕ್ಟೋಬರ್ 19, 2026

ವಿರಾಜಪೇಟೆಯಿಂದ ತಲಕಾವೇರಿವರೆಗೆ 58 ಕಿ.ಮೀ. ಪಾದಯಾತ್ರೆ; 6ನೇ ವರ್ಷದ ಯಾತ್ರೆಯಲ್ಲಿ 15 ಮಂದಿ ಭಾಗಿ – 58 ಕಿ.ಮೀ. ಭಕ್ತಿಯ ನಡಿಗೆ

ಅಕ್ಟೋಬರ್ 19, 2026

ರಗ್ಬಿ ಇಂಡಿಯಾ ಮಂಡಳಿಗೆ ಕೊಡಗಿನ ತಿಮ್ಮಯ್ಯ ಮಾದಂಡ ಆಯ್ಕೆ; SOM ಚುನಾವಣೆಯಲ್ಲಿ ಮಹತ್ವದ ಗೆಲುವು; ಭಾರತೀಯ ರಗ್ಬಿ ಕ್ರೀಡೆಯ ಅಭಿವೃದ್ಧಿಗೆ ಹೊಸ ಜವಾಬ್ದಾರಿ

ಅಕ್ಟೋಬರ್ 19, 2026

ವಿರಾಜಪೇಟೆಯಿಂದ ತಲಕಾವೇರಿವರೆಗೆ 58 ಕಿ.ಮೀ. ಪಾದಯಾತ್ರೆ; 6ನೇ ವರ್ಷದ ಯಾತ್ರೆಯಲ್ಲಿ 15 ಮಂದಿ ಭಾಗಿ – 58 ಕಿ.ಮೀ. ಭಕ್ತಿಯ ನಡಿಗೆ

ಅಕ್ಟೋಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.19: ಕರುನಾಡಿನ ಜೀವನದಿ ಹಾಗೂ ಕೊಡವರ ಕುಲದೇವಿ ತಾಯಿ ಕಾವೇರಿಯ ಪವಿತ್ರ ತೀರ್ಥೋದ್ಭವದ ಹಿನ್ನೆಲೆಯಲ್ಲಿ ವಿರಾಜಪೇಟೆಯಿಂದ…

ರಗ್ಬಿ ಇಂಡಿಯಾ ಮಂಡಳಿಗೆ ಕೊಡಗಿನ ತಿಮ್ಮಯ್ಯ ಮಾದಂಡ ಆಯ್ಕೆ; SOM ಚುನಾವಣೆಯಲ್ಲಿ ಮಹತ್ವದ ಗೆಲುವು; ಭಾರತೀಯ ರಗ್ಬಿ ಕ್ರೀಡೆಯ ಅಭಿವೃದ್ಧಿಗೆ ಹೊಸ ಜವಾಬ್ದಾರಿ

ಅಕ್ಟೋಬರ್ 19, 2026

ಶ್ರೀ ಕಾವೇರಿ ಭಕ್ತ ಮಂಡಳಿಯಿಂದ 72ನೇ ವರ್ಷದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 19, 2026

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಾನಿಗೊಳಗಾದ ಮನೆಗೆ ಶಾಸಕ ಪೊನ್ನಣ್ಣ ಭೇಟಿ; ಸಂತ್ರಸ್ತ ಕುಟುಂಬಕ್ಕೆ ಅಗತ್ಯ ಸಾಮಗ್ರಿಗಳ ಕಿಟ್ ವಿತರಣೆ; ಸೂಕ್ತ ಪರಿಹಾರದ ಭರವಸೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ: ಜಾನಪದ ಕಲಾಪ್ರಕಾರಗಳ ಪ್ರದರ್ಶನಕ್ಕೆ ಮನಸೋತ ಜನತೆ; ಜಾನಪದ ಸಂಸ್ಕೃತಿಯ ಉಳಿವಿಗೆ ಹೆಚ್ಚಿನ ಕಾಳಜಿ ಅಗತ್ಯ: ಶಾಸಕ ಎ.ಎಸ್.ಪೊನ್ನಣ್ಣ ಕರೆ; ಕಲಾವಿದರು ಹಾಗೂ ಜಾನಪದ ವಸ್ತು ಸಂಗ್ರಹಕಾರರಿಗೆ ಸನ್ಮಾನ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.