Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
  • *ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*
  • *ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*
  • *ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶುಂಠಿ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿಗಳು ತರಬೇತಿ ಕಾರ್ಯಕ್ರಮ : ಸರಿಯಾದ ನಿರ್ವಹಣೆಯಿಂದ ರೋಗ ನಿಯಂತ್ರಣ ಸಾಧ್ಯ : ಡಾ. ಬಿ.ಎಸ್.ಹರೀಶ್ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶುಂಠಿ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿಗಳು ತರಬೇತಿ ಕಾರ್ಯಕ್ರಮ : ಸರಿಯಾದ ನಿರ್ವಹಣೆಯಿಂದ ರೋಗ ನಿಯಂತ್ರಣ ಸಾಧ್ಯ : ಡಾ. ಬಿ.ಎಸ್.ಹರೀಶ್ ಸಲಹೆ*

ಜುಲೈ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.24 NEWS DESK : ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಂಠಿ ಬೆಳೆಯಲ್ಲಿ ಬೆಂಕಿ ರೋಗ ಕಾಣಿಸಿಕೊಂಡಿದ್ದು, ರೈತರು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದಿದ್ದರೆ ಶೇ.60-70ರಷ್ಟು ಇಳುವರಿ ನಷ್ಠ ಅನುಭವಿಸಬೇಕಾಗುತ್ತದೆ ಎಂದು ಬೆಂಗಳೂರು ತೋಟಗಾರಿಕೆ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ. ಬಿ.ಎಸ್.ಹರೀಶ್ ತಿಳಿಸಿದರು. ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಮೈಸೂರು ತೋಟಗಾರಿಕೆ ಮಹಾವಿದ್ಯಾಲಯ, ಮೈಸೂರು ಕೃಷಿ ತಂತ್ರಜ್ಞರ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಮಹಾವಿದ್ಯಾಲಯದ ಆವರಣದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳ ರೈತರಿಗೆ “ಶುಂಠಿ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿಗಳು” ಕುರಿತು ಆಯೋಜಿಸಿದ್ದ ರೈತರ ತರಬೇತಿ, ಸಂವಾದ ಹಾಗೂ ವಸ್ತುಪ್ರದರ್ಶನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು. ಶುಂಠಿ ಬೆಳೆಯಲ್ಲಿ ಈಗಾಗಲೆ ಬೆಂಕಿ ರೋಗ ಕಾಣಿಸಿಕೊಂಡಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ. ಸರಿಯಾದ ನಿರ್ವಹಣೆ ಕ್ರಮ ಅನುಸರಿಸಿದರೆ ರೋಗವನ್ನು ನಿಯಂತ್ರಣ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ವಿಷಯ ತಜ್ಞರ ಸಲಹೆ ಪಡೆದು ರೋಗ ಬಂದಿರುವ ಮಳೆ ಹೆಚ್ಚಿರುವ ಪ್ರದೇಶದಲ್ಲಿ 6 ರಿಂದ 7 ದಿನಗಳಿಗೊಮ್ಮೆ ಹಾಗೂ ಮಳೆ ಕಡಿಮೆ ಇರುವ ಪ್ರದೇಶದಲ್ಲಿ 12 ರಿಂದ 15 ದಿನಕ್ಕೊಮ್ಮೆ ಔಷಧ ಸಿಂಪಡಣೆ ಮಾಡಿದರೆ ರೋಗವನ್ನು ಹತೋಟಿಗೆ ತರಲು ಸಾಧ್ಯ. ರೈತರು ಆತಂಕದಿಂದ ಖಾಸಗಿ ಔಷಧ ಅಂಗಡಿಗಳ ಮೊರೆಹೋಗಿ ಒಮ್ಮೆಗೆ ಅವರು ನೀಡುವ ಐದರಿಂದ ಆರು ತರಹದ ಶಿಲೀಂಧ್ರನಾಶಕ, ಕೀಟನಾಶಕ, ಹಾರ್ಮೋನ್, ಕಡಲಪಾಚಿ ಮುಂತಾದವುಗಳನ್ನು ಸಿಂಪಡಣೆ ಮಾಡುವುದರಿಂದ ರೋಗ ಹತೋಟಿಗೆ ಬರುವುದಿಲ್ಲ. ಬದಲಿಗೆ ರೋಗದ ಹಂತದಲ್ಲಿ ನೀಡಬೇಕಾದ ನಿರ್ಧಿಷ್ಟ ಔಷಧವನ್ನು ವಿಷಯ ತಜ್ಞರ ಸಲಹೆ ಮೇರೆಗೆ ನೀಡುವಂತೆ ತಿಳಿಸಿದರು. ರೈತರು ಬೆಂಕಿ ರೋಗಕ್ಕೆ ಹೆದರಿ ಪೋಷಕಾಂಶಗಳನ್ನು ಮತ್ತು ಔಷಧಗಳನ್ನು ಕಾಲಕಾಲಕ್ಕೆ ಅಗತ್ಯ ಪ್ರಮಾಣದಲ್ಲಿ ನೀಡದಿದ್ದರೆ ಬೆಳೆ ನಷ್ಟ ಅನುಭವಿಸಬೇಕಾಗುತ್ತದೆ.ತಜ್ಞರ ಶಿಫಾರಸ್ಸಿನ ಮೇರೆಗೆ ಪೋಷಕಾಂಶಗಳು ಮತ್ತು ಔಷಧಗಳನ್ನು ಬೆಳೆಗೆ ಒದಗಿಸಿದರೆ ರೋಗವನ್ನು ನಿಯಂತ್ರಿಸಬಹುದು. ಇಂತಹ ಗಡ್ಡೆಗಳನ್ನು ಬಿತ್ತನೆಗೂ ಸಹ ಬಳಸಬಹುದು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತೋಟಗಾರಿಕೆ ಮಹಾವಿದ್ಯಾಲಯದ ಡೀನ್‍ರವರಾದ ಡಾ.ಜನಾರ್ಧನ್, ಜಿ. ಅವರು ರೈತರು ಬೆಳೆಗಳಲ್ಲಿ ಹೆಚ್ಚು ಆದಾಯಗಳಿಸುವ ಜೊತೆಗೆ ಭೂಮಿಯ ಫಲವತ್ತತೆ ಕಾಪಾಡುವಲ್ಲಿ ಗಮನಹರಿಸಬೇಕು ಎಂದು ತಿಳಿಸಿದರು. ಪ್ರಸಕ್ತ ವರ್ಷದಲ್ಲಿ ಶುಂಠಿ ಬೆಳೆಯಲ್ಲಿ ವಾತಾವರಣದ ವೈಪ್ಯರಿತ್ಯದಿಂದಾಗಿ ರೋಗ ಬಾಧೆಯು ಉಲ್ಬಣವಾಗಿರುವುದನ್ನು ಗಮನಿಸಿ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆಯು ತಜ್ಞರ ತಂಡವನ್ನು ರಚಿಸಿ ಕ್ಷೇತ್ರ ವಿಶ್ಲೇಷಣೆಯನ್ನು ಕೈಗೊಂಡಿರುತ್ತಾರೆ. ವಿಶ್ಲೇಷಣೆಯಲ್ಲಿ ವಿಜ್ಞಾನಿಗಳ ತಂಡವು ಗಮನಿಸಿದ ಅಂಶಗಳು ಹಾಗೂ ಸೂಕ್ತ ಪರಿಹಾರಗಳನ್ನು ತಿಳಿಸುವ ಉದ್ದೇಶದಿಂದ ಇಂದಿನ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಇದರ ಉಪಯೋಗವನ್ನು ರೈತರು ಪಡೆದುಕೊಳ್ಳುವಂತೆ ತಿಳಿಸಿದರು. ಮೈಸೂರು ತಾಲ್ಲೂಕು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಸಬೀನ ಅಯ್ಯಣ್ಣ ಅವರು ಮಾತನಾಡಿ ಪ್ರಸಕ್ತ 2025-26ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ರೈತರಿಗೆ ದೊರೆಯುವ ಸವಲತ್ತುಗಳು ಹಾಗೂ ಸಹಾಯಧನದ ಮಾಹಿತಿಯನ್ನು ನೀಡಿದರು. ತಾಂತ್ರಿಕ ಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಬೆಂಗಳೂರು ತೋಟಗಾರಿಕೆ ಮಹಾವಿದ್ಯಾಲಯದ ಡಾ.ಹರೀಶ್, ಬಿ.ಎಸ್. ಅವರು ಶುಂಠಿಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಮಹತ್ವ, ಡಾ.ಕಿರಣ್ ಕುಮಾರ್, ಕೆ.ಸಿ. ಅವರು ಶುಂಠಿ ಕೃಷಿಯಲ್ಲಿ ಸಮಗ್ರ ರೋಗ ನಿರ್ವಹಣೆ, ಡಾ. ರಾಮೇಗೌಡ, ಜಿ.ಕೆ. ಅವರು ಶುಂಠಿ ಕೃಷಿಯಲ್ಲಿ ಸಮಗ್ರ ಕೀಟ ನಿರ್ವಹಣೆ ಹಾಗೂ ಡಾ. ಮಂಜುನಾಥ್, ಜಿ. ರವರು ಜೈವಿಕ ಗೊಬ್ಬರಗಳ ಮಹತ್ವದ ಕುರಿತು ಮಾಹಿತಿ ನೀಡಿದರು. ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕದ ಮುಖ್ಯಸ್ಥರಾದ ಡಾ.ತನ್ವೀರ್ ಅಹ್ಮದ್ ಅವರು ಹಾಗೂ ವಿಷಯ ತಜ್ಞರುಗಳಾದ ಡಾ.ಅರವಿಂದ ಕುಮಾರ್, ಜೆ.ಎಸ್., ಡಾ.ಶಿವಕುಮಾರ್, ಕೆ.ಎಂ., ಡಾ.ಮನುಕುಮಾರ್, ಹೆಚ್.ಆರ್., ಡಾ. ಚಂದನ್, ಡಾ.ಮಮತಲಕ್ಷ್ಮಿ, ಎನ್., ಡಾ. ಸಿದ್ದಪ್ಪ, ಆರ್., ಮತ್ತು ಡಾ. ಮುತ್ತುರಾಜು, ಜಿ.ಪಿ. ಅವರುಗಳು ರೈತರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಶುಂಠಿ ಕೃಷಿಯ ಸಂಪೂರ್ಣ ಮಾಹಿತಿಯನ್ನು ಪರಸ್ಪರ ಚರ್ಚಿಸಿದರು. ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ‘ಶುಂಠಿ ಕೃಷಿಯ ವೈಜ್ಞಾನಿಕ ತಂತ್ರಜ್ಞಾನಗಳ ವಸ್ತುಪ್ರದರ್ಶನವನ್ನು’ ರೈತರು ವೀಕ್ಷಿಸಿ ವಿಷಯವನ್ನು ಪ್ರಾಯೋಗಿಕವಾಗಿ ಅರ್ಥೈಸಿಕೊಂಡರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.21 : ಯಾರಿಗೂ ಹೋಲಿಕೆಯಿಲ್ಲದ ಒಂದು ಅಪರೂಪದ ಮಾನವ ಸಂಕುಲವಾಗಿರುವ ಕೊಡವರು ತಮ್ಮತನವನ್ನು ಉಳಿಸಿಕೊಳ್ಳಲು ಹಕ್ಕುಗಳನ್ನು…

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026

*ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*

ಮಾರ್ಚ್ 21, 2026

*ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.