
ಮಡಿಕೇರಿ ಜು.24 NEWS DESK : ದೆಹಲಿಯಲ್ಲಿ ಆ.15 ರಂದು ನಡೆಯುವ ಸ್ವಾತಂತ್ರ್ಯ ಉತ್ಸವದಲ್ಲಿ ವಿಶೇಷ ಯುವ ರಾಯಭಾರಿಯಾಗಿ ಪ್ರಧಾನ ಮಂತ್ರಿ ಸೇರಿದಂತೆ ಗಣ್ಯರೊಂದಿಗೆ ವೇದಿಕೆ ಹಂಚಿಕೊಳ್ಳುವ ಅವಕಾಶ ಪಡೆದ ಕೊಡಗು ಜಿಲ್ಲೆಯ ಪ್ರತಿಭಾನ್ವಿತ ಯುವಕ ಯಶಸ್ ರೈನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸನ್ಮಾನಿಸಿದರು. ಸುದರ್ಶನ ಅತಿಥಿಗೃಹದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖರ ಸಮ್ಮುಖದಲ್ಲಿ ಸನ್ಮಾನಿಸಿ, ಗೌರವಿಸಿದರು. ಕರ್ನಾಟಕ ರಾಜ್ಯದ ಪ್ರತಿನಿಧಿಯಾಗಿ ಆಯ್ಕೆಯಾಗಿರುವುದು ಜಿಲ್ಲೆಗೆ ಹೆಮ್ಮೆ ತರುವ ವಿಷಯವಾಗಿದೆ ಎಂದು ಡಾ.ಮಂತರ್ ಗೌಡ ಶ್ಲಾಘಿಸಿದ್ದಾರೆ. ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ಪ್ರಮುಖರಾದ ಮಂಜುನಾಥ್ ಗುಂಡೂರಾವ್, ಹೆಚ್.ಎ.ಹಂಸ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್, ಯಶಸ್ ತಾಯಿ ಬಿ.ಬಿ.ಜಯಂತಿ ಉಪಸ್ಥಿತರಿದ್ದರು. ಮಡಿಕೇರಿ ತಾಲೂಕಿನ ಮೂರ್ನಾಡು ಗ್ರಾಮದ ಲವ ಕುಮಾರ್ ಹಾಗೂ ಜಯಂತಿ ದಂಪತಿಯರ ಪುತ್ರ. ಯಶಸ್ ರೈ ಸುಳ್ಯ ಕೆವಿಜಿ ಕಾಲೇಜಿನ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಾನೆ.








