
ಮಡಿಕೇರಿ ಜು.24 NEWS DESK : ಕೊಡಗು ಹಿಂದು ಜಾಗರಣ ವೇದಿಕೆ ಮತ್ತು ಮಡಿಕೇರಿ ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ಜು.26 ರಂದು ಮಡಿಕೇರಿಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಮುಖ್ಯ ರಸ್ತೆಯಲ್ಲಿರುವ ಹುತಾತ್ಮ ಸೈನಿಕ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ಯುದ್ಧದಲ್ಲಿ ದಿಗ್ವಿಜಯ ಸಾಧಿಸಿದ ಭಾರತೀಯ ಯೋಧರ ತ್ಯಾಗ ಬಲಿದಾನಗಳನ್ನು ಸ್ಮರಿಸಿ, ಯೋಧರಿಗೆ ಪುಪ್ಪನಮನ ಸಲ್ಲಿಸಲಾಗುವುದು. ಕಾರ್ಯಕ್ರಮಕ್ಕೆ ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಹಾಗೂ ವಕೀಲರಾದ ಮೇಜರ್ ಓ.ಎಸ್.ಚಿಂಗಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಬಾಲವಾಗ್ಮಿ ಶ್ರೀಶಾ ದಿಕ್ಸೂಚಿ ಭಾಷಣ ಮಾಡಲಿದ್ದಾಳೆ. ಮಾಜಿ ಸೇನಾಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಭಾಗವಹಿಸಲಿದ್ದಾರೆ. ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಸ್ಪತ್ರೆಯ ರಕ್ತ ನಿಧಿ ಕೇಂದ್ರದಲ್ಲಿ ರಕ್ತದಾನ ಶಿಬಿರ ನಡೆಯಲಿದ್ದು, ದೇಶಾಭಿಮಾನಿಗಳು, ಮಾಜಿ ಯೋಧರು, ಸಂಘ, ಸಂಸ್ಥೆಗಳ ಪ್ರಮುಖರು, ಯುವಕರು, ವಿದ್ಯಾರ್ಥಿಗಳು, ಸಮೂಹ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಹಿಂದು ಜಾಗರಣ ವೇದಿಕೆ ಕೋರಿದೆ.









