Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ಮದ್ಯವರ್ಜನ ಶಿಬಿರಾರ್ಥಿಗಳಿಂದ ಕಾವೇರಿ ನದಿಗೆ ವಿಶೇಷ ಪೂಜೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ : ಮದ್ಯವರ್ಜನ ಶಿಬಿರಾರ್ಥಿಗಳಿಂದ ಕಾವೇರಿ ನದಿಗೆ ವಿಶೇಷ ಪೂಜೆ*

ಜುಲೈ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜು.24 NEWS DESK :  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕುಶಾಲನಗರದ ಕೊಡವ ಸಮಾಜದ ಆವರಣದಲ್ಲಿ 1954ನೇ ಮದ್ಯವರ್ಜನ ಶಿಬಿರ ಹಮ್ಮಿಕೊಳ್ಳಲಾಗಿದ್ದು, 7ನೇ ದಿನ ಕಾವೇರಿ ಮಹಾ ಆರತಿ ಬಳಗ ಹಾಗೂ ನಮಾಮಿ ಕಾವೇರಿ ಸಹಯೋಗದಲ್ಲಿ ಮದ್ಯವರ್ಜನ  ಶಿಬಿರಾರ್ಥಿಗಳು ಕಾವೇರಿ ನದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಕಾವೇರಿಗೆ ಆರತಿ ಬೆಳಗಿದರು. ಪಟ್ಟಣದ ಕೊಡವ ಸಮಾಜದಿಂದ ಹೊರಟು ರಥಬೀದಿಯ ಮೂಲಕ ಮೆರವಣಿಗೆಯಲ್ಲಿ ಸಾಗಿ ಬಂದ ಶಿಬಿರಾರ್ಥಿಗಳು ಮಧ್ಯ ವ್ಯಸನದಿಂದ ಆಗುವ ದುಷ್ಪರಿಣಾಮದ ಕುರಿತು ಬಿತ್ತಿಫಲಕಗಳನ್ನು ಹಿಡಿಯುವುದರೊಂದಿಗೆ ಘೋಷಣೆ ಕೂಗಿದರು. ನಂತರ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಕಾವೇರಿ ನದಿ ತಟದಲ್ಲಿ ಆರತಿ ಬೆಳಗಿದರು. ಈ ವೇಳೆ ಕಾವೇರಿ ನದಿ ಸ್ವಚ್ಚತಾ ಆಂದೋಲನ ಸಮಿತಿಯ ಸಂಚಾಲಕ ಚಂದ್ರಮೋಹನ್ ಮಾತನಾಡಿ, ಯಾವುದೇ ಚಟ ಮನುಷ್ಯನನ್ನು ಅಂಧನನ್ನಾಗಿ ಮಾಡುತ್ತದೆ. ಮನುಷ್ಯ ಜೀವನವನ್ನು ಸಂಪೂರ್ಣವಾಗಿ ಆವರಿಸಿ ಜೀವನದ ಸರ್ವಸ್ವವನ್ನು ಕಬಳಿಸುವ ಶಕ್ತಿ ವ್ಯಸನಕ್ಕಿದೆ. ಹೊಸ ಜೀವನದ ಸಂತೋಷಕ್ಕಾಗಿ ಪ್ರತಿನಿತ್ಯ ಪೂಜೆ, ನಾಮಸ್ಮರಣೆ ಅಸಹಾಯಕತೆಯಿಂದ ಹೊರಬರಲು ಸಹಕಾರಿಯಾಗಿದೆ. ಮದ್ಯವರ್ಜನ ಶಿಬಿರದಲ್ಲಿ ತನ್ನ ಶಕ್ತಿಯನ್ನು ತಾನೇ ಅರ್ಥಮಾಡಿಕೊಂಡು ಬದುಕುವ ಆತ್ಮ ಸ್ಥೈರ್ಯವನ್ನು ಪಡೆಯಲು ಶ್ರೀ ಕ್ಷೇತ್ರದ ಮೂಲಕ ಕಾರ್ಯಕ್ರಮಗಳನ್ನು ರೂಪಿಸುತ್ತಿರುವುದು ಶ್ಲಾಘನೀಯ ಎಂದರು. ನಂತರ ಮಾತನಾಡಿದ ಕಾವೇರಿ ಮಹಾ ಆರತಿ ಬಳಗದ ಸಂಚಾಲಕರಾದ ವನಿತಾ ಚಂದ್ರಮೋಹನ್, ಕುಡಿತದ ದಾಸರಾದವರು ಸಮಾಜ, ಕುಟುಂಬ, ನೆಮ್ಮದಿಯ ಬದುಕನ್ನು ನಾಶ ಮಾಡಿಕೊಳ್ಳುತ್ತಿದ್ದಾರೆ. ಒಂದು ದುಶ್ಚಟ ಇಡೀ ಕುಟುಂಬದ ವಿನಾಶಕ್ಕೆ ಕಾರಣವಾಗುತ್ತದೆ. ಇಂತಹ ಶಿಬಿರಗಳಲ್ಲಿ ತೊಡಗಿಸಿಕೊಂಡು ತಮ್ಮ ಬದುಕಿನ ದಿಕ್ಕನ್ನು ಬದಲಿಸಿಕೊಂಡು ಉತ್ತಮ ಜೀವನ ನಡೆಸಬೇಕು ಎಂದು ಅವರು ಸಲಹೆ ನೀಡಿದರು. ಶಿಬಿರದಲ್ಲಿ ಪಾಲ್ಗೊಂಡಿರುವ ಪ್ರತಿಯೊಬ್ಬರು ಧೃಢ ಮನಸ್ಸು ಮಾಡಿ ಕುಡಿತವನ್ನು ತ್ಯಜಿಸಿ ಇತರರಿಗೆ ಮಾದರಿಯಾಗಬೇಕು ಎಂದರು. ಮೆರವಣಿಗೆ ಮೂಲಕ ತಂದ ಮದ್ಯ ರಾಕ್ಷಸನ ಅಣುಕು ಶವವನ್ನು ಸುಟ್ಟ ಮಧ್ಯವರ್ಜನ ಶಿಬಿರಾರ್ಥಿಗಳು ಮುಂದಿನ ಜೀವನದಲ್ಲಿ ಮದ್ಯ ಮುಕ್ತರಾಗುವ ಬಗ್ಗೆ ಪ್ರತಿಜ್ಞೆ ಮಾಡಿದರು. ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ನಿರ್ದೇಶಕರಾದ ಲೀಲಾವತಿ, ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ಮೇಲ್ವಿಚಾರಕರಾದ ನಾಗರಾಜು, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಕೆ ಎಸ್ ರಾಜಶೇಖರ್, ಮಧ್ಯವರ್ಜನ ಉಸ್ತುವಾರಿ ಅಧಿಕಾರಿ ನಂದಕುಮಾರ್ ಕಾವೇರಿ ಮಹಾ ಆರತಿ ಬಳಗದ ಪ್ರಮುಖರಾದ ಧರಣಿ ಸೋಮಯ್ಯ, ಚೈತನ್ಯ, ಮಧ್ಯವರ್ಜನ ಶಿಬಿರದ 50 ಕ್ಕೂ ಅಧಿಕ ಶಿಬಿರಾರ್ಥಿಗಳು, ಯೋಜನೆಯ ಸೇವಾ ಪ್ರತಿನಿಧಿಗಳು, ನವ ಜೀವನ ಸಮಿತಿಯ ಸದಸ್ಯರುಗಳು ಮತ್ತಿತರರು ಇದ್ದರು. ಇದೇ ಸಂದರ್ಭ ಕಾವೇರಿ ಮಹಾ ಆರತಿ ಬಳಗದ ವತಿಯಿಂದ ಉಸ್ತುವಾರಿ ಅಧಿಕಾರಿ ನಂದಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.