Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
  • *ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*
  • *ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*
  • *ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ನಿರಂತರ ಮಳೆ : ಮಡಿಕೇರಿಯಲ್ಲಿ ಮೈಕೊರೆಯುವ ಚಳಿ : ಜನಜೀವನ ಅಸ್ತವ್ಯಸ್ತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ನಿರಂತರ ಮಳೆ : ಮಡಿಕೇರಿಯಲ್ಲಿ ಮೈಕೊರೆಯುವ ಚಳಿ : ಜನಜೀವನ ಅಸ್ತವ್ಯಸ್ತ*

ಜುಲೈ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.25 NEWS DESK : ಕೊಡಗು ಜಿಲ್ಲೆಯಲ್ಲಿ ಪುಷ್ಯ ಮಳೆ ನಿರಂತರವಾಗಿ ಸುರಿಯುತ್ತಿದೆ. ಅವಧಿಗೂ ಮೊದಲೇ ಅಧಿಕ ಮಳೆಯಾಗಿರುವುದರಿಂದ ಜಿಲ್ಲಾವ್ಯಾಪಿ ಶೀತದ ವಾತಾವರಣವಿದೆ. ಮಡಿಕೇರಿಯಲ್ಲಿ ಮೈಕೊರೆಯುವ ಚಳಿ ಮತ್ತು ಮಂಜು ಮುಸುಕಿದ ವಾತಾವರಣವಿದ್ದು, ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಮಂಜಿನ ನಗರಿ ಮಡಿಕೇರಿ ದೇಶ, ವಿದೇಶಗಳ ಪ್ರವಾಸಿಗರನ್ನು ಹೆಚ್ಚು ಆಕರ್ಷಿಸುತ್ತಿದೆ. ಇದಕ್ಕೆ ಪ್ರಮುಖ ಕಾರಣ ಇಲ್ಲಿನ ಹಸಿರ ವಾತಾವರಣ ಮತ್ತು ತಂಪಾದ ಹವಾಗುಣ. ಬೇಸಿಗೆಯಲ್ಲಿ ಪ್ರವಾಸಿಗರಿಂದ ತುಂಬಿ ಹೋಗುವ ಮಡಿಕೇರಿ ಮಳೆಗಾಲದಲ್ಲೂ ಮಾನ್ಸೂನ್ ಟೂರಿಸಂ ಹೆಸರಿನಲ್ಲಿ ಆಕರ್ಷಿಸುತ್ತಿತ್ತು. ಆದರೆ ಪ್ರಸ್ತುತ ವರ್ಷ ಅತಿಯಾದ ಗಾಳಿಮಳೆ ಮತ್ತು ಮೈಕೊರೆಯುವ ಚಳಿಯಿಂದ ಪ್ರವಾಸಿಗರ ಸಂಖ್ಯೆಯೂ ಕಡಿಮೆಯಾಗಿದೆ. ಇದರಿಂದ ಪ್ರವಾಸೋದ್ಯಮವನ್ನೇ ನಂಬಿ ಬದುಕು ಸಾಗಿಸುತ್ತಿರುವವರ ಆರ್ಥಿಕತೆಯ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದ್ದು, ನಷ್ಟ ಅನುಭವಿಸುತ್ತಿದ್ದಾರೆ. ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ವ್ಯಾಪಾರ ವಹಿವಾಟು ಕಳೆದ ಒಂದು ತಿಂಗಳಿನಿಂದ ಚೇತರಿಕೆ ಕಾಣುತ್ತಿಲ್ಲ. ಅತಿಯಾದ ಮಳೆ, ಮಂಜು ಮತ್ತು ಚಳಿಯಿಂದ ರಸ್ತೆಗಳಲ್ಲಿ ಜನರ ಓಡಾಟ ವಿರಳವಾಗಿದೆ. ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿರುವುದರಿಂದ ವಾಹನಗಳ ಸಂಚಾರವೂ ಕಡಿಮೆಯಾಗಿದೆ. ಇದು ವರ್ತಕರ ಹಾಗೂ ಹೊಟೇಲ್ ಉದ್ಯಮಿಗಳ ಮೇಲೆ ನೇರ ಪರಿಣಾಮ ಬೀರಿದ್ದು, ಆರ್ಥಿಕ ಹಿನ್ನಡೆಯನ್ನು ಅನುಭವಿಸುತ್ತಿದ್ದಾರೆ. ಸಣ್ಣ ವ್ಯಾಪಾರಿಗಳು ಹಾಗೂ ಸಂತೆ ವ್ಯಾಪಾರಿಗಳು ಕೂಡ ವ್ಯಾಪಾರವಿಲ್ಲದೆ ಪರಿತಪಿಸುವಂತ್ತಾಗಿದೆ. ಅತಿ ಶೀತದ ವಾತಾವರಣದಿಂದ ಶೀತ, ಜ್ವರ ವ್ಯಾಪಕಾಗುತ್ತಿದ್ದು, ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಅಧಿಕವಾಗಿದೆ. ವಯೋವೃದ್ಧರು ವಯೋಸಹಜ ಕಾಯಿಲೆಗಳೊಂದಿಗೆ ಶೀತದ ವಾತಾವರಣಕ್ಕೆ ಒಗ್ಗಿಕೊಳ್ಳಲಾಗದೆ ಪರದಾಡುತ್ತಿದ್ದಾರೆ. ಸೌದೆಯ ಒಲೆ ಬೇಕೆಂದರೆ ಒಣಗಿದ ಸೌದೆ ಸಿಗುತ್ತಿಲ್ಲ, ಇದ್ದಿಲಿನ ಮೂಲಕ ಮನೆ ಬೆಚ್ಚಗಿಡೋಣವೆಂದರೆ ಇದ್ದಿಲು ಬೆಲೆ ಕೆ.ಜಿ ಗೆ 50 ರಿಂದ 60 ರೂ. ಆಗಿದೆ. ಮಡಿಕೇರಿ ನಗರದ ಜನ ಬಟ್ಟೆ ಒಣಗಿಸಲಾಗದೆ ಪರಿತಪಿಸುತ್ತಿದ್ದಾರೆ.  ತಾಂತ್ರಿಕ ಕ್ಷೇತ್ರದ ಮೇಲೂ ಶೀತದ ವಾತಾವರಣ ಪರಿಣಾಮ ಬೀರುತ್ತಿದ್ದು, ಕಂಪ್ಯೂಟರ್ ಗಳ ಕೆಲಸ ನಿಧಾನವಾಗುತ್ತಿದೆ. ಶೀತಕ್ಕೆ ಸಿಲುಕಿರುವ ಕಾಗದಗಳು ಮುದ್ರಣಕ್ಕೆ ಅಯೋಗ್ಯವಾಗಿವೆ. ನಿರಂತರ ಮಳೆಯಿಂದ ಮನೆ ಮತ್ತು ಕಟ್ಟಡಗಳ ಗೋಡೆಗಳಲ್ಲಿ ನೀರಿನೊಂದಿಗೆ ಶೀತ ಆವರಿಸಿದ್ದು, ಬೆಲೆ ಬಾಳುವ ವಸ್ತುಗಳು ಹಾಳಾಗುತ್ತಿವೆ. ಸುತ್ತಮುತ್ತಲ ಮಣ್ಣು ಮೃದುವಾಗಿದ್ದು, ಇನ್ನೂ ಎರಡು ತಿಂಗಳು ಮಳೆ ಇರುವುದರಿಂದ ಮುಂದಿನ ದಿನಗಳ ಬಗ್ಗೆ ಜನರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಕಾಫಿ ಮತ್ತಿತರ ಬೆಳೆಗಳು ಕೊಳೆ ರೋಗಕ್ಕೆ ತುತ್ತಾಗಿದ್ದು, ಕೃಷಿಕ ವರ್ಗ ಕೂಡ ಕಷ್ಟನಷ್ಟಗಳನ್ನು ಅನುಭವಿಸುತ್ತಿದೆ. ವಿದ್ಯಾರ್ಥಿಗಳು ಮೈಕೊರೆಯುವ ಚಳಿಗೆ ಸಿಲುಕಿ ಶಾಲೆಗೆ ತೆರಳಲು ಹಿಂದೇಟು ಹಾಕುವ ಪರಿಸ್ಥಿತಿ ಉದ್ಭವಿಸಿದೆ. ಅತಿ ಮಳೆ, ಮಂಜು ಮತ್ತು ಚಳಿಯಿಂದ ನೆಮ್ಮದಿಯ ಜೀವನ ಅಸಾಧ್ಯವಾಗಿದ್ದು, ಒಂದೆರಡು ದಿನವಾದರೂ ಬಿಸಿಲು ಬರಲಿ ಎಂದು ಜನ ಪ್ರಾರ್ಥಿಸುತ್ತಿದ್ದಾರೆ. ಕೊಡಗು ಜಿಲ್ಲಾ ವ್ಯಾಪಿ ಜನವರಿಯಿಂದ ಇಲ್ಲಿಯವರೆಗೆ 80 ಇಂಚಿಗೂ ಅಧಿಕ ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ 110 ಇಂಚು ಮಳೆ ದಾಖಲಾಗಿದ್ದು, ಆಗಸ್ಟ್ ತಿಂಗಳಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.21 : ಯಾರಿಗೂ ಹೋಲಿಕೆಯಿಲ್ಲದ ಒಂದು ಅಪರೂಪದ ಮಾನವ ಸಂಕುಲವಾಗಿರುವ ಕೊಡವರು ತಮ್ಮತನವನ್ನು ಉಳಿಸಿಕೊಳ್ಳಲು ಹಕ್ಕುಗಳನ್ನು…

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026

*ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*

ಮಾರ್ಚ್ 21, 2026

*ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.