Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
  • *ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*
  • *ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*
  • *ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ : ಸರಕಾರದ ವಿರುದ್ಧ ಅಸಮಾಧಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ : ಸರಕಾರದ ವಿರುದ್ಧ ಅಸಮಾಧಾನ

ಜುಲೈ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ  NEWS DESK ಜು.25 : ಆಶಾ ಕಾರ್ಯಕರ್ತೆಯರಿಗೆ ಈಗಾಗಲೇ ಘೋಷಿಸಿರುವ 10 ಸಾವಿರ ರೂ. ಗೌರವ ಧನವನ್ನು ನೀಡದಿರುವ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕೊಡಗು ಜಿಲ್ಲಾ ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಉಪಾಧ್ಯಕ್ಷೆ ಎಂ.ಉಮಾದೇವಿ ಹಾಗೂ ಕೊಡಗು ಜಿಲ್ಲಾಧ್ಯಕ್ಷೆ ತೆಕ್ಕಡೆ ಬಿ.ಪೂರ್ಣಿಮಾ ಅವರ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಜಿಲ್ಲಾ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಸಂಘದ ಉಪಾಧ್ಯಕ್ಷೆ ಉಮಾದೇವಿ ಎಂ.ಅವರು ಮಾತನಾಡಿ, ಕಳೆದ ಜನವರಿಯಲ್ಲಿ ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದ ಪ್ರೋತ್ಸಾಹ ಧನ ಸೇರಿಸಿ ಕನಿಷ್ಟ 10 ಸಾವಿರ ಗೌರವ ಧನವನ್ನು ನೀಡುವುದಾಗಿ ಭರವಸೆ ನೀಡಿದ್ದರು. ಅಲ್ಲದೆ ಹೆಚ್ಚುವರಿ ಕೆಲಸದ ಆಧಾರದ ಮೇಲೆ ಇನ್ಸೆಂಟಿವ್‍ನ್ನು ಶೀಘ್ರ ನಿಡಲಾಗುವುದೆಂದು ತಿಳಿಸಿದ್ದರು. ಈ ಭರವಸೆ ಇಲ್ಲಿಯವರೆಗೆ ಅನುಷ್ಠಾನಗೊಂಡಿಲ್ಲ. ತೀವ್ರ ಸಂಕಷ್ಟದಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಭರವಸೆಯಂತೆ ಗೌರವ ಧನವನ್ನು ನೀಡಬೇಕೆಂದು ಆಗ್ರಹಿಸಿದರು. ಬೇಡಿಕೆಗಳ ಈಡೇರಿಕೆಗಾಗಿ ಸಚಿವರುಗಳನ್ನು ಹಲವಾರು ಬಾರಿ ಭೇಟಿ ಮಾಡಿದ್ದರು ಸೂಕ್ತ ಸ್ಪಂದನ ಇಲ್ಲಿಯವರೆ ದೊರಕಿಲ್ಲ. ಈ ಹಿನ್ನೆಲೆ ಆಗಸ್ಟ್ 4 ರಿಂದ 6ರವರೆಗೆ ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದಾಗಿ ಉಮಾದೇವಿ ತಿಳಿಸಿದರು. ರಾಜ್ಯವ್ಯಾಪಿ ಪ್ರಸ್ತುತ 42 ಸಾವಿರಕ್ಕೂ ಹೆಚ್ಚು ಹಾಗೂ ಕೊಡಗು ಜಿಲ್ಲೆಯಲ್ಲಿ 485 ಆಶಾಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ. ಮಹಿಳೆಯರ ಪರವೆಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆಶಾ ಕಾರ್ಯಕರ್ತೆಯರ ಸಂಕಷ್ಟವನ್ನು ಅರಿತು ತಾವು ನೀಡಿದ ಭರವಸೆಯನ್ನು ಈಡೇರಿಸಲಿ ಎಂದು ಒತ್ತಾಯಿಸಿದರು. ಪ್ರಸ್ತುತ ಆಶಾ ಕಾರ್ಯಕರ್ತೆಯರು ಗೌರವ ಧನವಾಗಿ 6 ರಿಂದ 7 ಸಾವಿರ ರೂ.ಗಳನ್ನು ಮಾತ್ರ ಪಡೆಯುತ್ತಿದ್ದಾರೆ. ಇವರಿಗೆ ನೀಡುವ ಗೌರವ ಧನಕ್ಕೂ ಡಾಟಾ ಎಂಟ್ರಿಯಲ್ಲಿನ ಲೋಪಗಳಿಂದ ತೊಂದರೆಯಾಗುತ್ತ್ತಿದೆ. ಈ ಎಲ್ಲಾ ಸಂಕಷ್ಟಗಳ ನಡುವೆಯೂ ಆಶಾ ಕಾರ್ಯಕತೆರ್ಯರ ಪ್ರಾಮಾಣಿಕ ಮತ್ತು ನಿಷ್ಠೆಯ ಸೇವೆಯಿಂದ ಪ್ರಸ್ತುತ ಗರ್ಭಿಣಿ ಮಹಿಳೆಯರ ಮರಣ ಪ್ರಮಾಣ ಸಾಕಷ್ಟು ಪ್ರಮಾಣದಲ್ಲಿ ಕಡಿಮೆಯಾಗಿದೆ ಎಂದು ಉಮಾದೇವಿ ಹೇಳಿದರು. ಸಂಘದ ಜಿಲ್ಲಾಧ್ಯಕ್ಷರಾದ ತೆಕ್ಕಡೆ ಬಿ.ಪೂರ್ಣಿಮ ಮಾತನಾಡಿ, ಆಶಾ ಕಾರ್ಯಕರ್ತೆರು ಪ್ರಮುಖವಾಗಿ ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಕಾರ್ಯನಿರ್ವಹಣೆಗೆ ಇರುವವರು. ಹೀಗಿದ್ದೂ ಇವರನ್ನು ವಿವಿಧ ಇಲಾಖೆಗಳ ಕೆಲಸ ಕಾರ್ಯಗಳಿಗೆ ಬಳಸುತ್ತಿದ್ದಾರೆ. ಆರೋಗ್ಯ ಇಲಾಖೆ ಹೊರತು ಪಡಿಸಿ ಇತರೆ ಇಲಾಖೆಗಳ ಕೆಲಸ ಕಾರ್ಯಗಳನ್ನು ಆಶಾ ಕಾರ್ಯಕರ್ತೆಯರಿಗೆ ನೀಡಬಾರದು ಎಂದು ಒತ್ತಾಯಿಸಿದರು. ಒಂದು ಸಾವಿರ ಮಂದಿಗೆ ಇಬ್ಬರು ಆಶಾ ಕಾರ್ಯಕರ್ತೆಯರು ಎನ್ನುವ ನಿಯಮವನ್ನು ಜಾರಿಗೆ ತರಲಾಗಿದೆ. ಕಡಿಮೆ ಜನಸಂಖ್ಯೆ ಇರುವ ಸ್ಥಳಗಳಲ್ಲಿ ಒಬ್ಬ ಆಶಾಕಾರ್ಯಕರ್ತೆ ಹೆಚ್ಚುವರಿ ಪ್ರದೇಶದ ಕಾರ್ಯಗಳನ್ನು ನೋಡಿಕೊಳ್ಳಬೇಕೆನ್ನುವ ಆದೇಶಕ್ಕೆ ನಮ್ಮ ವಿರೋಧವಿದೆ ಎಂದು ತಿಳಿಸಿದರು.
*ಬೇಡಿಕೆಗಳು*
ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆಯರಿಗೂ ಗೌರವ ಧನವನ್ನು ಹೆಚ್ಚಿಸಬೇಕು, ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚುವೆಚ್ಚಗಳನನ್ನು ಪರಿಗಣಿಸಿ ಕನಿಷ್ಟ 2 ಸಾವಿರ ರೂ. ಗೌರವ ಧನವನ್ನು ಹೆಚ್ಚಿಸಬೇಕು, 60 ವರ್ಷಕ್ಕೆ ನಿವೃತ್ತರಾಗುವ ಆಶಾ ಕಾರ್ಯಕರ್ತರಿಗೆ 5 ಲಕ್ಷ ಇಡುಗಂಟು ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಸಲ್ಲಿಸಿದರು. ಸೋಮವಾರಪೇಟೆ ತಾಲ್ಲೂಕು ಸಂಘದ ಅಧ್ಯಕ್ಷೆ ಶಾಂತಿ ಐ.ಜಿ. ಸೇರಿದಂತೆ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ನೂರಾರು ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.21 : ಯಾರಿಗೂ ಹೋಲಿಕೆಯಿಲ್ಲದ ಒಂದು ಅಪರೂಪದ ಮಾನವ ಸಂಕುಲವಾಗಿರುವ ಕೊಡವರು ತಮ್ಮತನವನ್ನು ಉಳಿಸಿಕೊಳ್ಳಲು ಹಕ್ಕುಗಳನ್ನು…

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026

*ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*

ಮಾರ್ಚ್ 21, 2026

*ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.