
ಕುಶಾಲನಗರ ಜು.25 NEWS DESK : ಕುಶಾಲನಗರ ಮಾಜಿ ಸೈನಿಕರ ಸಂಘ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಹಾಗೂ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಜು.26 ರಂದು “ಕಾರ್ಗಿಲ್ ವಿಜಯೋತ್ಸವ” ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಮುಳ್ಳುಸೋಗೆಯ ಮಾಜಿ ಸೈನಿಕರ ಸಂಘದ ಕಛೇರಿಯ ಆವರಣದಲ್ಲಿ ವಿಜಯೋತ್ಸವದಲ್ಲಿ ವೀರ ಮರಣ ಹೊಂದಿದ ಸೈನಿಕರ ಸೇವೆಯನ್ನು ಸ್ಮರಿಸಿ ಗೌರವ ನಮನ ಸಲ್ಲಿಸಲಾಗುವುದು. ಸಂಘದ ಅಧ್ಯಕ್ಷ ಕ್ಯಾಪ್ಟನ್ ಡಿ.ಕೆ. ಚಿಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ಸುಬೇದಾರ್ ಮೇಜರ್ ಎಸ್.ಆರ್.ಮಾದಪ್ಪ, ಕೋಶಾಧಿಕಾರಿ ಹವಾಲ್ದಾರ್ ಎನ್.ಎಸ್.ನರೇಶ್, ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ, ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಮತ್ತು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ. ಇದೇ ವೇಳೆಯಲ್ಲಿ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ನಿವೃತ್ತ ಸೈನಿಕರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಲಾಗಿದೆ.








