Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*
  • *ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*
  • *ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 
  • *ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ಪುರಸಭೆ ವಿಶೇಷ ಸಾಮಾನ್ಯ ಸಭೆ : ಸದಸ್ಯರ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ಪುರಸಭೆ ವಿಶೇಷ ಸಾಮಾನ್ಯ ಸಭೆ : ಸದಸ್ಯರ ಅಸಮಾಧಾನ*

ಜುಲೈ 26, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜು.26 NEWS DESK : ಕುಶಾಲನಗರ ಪುರಸಭೆ ಕಟ್ಟಡ ನಿರ್ಮಾಣ ಸೇರಿದಂತೆ 1.5 ಕೋಟಿ ರು.ಗಳ ಕಾಮಗಾರಿಗಳು ವಾರ್ಡ್ ಜನ ಪ್ರತಿನಿಧಿಗಳ ಗಮನಕ್ಕೆ ಬಾರದೆ ನಡೆದಿರುವ ಬಗ್ಗೆ ಸದಸ್ಯರುಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ಜಯಲಕ್ಷ್ಮಿ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಕಾವೇರಿದ ಚರ್ಚೆ ನಡೆಯಿತು. ಪುರಸಭೆಯ ನೂತನ ಕಟ್ಟಡ ನಿರ್ಮಾಣ ಸಂದರ್ಭ 1.25 ಕೋಟಿ ರೂ ವೆಚ್ಚದ ಬೃಹತ್ ಮೊತ್ತದ ಕಾಮಗಾರಿಗೆ ಅಧ್ಯಕ್ಷರು ಘಟನೋತ್ತರ ಅನುಮತಿ ನೀಡಿದ್ದು, ಈ ಬಗ್ಗೆ ಮತ್ತು ಕುಶಾಲನಗರ ಪಟ್ಟಣ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚುವ 16.5 ಲಕ್ಷ ರೂಗಳ ಕಾಮಗಾರಿಗೆ ಸಭೆ ಅನುಮೋದನೆ ಪಡೆದಿಲ್ಲ ಎನ್ನುವ ವಿಷಯ ಚರ್ಚೆಗೆ ಗ್ರಾಸವಾಯಿತು. ಸದಸ್ಯರಾದ ಅಮೃತರಾಜ್ ಮಾತನಾಡಿ, ತುರ್ತು ಸಂದರ್ಭ ಅಧ್ಯಕ್ಷರು ಸದಸ್ಯರ ಗಮನಕ್ಕೆ ತಾರದೆ ಕೆಲವು ಮಿತಿಯಲ್ಲಿ ಮಾತ್ರ ಕೆಲಸ ಮಾಡಬಹುದು. ಆದರೆ ವಾರ್ಡ್ ಸದಸ್ಯರ ಹಕ್ಕನ್ನು ಕಸಿಯುವುದು ಸರಿಯಲ್ಲ ಎಂದು ಆರೋಪಿಸಿದರು. ವಾರ್ಡ್ ಸದಸ್ಯರುಗಳ ಗಮನಕ್ಕೆ ತರದೆ ಹಾಗೂ ಕಾಮಗಾರಿ ಅನುಮೋದನೆ ನೀಡುವ ನಿಟ್ಟಿನಲ್ಲಿ ಚರ್ಚಿಸದೆ ಅಧ್ಯಕ್ಷರು ತೀರ್ಮಾನ ಕೈಗೊಂಡಿರುವುದು ಸರಿಯಲ್ಲ ಎಂದು ವಿಪಕ್ಷ ಸದಸ್ಯರುಗಳು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಪಟ್ಟಣ ವ್ಯಾಪ್ತಿಯ ವಾರ್ಡ್ಗಳ ರಸ್ತೆಯ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಬಗ್ಗೆ ಹಿಂದಿನ ಇಂಜಿನಿಯರ್ ಮತ್ತು ಮುಖ್ಯ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದ ಬಗ್ಗೆ ಸಭೆಗೆ ದಾಖಲೆಗಳನ್ನು ಒದಗಿಸಿದರೂ ಸದಸ್ಯರು ತೃಪ್ತರಾಗದೆ ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಬೇಕು, ಈ ಸಂದರ್ಭ ಎನ್ ಡಿ ಆರ್ ಎಫ್ ಮೂಲಕ ಕೂಡ ಕಾಮಗಾರಿ ನಡೆದಿದೆ. ಕಾಮಗಾರಿಯ ಬಗ್ಗೆ ಗೊಂದಲ ಇದೆ. ಈ ಬಗ್ಗೆ ಮುಂದಿನ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಬಗ್ಗೆ ಸಭೆ ಒಮ್ಮತದ ನಿರ್ಧಾರ ಕೈಗೊಂಡಿತು. ಕುಶಾಲನಗರ ಪುರಸಭೆ ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಕುರಿತು ಕಾವೇರಿದ ಚರ್ಚೆ ನಡೆಯಿತು. ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಸದಸ್ಯರು ಆಗ್ರಹಿಸಿದರು. ಸದಸ್ಯ ಆನಂದ್ ಕುಮಾರ್ ಮಾತನಾಡಿ, ಪುರಸಭೆಗೆ ತಮ್ಮ ಕೆಲಸ ಕಾರ್ಯಗಳಿಗೆ ಬರುವ ಸಾರ್ವಜನಿಕರ ಕಡತಗಳ ಕುರಿತು ಕೆಲವು ಸಿಬ್ಬಂದಿಗಳು ಮಧ್ಯವರ್ತಿಗಳಿಗೆ ಮಾಹಿತಿ ನೀಡುತ್ತಿದ್ದಾರೆ. ಆಗ ಮಧ್ಯವರ್ತಿಗಳು ಅರ್ಜಿದಾರರನ್ನು ಭೇಟಿ ಮಾಡಿ ಅರ್ಜಿಗೆ ಇಂತಿಷ್ಟು ಮೊತ್ತದ ಹಣ ನಿಗದಿ ಮಾಡಿ ಕೆಲಸ‌ ಮಾಡಿಸಿಕೊಡುವ ಜಾಯಮಾನ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಸಾರ್ವಜನಿಕರಿಂದಲೂ ದೂರುಗಳು ಬಂದಿವೆ. ಬೆಳಿಗ್ಗೆ ಯಿಂದ ಸಂಜೆ ತನಕ ಮಧ್ಯವರ್ತಿಗಳು ಪುರಸಭೆ ಕಚೇರಿಯಲ್ಲಿ ನಿರಂತರ ಓಡಾಟ ಮಾಡುತ್ತಿರುವುದು ಸಾಮಾನ್ಯ ಚಿತ್ರಣವಾಗಿದೆ. ತಕ್ಷಣ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಒತ್ತಾಯಿಸಿದರು. ಮುಖ್ಯಾಧಿಕಾರಿ ಗಿರೀಶ್, ಪ್ರತಿಕ್ರಿಯಿಸಿ ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕ ದೂರು ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲಾ ಸಿಬ್ಬಂದಿಗಳ ಸಭೆ ಕರೆದು ನೋಟಿಸ್ ನೀಡಿ ಎಚ್ಚರಿಕೆ ನೀಡಲಾಗಿದೆ. ಸೂಚನೆ ಉಲ್ಲಂಘಿಸಿ ಮಧ್ಯವರ್ತಿಗಳೊಂದಿಗೆ ಶಾಮೀಲಾಗುವ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಸದಸ್ಯ ನವೀನ್ ಕುಮಾರ್ ಮಾತನಾಡಿ, ಕಚೇರಿಯಲ್ಲಿ ಮೊದಲು ದೂರು ಪೆಟ್ಟಿಗೆ ಅಳವಡಿಸಿ
ಜೊತೆಗೆ ಲೋಕಾಯುಕ್ತ ಅಧಿಕಾರಿಗಳ ಮೊಬೈಲ್ ನಂಬರ್ ಕೂಡ ಹಾಕಬೇಕು. ಸಾರ್ವಜನಿಕರು ದೂರು ನೀಡಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಸದಸ್ಯ ಪ್ರಮೋದ್ ಮುತ್ತಪ್ಪ ಮಾತನಾಡಿ, ಸಾರ್ವಜನಿಕರ‌‌ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕು. ಅನಗತ್ಯವಾಗಿ ಅವರನ್ನು ಅಲೆದಾಡಿಸಬಾರದು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಾಧಿಕಾರಿ ಗಿರೀಶ್ , ಕಚೇರಿಯಲ್ಲಿ ಪ್ರಸ್ತುತ 41 ಫೈಲುಗಳು ಬಾಕಿ ಇವೆ. ಕಳೆದ ತಿಂಗಳು 70 ಹಾಗೂ ಮೇ ನಲ್ಲಿ 80 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದರು. ಪಟ್ಟಣದ 3ನೇ ಬ್ಲಾಕ್, ಬಿ.ಎಂ.ರಸ್ತೆಯಲ್ಲಿರುವ ವೆಂಕಟೇಶ್ವರ ಚಿತ್ರ ಮಂದಿರವನ್ನು ಬಾಡಿಗೆ ನೀಡುವ ಕುರಿತು ಚರ್ಚೆ ನಡೆಯಿತು. ಸದಸ್ಯ ಕಲಿಮುಲ್ಲಾ, ಪ್ರಮೋದ್ ಅವರು ಮಾತನಾಡಿ, ಈ ಕುರಿತು ಕಾನೂನು ಸಲಹೆಗಾರದಿಂದ‌ ಸಲಹೆ ಪಡೆದು ಬಾಡಿಗೆ ನೀಡುವಂತೆ ತಿಳಿಸಿದರು. ಸದಸ್ಯ ಬಿ.ಜೈವರ್ಧನ್ ಮಾತನಾಡಿ,ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಈ ವಿಚಾರ ಅಜೆಂಡಾದಲ್ಲಿ ಸೇರಿಸುವಂತೆ ಸಲಹೆ ನೀಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ತಾಲ್ಲೂಕು ಬಾಬು ಜಗಜೀವನ್‌ರಾಮ್ ಭವನ ನಿರ್ಮಾಣಕ್ಕೆ ಜಾಗ ಕಾಯ್ದಿರಿಸಲು ಕೋರಿ ಬಂದಿರುವ ಪತ್ರದ ಬಗ್ಗೆ ಸದಸ್ಯ ಜೈವರ್ಧನ್ ಗಮನ ಸೆಳೆದರು. ಭವನಕ್ಕೆ ರೂ.2 ಕೋಟಿ ಅನುದಾನ ನೀಡುತ್ತಿದ್ದು,ಇದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸದಸ್ಯ ಶಿವಶಂಕರ್ ಕಾಳಮ್ಮ ಕಾಲೋನಿ ಬಳಿ 30 ಸೆಂಟ್ ಜಾಗ ಇದೆ. ಇದು ಬಾಬು ಜಗಜೀವನ್ ರಾಮ್ ಯುವಕ ಸಂಘದ ಹೆಸರಿನಲ್ಲಿ ಇದೆ. ಈ ಜಾಗವನ್ನು ಭವನಕ್ಕೆ ಬಿಟ್ಟು ಕೊಡಲಾಗುವುದು. ಈ ಬಗ್ಗೆ ಅಧಿಕಾರಿಗಳು ಮುಂದಿನ ಕ್ರಮ‌ಕೈಗೊಳ್ಳಬೇಕು ಎಂದರು. ಮುಳ್ಳುಸೋಗೆ ವ್ಯಾಪ್ತಿಯಲ್ಲಿ ಹೆಚ್ಚಿನ ಕಂದಾಯ ವಸೂಲಿ ಆಗುತ್ತಿದ್ದರೂ ಪುರಸಭೆ ಯಿಂದ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ಗ್ರಾಮಕ್ಕೆ ಬರುತ್ತಿಲ್ಲ. ಮುಂದಿನ ಸಾಲಿನಿಂದ‌ ಹೆಚ್ಚಿನ ಅನುದಾನ ನೀಡಿ ಗ್ರಾಮದ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಸದಸ್ಯ ಎಂ.ವಿ.ಹರೀಶ್, ಪದ್ಮಾವತಿ ಒತ್ತಾಯಿಸಿದರು. ಪೌರಕಾರ್ಮಿಕರಿಗೆ ಬೆಳಿಗ್ಗೆ ಸಮಯದಲ್ಲಿ ನೀಡಲಾಗುತ್ತಿರುವ ಉಪಹಾರ ಪ್ರಮಾಣ ಸಾಕಾಗುತ್ತಿಲ್ಲ. ಪ್ರತಿನಿತ್ಯ ಒಂದೇ ತರದ ತಿಂಡಿ ನೀಡಲಾಗುತ್ತಿದೆ ಎಂದು ಸದಸ್ಯರಾದ ಪ್ರಕಾಶ್, ಶಿವಶಂಕರ್, ನವೀನ್, ಹೆಚ್ಚಿನ ಭತ್ಯೆ ನೀಡಲು ಕ್ರಮ ಕೈಗೊಳ್ಳಬೇಕು ಎಂದರು. ಈ ಬಗ್ಗೆ ಮಾತನಾಡಿದ ಹಿರಿಯ ಆರೋಗ್ಯ ನಿರೀಕ್ಷಕ ಉದಯಕುಮಾರ್ ಸರ್ಕಾರ ರೂ.35 ಉಪಹಾರಕ್ಕೆ ನಿಗದಿ ಮಾಡಿದೆ. ಜೊತೆಗೆ ಮೊಟ್ಡೆಯನ್ನು ನೀಡಲಾಗುತ್ತಿದೆ ಎಂದರು. ಸದಸ್ಯ ಪ್ರಮೋದ್ ಮಾತನಾಡಿ, ಪೌರಕಾರ್ಮಿಕರಿಗೆ ಉಪಹಾರ ವ್ಯವಸ್ಥೆಯನ್ನು ಇಂದಿರಾ ಕ್ಯಾಂಟಿನ್ ಗೆ ವಹಿಸುವ ಸಲಹೆ ನೀಡಿದರು.
ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ಜಾಗ ಒದಗಿಸಿಕೊಡುವಂತೆ ಸದಸ್ಯ ಪ್ರಕಾಶ್, ನವೀನ್ ಮನವಿ ಮಾಡಿದರು.ಈ ವಿಚಾರವನ್ನು ಮುಂದಿನ ಸಾಮಾನ್ಯ ಸಭೆಯಲ್ಲಿ ಮಂಡಿಸಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷೆ ಪುಟ್ಟಲಕ್ಷ್ಮಿ, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ಇಂಜಿನಿಯರ್ ಅರ್ಬಾಸ್, ಕಂದಾಯ ಅಧಿಕಾರಿ ರಾಮು,ಆರೋಗ್ಯ ಅಧಿಕಾರಿ ಉದಯಕುಮಾರ್, ಸಿಬ್ಬಂದಿಗಳಾದ‌ ನಂಜುಂಡ, ಧನಂಜಯ ಮತ್ತಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 3: ವಲಯ ಮಟ್ಟದ ಕ್ರೀಡಾಕೂಟಗಳಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ…

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*

ಸೆಪ್ಟೆಂಬರ್ 2, 2026

*ಸೆ.5 ಮತ್ತು 6 ರಂದು ಮಡಿಕೇರಿಯಲ್ಲಿ ‘KOA-MYCON’ ಮಧ್ಯವಾರ್ಷಿಕ ಸಮ್ಮೇಳನ*

ಸೆಪ್ಟೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.