Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
  • *ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*
  • *ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*
  • *ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪತ್ರಕರ್ತ ರಮೇಶ್ ಉತ್ತಪ್ಪರ ಮೂರು ಕೃತಿ ಲೋಕಾರ್ಪಣೆ : ವಿಭಿನ್ನ ಸಾಹಿತ್ಯಕ್ಕೆ ಓದುಗ ಪಡೆ ಇದ್ದೇ ಇರುತ್ತದೆ : ಸುತ್ತೂರು ಶ್ರೀ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪತ್ರಕರ್ತ ರಮೇಶ್ ಉತ್ತಪ್ಪರ ಮೂರು ಕೃತಿ ಲೋಕಾರ್ಪಣೆ : ವಿಭಿನ್ನ ಸಾಹಿತ್ಯಕ್ಕೆ ಓದುಗ ಪಡೆ ಇದ್ದೇ ಇರುತ್ತದೆ : ಸುತ್ತೂರು ಶ್ರೀ*

ಜುಲೈ 26, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮೈಸೂರು ಜು.26 NEWS DESK :  ಮೈಸೂರು ಕಲ್ಚರಲ್ ಅಸೋಸಿಯೇಷನ್, ವಿಸ್ಮಯ ಪ್ರಕಾಶನ ಹಾಗೂ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಸಹಯೋಗದಲ್ಲಿ ಮೈಸೂರಿನ ಸಂಗೀತ ವಿವಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪತ್ರಕರ್ತ, ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಅವರ ಮೂರು ಕೃತಿಗಳ ಲೋಕಾರ್ಪಣೆಗೊಂಡಿತು.  ಸುತ್ತೂರು ಶ್ರೀ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯವಹಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಪೊಲೀಸ್ ಅಕಾಡೆಮಿ ಸಹಾಯಕ ನಿರ್ದೇಶಕ ಸಂದೇಶ್ ಕುಮಾರ್ ಅವರು ಮೈಸೂರು ವೃತ್ತಗಳ ವೃತ್ತಾಂತ, ಮಹಾವೀರ ಚಕ್ರ ಪುರಸ್ಕೃತ ವೀರ ಸೇನಾನಿ ಲೆಫ್ಟಿನೆಂಟ್ ಕರ್ನಲ್ ಪಿ.ಎಸ್. ಗಣಪತಿ ಅವರು ಸಿಂದೂರ, ಶಾಸಕ ಟಿ.ಎಸ್. ಶ್ರೀವತ್ಸ ಅವರು ಮೈಸೂರಿನ ಗಲ್ಲಿ ಕಥೆ ಪುಸ್ತಕವನ್ನು ಬಿಡುಗಡೆಗೊಳಿಸಿದರು.  ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದ ಸುತ್ತೂರು ಶ್ರೀ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಅವರು, ಮೂರು ಕೃತಿಗಳ ವಿಷಯ ಆಯ್ಕೆ ವಿಭಿನ್ನವಾಗಿದೆ. ಗಲ್ಲಿ, ರಸ್ತೆಗಳ ಮಹತ್ವದ ಕುರಿತು ಬರೆಯುವುದು ಉತ್ತಮ ಪ್ರಯೋಗವಾಗಿದೆ. ಸೇನಾನಿಯಾಗುವ ಆಕಾಂಕ್ಷೆ ಹೊಂದಿದ್ದ ರಮೇಶ್ ಉತ್ತಪ್ಪ ಸಾಹಿತ್ಯ ರಚನೆ ಕೆಲಸ ಮಾಡಿದ್ದಾರೆ. ಇದರಲ್ಲಿ ಹೆಚ್ಚು ವ್ಯತ್ಯಾಸವಿಲ್ಲ. ಗನ್ ಹಿಡಿಯಬೇಕಾದವರು ಪೆನ್ನು ಹಿಡಿದಿದ್ದಾರೆ ಎಂದರು.  ಸಿಂದೂರ ಪುಸ್ತಕದಲ್ಲಿರುವ ವೀರ ಯೋಧರ ಯಶೋಗಾಥೆಗಳು ಯುವ ಜನತೆಗೆ ಪ್ರೇರಣೆಯಾಗಿವೆ. ಗ್ರಾಮ, ವೃತ್ತಘಿ, ರಸ್ತೆಘಿ, ಗಲ್ಲಿಗಳಿಗೆ ಒಂದೊಂದು ಇತಿಹಾಸವಿರುತ್ತದೆ ಈ ವಿಶೇಷತೆಯನ್ನು ಗುರುತಿಸುವ ಕೆಲಸವಾಗಬೇಕಿದೆ. ಈ ನಿಟ್ಟಿನಲ್ಲಿ ಪುಸ್ತಕ ರಚನೆ ಮಹತ್ವದ್ದಾಗಿದೆ ಎಂದರು.  ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಸೇರಿದಂತೆ ಸಾಕಷ್ಟು ಮಹಾಪುರುಷರ ಜೀವನ ಚರೀತ್ರೆಯೇ ನಮ್ಮೆಲ್ಲರಿಗೂ ಆದರ್ಶವಾಗಿವೆ. ಇಂತಹ ಹಲವಾರು ಮಹಾನ್ ವ್ಯಕ್ತಿಗಳ ಹೆಸರನ್ನು ಕೆಲವೊಂದು ವೃತ್ತಘಿ, ರಸ್ತೆಗಳಿಗೆ ಹೆಸರಿಸಲಾಗಿದೆ. ಇವುಗಳ ನೆಪದಲ್ಲಾದರೂ ಆದರ್ಶ ಪುರುಷರನು ಸ್ಮರಿಸಿಕೊಳ್ಳಬೇಕಿದೆ. ಈ ರೀತಿ ಹೆಸರುಗಳನ್ನು ಕುರಿತು ಬರೆದ ಉತ್ತಪ್ಪ ಅವರ ಪುಸ್ತಕಗಳ 2ನೇ ಆವೃತ್ತಿಯೂ ಬರಲಿ. ಒಳ್ಳೆಯ ವಿಷಯದ ಸಾಹಿತ್ಯಕ್ಕೆ ಓದುವವರು ಇದ್ದೇ ಇರುತ್ತಾರೆ ಎಂದರು.  ಕರ್ನಾಟಕ ಪೊಲೀಸ್ ಅಕಾಡೆಮಿ ಸಹಾಯಕ ನಿರ್ದೇಶಕ ಸಂದೇಶ್ ಕುಮಾರ್ ಮಾತನಾಡಿ, ಯುವಜನರು ಓದಿನಿಂದ ವಿಮುಖರಾಗುತ್ತಿರುವ ಇಂದಿನ ಹೊತ್ತಿನಲ್ಲಿ ಈ ಪುಸ್ತಕ ರಚನೆ ಔಚಿತ್ಯಪೂರ್ಣವಾಗಿದೆ. ಹಾಗಾಗಿ ಎಲ್ಲರೂ ಈ ಪುಸ್ತಕ ಹೃದಯಕ್ಕೆ ತೆಗೆದುಕೊಳ್ಳಬೇಕು. ಅಲ್ಲದೇ ಮುಂದಿನ ಪೀಳಿಗೆಗೆ ಇದನ್ನು ಕಾಪಿಡಬೇಕು ಎಂದರು. ಅಲೆಗ್ಸಾಂಡರ್, ಬಿಜ್ಜಳನ ಆಸ್ಥಾನದಲ್ಲಿದ್ದ ಬಸವೇಶ್ವರರು, ಬ್ರಿಟೀಷರ ಆಳ್ವಿಕೆಯಂತಹ ಇತಿಹಾಸದ ಬಗ್ಗೆ ಅರಿಯುವುದು  ಮುಖ್ಯ. ಇತಿಹಾಸ ಮರೆತು ಇತಿಹಾಸ ಸೃಷ್ಟಿಸಲು ಸಾಧ್ಯವಾಗದು. ಇತಿಹಾಸವನ್ನು ಕಡೆಗಣಿಸಿರುವುದರಿಂದಲೇ ಇಂದಿನ ಯುವ ಜನತೆ ಅಧೋಗತಿಗೆ ತಲುಪಿದ್ದಾರೆ ಎಂದರು. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರಿಯಪ್ಪ ವೃತ್ತವನ್ನು ಮೆಟೊಪೊಲ್ ವೃತ್ತ ಎನ್ನುತ್ತೇವೆ. ಬಿ.ಆರ್. ಅಂಬೇಡ್ಕರ್ ವೃತ್ತವನ್ನು ಎ್ಟಿಎಸ್ ವೃತ್ತ ಎನ್ನುತ್ತೇವೆ. ಡಾ. ರಾಜಕುಮಾರ್ ವೃತ್ತವನ್ನು ೌಂಟೆನ್ ವೃತ್ತವೆನ್ನುತ್ತೇವೆ. ಅಲ್ಲದೇ ಪಿ.ಕಾಂಳಿಂಗರಾವ್ ವೃತ್ತ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತವನ್ನು ಬೇರೆ ಹೆಸರಿನಿಂದ ಕರೆಯಲಾಗುತ್ತಿದೆ. ಕೃಷ್ಣದೇವರಾಯ ವೃತ್ತವನ್ನು ಕೆ.ಡಿ. ಸರ್ಕಲ್ ಎನ್ನುವುದು ಸರಿಯಲ್ಲ ಎಂದರು.  ಲೆಫ್ಟಿನೆಂಟ್ ಕರ್ನಲ್ ಪಿ.ಎಸ್. ಗಣಪತಿ ಅವರು ಮಾತನಾಡಿ, ಈ ಕೃತಿ ಇಂದಿನವರಿಗೆ ಮಾತ್ರವಲ್ಲದೇ ಭವಿಷ್ಯದ ಪೀಳಿಗೆಗೂ ಮಾದರಿಯಾಗಿದೆ. ಮೊಬೈಲ್, ವಾಟ್ಸಾಪ್ ಸೇಳತವಿರುವ ಕಾಲಘಟ್ಟದಲ್ಲಿ ಯುವಕರನ್ನು ಸಾಹಿತ್ಯದತ್ತ ಸೆಳೆಯುವ ಸಾಹಿತ್ಯ ರಚನೆ ಇದಾಗಿದೆ ಎಂದರು. ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿ, ಮೈಸೂರಿನ ವೃತ್ತ, ಗಲ್ಲಿಗಳ ಬಗ್ಗೆ ಬರೆದಿರುವುದು ನಮ್ಮ ನಾಡಿನ ಸಂಸ್ಕೃತಿ, ಆಚಾರ-ವಿಚಾರ, ಇತಿಹಾಸ ಉಳಿಸುವ ಕೆಲಸವಾಗಿದೆ ಎಂದರು.  ಸಂಗೀತ ವಿವಿ ಕುಲಪತಿ ನಾಗೇಶ್ ವಿ. ಬೆಟ್ಟಕೋಟೆ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮುದ್ರಣ ಮಾಧ್ಯಮ ಹಾಗೂ ಪೊಲೀಸರ ಸಮಾಗಮದಿಂದ ಒಳ್ಳೆಯ ವಿಚಾರಗಳು ಹೊರಬರುತ್ತವೆ. ಇದನ್ನು ಈ ಎರಡೂ ಕ್ಷೇತ್ರದ ಎಲ್ಲರೂ ಮಾದರಿಯಾಗಿ ಸ್ವೀಕರಿಸಬೇಕು. ಇದರಿಂದ ಹಲವು ಗೊಂದಲಗಲಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದರು. ಮೂರು ಪುಸ್ತಕಗಳ ರಚನೆಕಾರರಾದ ಪತ್ರಕರ್ತ, ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮೂರು ಪುಸ್ತಕಗಳ ರಚನೆ ಕುರಿತು ವಿವರಿಸಿದರು. ಕಾರ್ಯಕ್ರಮದಲ್ಲಿ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಜಾಗೂ ಪ್ರದರ್ಶಕ ಕಲೆಗಳ ವಿವಕ ಕುಲಸಚಿವರಾದ ಡಾ. ಮಂಜುನಾಥ್, ಮೈಸೂರು ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಎ. ಪಿ. ನಾಗೇಶ್, ವಿಸ್ಮಯ ಪ್ರಕಾಶನದ ಪ್ರಕಾಶ್ ಚಿಕ್ಕಪಾಳ್ಯ ಅವರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.21 : ಯಾರಿಗೂ ಹೋಲಿಕೆಯಿಲ್ಲದ ಒಂದು ಅಪರೂಪದ ಮಾನವ ಸಂಕುಲವಾಗಿರುವ ಕೊಡವರು ತಮ್ಮತನವನ್ನು ಉಳಿಸಿಕೊಳ್ಳಲು ಹಕ್ಕುಗಳನ್ನು…

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026

*ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*

ಮಾರ್ಚ್ 21, 2026

*ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.