Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿಜೆಪಿಯಿಂದ ತಪ್ಪು ಸಂದೇಶ : ಕೊಡಗು ಕಾಂಗ್ರೆಸ್ ಆರೋಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿಜೆಪಿಯಿಂದ ತಪ್ಪು ಸಂದೇಶ : ಕೊಡಗು ಕಾಂಗ್ರೆಸ್ ಆರೋಪ*

ಜುಲೈ 26, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.26 NEWS DESK : ಬಿಜೆಪಿಯ ಶಾಸಕರುಗಳೇ ಇದ್ದ ಇಪ್ಪತ್ತೈದು ವರ್ಷಗಳ ಅವಧಿಯಲ್ಲಿ ನಡೆಯದ ಅಭಿವೃದ್ಧಿ ಕಾರ್ಯಗಳು ಕಾಂಗ್ರೆಸ್ ಆಡಳಿತದ ಈ ಅವಧಿಯಲ್ಲಿ ನಡೆಯುತ್ತಿದೆ. ಆದರೆ ಜಿಲ್ಲೆಯ ಜನರಿಗೆ ಅಭಿವೃದ್ಧಿಯ ವಿಚಾರದಲ್ಲಿ ಬಿಜೆಪಿ ತಪ್ಪು ಸಂದೇಶವನ್ನು ನೀಡುತ್ತಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾದ ಟಿ.ಈ.ಸುರೇಶ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಡಾ.ಮಂತರ್ ಗೌಡ ಅವರು ಸಾಕಷ್ಟು ಉತ್ತಮ ಕೆಲಸಗಳನ್ನು ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಬಿಜೆಪಿ ಅವಧಿಯಲ್ಲಿ ನಡೆಯದ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ನಡೆಯುತ್ತಿದೆ. ಅಭಿವೃದ್ಧಿಯ ಬಗ್ಗೆ ಬಿಜೆಪಿಗೆ ಕಾಳಜಿ ಇದ್ದಿದ್ದರೆ ಅವರ ಅವಧಿಯಲ್ಲಿ ಅದನ್ನು ಮಾಡಬೇಕಿತ್ತು ಎಂದು ಹೇಳಿದರು. ಪ್ರತಿಪಕ್ಷ ಬಿಜೆಪಿಗೆ ಅಭಿವೃದ್ಧಿಯ ಬಗ್ಗೆ ಕಾಳಜಿ ಇಲ್ಲ. ಇದಕ್ಕೆ ಬದಲಾಗಿ ಕೇವಲ ಕಾಂಗ್ರೆಸ್ ಆಡಳಿತವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನಷ್ಟೆ ಮಾಡುತ್ತಿರುವುದಾಗಿ ಟೀಕಿಸಿದರು. *ಅಭಿವೃದ್ಧಿ ಕಾರ್ಯ* ::  ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಅವರು ತಮ್ಮ ಇಲ್ಲಿನವರೆಗಿನ ಅಧಿಕಾರದ ಅವಧಿಯಲ್ಲಿ ಸರ್ಕಾರದಿಂದ ವಿಶೇಷ ಅನುದಾನಗಳನ್ನು ಪಡೆದುಕೊಳ್ಳುವ ಮೂಲಕ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ನಡೆಸಿರುವುದಾಗಿ ಟಿ.ಈ.ಸುರೇಶ್ ತಿಳಿಸಿದರು.  ಮಡಿಕೇರಿ-ವಿರಾಜಪೇಟೆ ನಡುವೆ 32.48 ಕೋಟಿ ವೆಚ್ಚದಲ್ಲಿ  66 ಕೆ.ವಿ.ವಿದ್ಯುತ್ ಮಾರ್ಗ ನಿರ್ಮಾಣ, 24.17 ಕೋಟಿ ವೆಚ್ಚದಲ್ಲಿ ಮಡಿಕೇರಿ, ಮೂರ್ನಾಡು, ಸೋಮವಾರಪೇಟೆ ಮಾದಾಪುರ ಜಂಬೂರಿನಲ್ಲಿ ವಿದ್ಯುತ್ ಉಪ ಕೇಂದ್ರಗಳ ನಿರ್ಮಾಣ ಕಾಮಗಾರಿಗಳು ಶಾಸಕರ ಅವಧಿಯಲ್ಲಿ ನಡೆದಿದೆ. ಕರ್ಣಂಗೇರಿಯಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪನೆಗೆ 12.26 ಕೊಟಿ ಅನುದಾನವನ್ನು ಒದಗಿಸುವಲ್ಲಿ ಶಾಸಕರ ಪ್ರಯತ್ನ ದೊಡ್ಡದು. 1 ಕೋಟಿ ರೂ. ವೆಚ್ಚದಲ್ಲಿ ಕುಶಾಲನಗರದಲ್ಲಿ ಕಲಾ ಭವನ ನಿರ್ಮಾಣ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ 10.70 ಕೋಟಿ ವೆಚ್ಚದ ಎಂಆರ್‍ಐ ಸ್ಕ್ಯಾನಿಂಗ್ ಆರಂಭ, ಮಡಿಕೇರಿಯಲ್ಲಿ 50 ಲಕ್ಷ ವೆಚ್ಚದಲ್ಲಿ ಮಹಾತ್ಮಾ ಗಾಂಧಿ ಸ್ಮಾರಕ ನಿರ್ಮಾಣ ಕಾಮಗಾರಿಗಳು ಕಾಂಗ್ರೆಸ್ ಅವಧಿಯಲ್ಲಿ ನಡೆದಿರುವುದಾಗಿ ಸುರೇಶ್ ತಿಳಿಸಿದರು. ಶನಿವಾರಸಂತೆಯಲ್ಲಿ ಜನರ ಹಲ ವರ್ಷಗಳ ಬೇಡಿಕೆಯಾದ ಕೆಎಸ್‍ಆರ್‍ಇಸಿ ಬಸ್ ನಿಲ್ದಾಣಕ್ಕೆ 1.70 ಕೋಟಿ ಅನುದಾನ ಒದಗಿಸಿರುವುದು ಹೀಗೆ ಹತ್ತು ಹಲವು ಅಭಿವೃದ್ಧಿ ಕಾರ್ಯಗಳು ಶಾಸಕ ಡಾ. ಮಂತರ್ ಗೌಡ ಅವರ ಮುತುವರ್ಜಿಯಿಂದ ನಡೆಯುತ್ತಿರುವುದಾಗಿ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ನಗರಸಭಾ ನಾಮನಿರ್ದೇಶಿತ ಸದಸ್ಯರಾದ ಬಿ.ಎನ್.ಮುದ್ದುರಾಜ್, ಸದಾ ಮುದ್ದಪ್ಪ, ನಿಡ್ತ ಗ್ರಾ.ಪಂ ಅಧ್ಯಕ್ಷ ಟಿ.ಕೆ.ಅಶೋಕ್, ಸದಸ್ಯ ವಿ.ತಸ್ಲಿಮ್ ಹಾಗೂ ಪ್ರಮುಖರಾದ ಹೆಚ್.ಎಂ.ಜಯರಾಂ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.