
ಸೋಮವಾರಪೇಟೆ ಜು.26 NEWS DESK : ಕಾರ್ಗಿಲ್ ವಿಜಯ ದಿನದ ಅಂಗವಾಗಿ ಹಿಂದೂಜಾಗರಣ ವೇದಿಕೆ ವತಿಯಿಂದ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಸೈನಿಕರಿಗೆ ಗೌರವ ಸಲ್ಲಿಸಲಾಯಿತು. ಸೋಮವಾರಪೇಟೆ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಈರಪ್ಪ ದಿನದ ಮಹತ್ವ ಕುರಿತು ಮಾತನಾಡಿದರು. ಈ ಸಂದರ್ಭ ದೇಶಕ್ಕಾಗಿ ಬಲಿದಾನ ಮಾಡಿದ ಸೈನಿಕರಿಗೆ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಸೈನಿಕರು , ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಹಾಗೂ ದೇಶಭಕ್ತರು ಭಾಗವಹಿಸಿದರು.









