Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ : ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳಲಿ : ಕೆ.ವಿ.ಪ್ರಭಾಕರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ : ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳಲಿ : ಕೆ.ವಿ.ಪ್ರಭಾಕರ್*

ಜುಲೈ 28, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.28 NEWS DESK : ನಾವು ಸಮಾಜವನ್ನು ನೋಡುವ ದೃಷ್ಟಿಯನ್ನು ಕಳೆದುಕೊಂಡರೆ ಕಣ್ಣಿರುವ ಕುರುಡರನ್ನು, ಕಿವಿ ಇರುವ ಕಿವುಡರನ್ನು ಸೃಷ್ಟಿಸುತ್ತೇವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆ ಹಾಗೂ ಶೈಕ್ಷಣಿಕ ಸಾಧಕ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯಭಾಷಣಗಾರರಾಗಿ ಪಾಲ್ಗೊಂಡು ಮಾತನಾಡಿದರು. ಪತ್ರಕರ್ತರಿಗೆ ಸಮಾಜದಲ್ಲಿ ವಿಶೇಷ ಸ್ಥಾನಮಾನವಿದೆ. ಸಮಾಜದ ಮೂರನೇ ಕಣ್ಣು ಆಗಿರುವ ಪತ್ರಕರ್ತರು ಯಾವುದೇ ಕಾರಣಕ್ಕೂ ದೃಷ್ಟಿ ಕಳೆದುಕೊಳ್ಳಬಾರದು. ಪ್ರಸ್ತುತ ಸನ್ನಿವೇಶದಲ್ಲಿ ಪತ್ರಕರ್ತರ ದೃಷ್ಟಿಕೋನ ಬದಲಾಗಿದೆ. ಊಹ ಪತ್ರಿಕೋದ್ಯಮ ಭರಾಟೆಯಿಂದ ಟೀಕೆ-ಟಿಪ್ಪಣಿ ಎದುರಿಸುತ್ತಿರುವುದು ಕಳವಳಕಾರಿ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು. ಪತ್ರಕರ್ತರು ತಮ್ಮ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಸಮಾಜ ಹಾಗೂ ಸರಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡುವುದರೊಂದಿಗೆ ವೃತ್ತಿಧರ್ಮ ಪಾಲಿಸಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯ ಹೆಸರಿನಲ್ಲಿ ಬೇರೆಯವರ ಸ್ವಾತಂತ್ರ್ಯ ಕಸಿಯಬಾರದು. ಎಂದಿಂಗೂ ಅರ್ಧ ಸತ್ಯ ಜನರಿಗೆ ಮುಟ್ಟಿಸಬಾರದು. ಮುದ್ರಣ ಹಾಗೂ ಟಿವಿ ಮಾಧ್ಯಮದ ನಡುವೆ ಸಾಮಾಜಿಕ ಜಾಲತಾಣಗಳು ಮಾಧ್ಯಮಗಳಾಗಿ ಬದಲಾಗಿ ಜನರಲ್ಲಿ ಗೊಂದಲ ಮೂಡಿ ವಾಸ್ತವತೆ ಮರೆಯಾಗುತ್ತಿರುವ ಹಂತಕ್ಕೆ ತಲುಪಿದೆ. ಇದನ್ನು ಸರಿಪಡಿಸುವ ಕೆಲಸ ಪತ್ರಕರ್ತರಿಂದಷ್ಟೆ ಸಾಧ್ಯವಾಗುತ್ತದೆ. ಆತ್ಮಾವಲೋಕನ ಮಾಡಿಕೊಳ್ಳುವ ಸನ್ನಿವೇಶವೂ ನಿರ್ಮಾಣವಾಗಿದೆ ಎಂದು ಹೇಳಿದರು. ಯುವಪೀಳಿಗೆ ಕೌಟುಂಬಿಕ ಹಾಗೂ ಸಾಮಾಜಿಕ ಬಾಂಧವ್ಯವನ್ನು ಕಳೆದುಕೊಂಡು ತಂತ್ರಜ್ಞಾನದೊಂದಿಗೆ ಸಂಬಂಧ ಬೆಳೆಸಿಕೊಳ್ಳುತ್ತಿರುವುದು ಆತಂಕಕಾರಿ ವಿಷಯ ಎಂದು ಪ್ರಭಾಕರ್ ಹೇಳಿದರು. ಮಕ್ಕಳಲ್ಲಿ ಮಾತು ಕಡಿಮೆಯಾಗಲು ಮೊಬೈಲ್ ಬಳಕೆ ಹೆಚ್ಚಾಗಿರುವುದು ಕಾರಣವಾಗುತ್ತಿದೆ. ಅಮ್ಮನ ಮಡಿಲು, ಕೈ ತುತ್ತು ಮರೆಯಾಗಿ ಒಂದು ಕೋಣೆಯಲ್ಲಿ ಮೊಬೈಲ್‌ನೊಂದಿಗೆ ಹೆಚ್ಚು ಸಮಯ ಕಳೆಯುತ್ತಿರುವುದರಿಂದ ಸಾಮಾಜಿಕವಾಗಿ ವಿಮುಖರಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಪೋಷಕರು ಅಂಕದೊಂದಿಗೆ ಜೀವನದ ಅಂಕವೂ ಮುಖ್ಯ ಎಂಬುದನ್ನು ಕಲಿಸಬೇಕು. ಶಿಕ್ಷಣ ಮೌಲ್ಯದೊಂದಿಗೆ ಜೀವನ ಮೌಲ್ಯವೂ ಮುಖ್ಯವಾಗಿರುತ್ತದೆ. ಪ್ರಕೃತಿ ಜೊತೆ ಬೆಳಸಬೇಕು. ಸಮಾಜದ ಬಗ್ಗೆ ಚಿಂತನೆ ಮಾಡುವ ಮನಸ್ಥಿತಿಯನ್ನು ರೂಢಿಸಿಕೊಳ್ಳಲು ಪ್ರೇರೆಪಿಸಬೇಕು. ತಾಂತ್ರಿಕತೆ ಮುಂದುವರೆಯುತ್ತಿದಂತೆ ವ್ಯಕ್ತಿತ್ವ ಪಾತಾಳ ತಲುಪುತ್ತಿರುವುದಕ್ಕೆ ಕಡಿವಾಣ ಹಾಕಬೇಕೆಂದ ಅವರು, ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆಯಡಿ ರೂ. ೫ ಲಕ್ಷದ ತನಕ ಉಚಿತ ಚಿಕಿತ್ಸೆ ನೀಡಲು ಸರಕಾರ ಕ್ರಮಕೈಗೊಂಡಿದೆ. ಪತ್ರಕರ್ತರಿಗೆ ವಸತಿ ಸೌಲಭ್ಯ ಕಲ್ಪಿಸುವ ಬಗ್ಗೆ ಚಿಂತನೆ ಇದೆ. ಕೊಡಗು ಜಿಲ್ಲೆಯ ವಾರ್ತಾ ಇಲಾಖೆಗೆ ಪತ್ರಕರ್ತರ ಓಡಾಟಕ್ಕೆ ಅವಶ್ಯಕವಿರುವ ವಾಹನ ಮಂಜೂರಿಗೆ ಮುಖ್ಯಮಂತ್ರಿ ಗಮನ ಸೆಳೆಯಲಾಗುವುದು ಎಂದರು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೊಡಗಿನ ಪತ್ರಕರ್ತರು ಜನಪರವಾಗಿ ಕೆಲಸ ಮಾಡುತ್ತಿದ್ದಾರೆ. ಸಮಾಜದ ಶ್ರೇಯೋಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅಗತ್ಯ ಸಲಹೆಗಳನ್ನು ನೀಡುವ ಮೂಲಕ ಅಭಿವೃದ್ಧಿಗೆ ಸಹಕರಿಸುತ್ತಿದ್ದಾರೆ. ಸಮಾಜದ ದೃಷ್ಟಿಕೋನದಲ್ಲಿ ಚಿಂತಿಸುವ ಪತ್ರಕರ್ತರ ಅಭಿಪ್ರಾಯವನ್ನು ಜನಪ್ರತಿನಿಧಿಗಳೂ ಸಕರಾತ್ಮಕವಾಗಿ ಸ್ವೀಕಾರ ಮಾಡಬೇಕು. ಸಾಮಾಜಿಕ ಜಾಲತಾಣದ ಸುದ್ದಿಯನ್ನು ಕೊಡಗಿನ ಜನ ನಂಬುವುದು ಕಷ್ಟ. ಇಂದಿಗೂ ಪತ್ರಿಕೆಗಳನ್ನು ಅವಲಂಬಿಸಿದ್ದಾರೆ ಎಂದ ಅವರು, ಜಿಲ್ಲೆಯ ಪತ್ರಕರ್ತರು ಇಂದಿಗೂ ಸ್ವಂತ ವಸತಿ ಇಲ್ಲದೆ ಸಂಕಷ್ಟದಲ್ಲಿದ್ದು, ಅವರಿಗಾಗಿ ವಿಶೇಷ ಯೋಜನೆ ರೂಪಿಸಿ ನಿವೇಶನ ಒದಗಿಸಲು ಪ್ರಯತ್ನಿಸಲಾಗುವುದು. ಚಟುವಟಿಕೆಗೆ ಮತ್ತೊಂದು ಭವನದ ಅಗತ್ಯತೆಯೂ ಇದೆ. ಈ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಭರವಸೆ ನೀಡಿದರು. ವಸತಿ ಸಚಿವರ ಮಾಧ್ಯಮ ಸಂಯೋಜಕ ಲಕ್ಷ್ಮಿ ನಾರಾಯಣ್ ಮಾತನಾಡಿ, ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್, ಸಂಜೀವಿನಿ ಯೋಜನೆ ಅನುಷ್ಠಾನಗೊಂಡು ಬಹುಕಾಲದ ಕನಸು ಈಡೇರಿದೆ. ಮಾಧ್ಯಮಗಳ ರೂಪಾಂತರ ನಡುವೆ ವಾಸ್ತವ ಸ್ಥಿತಿ ತಲುಪಿಸುವುದು ಕಷ್ಟದಾಯಕ ಎಂಬಂತಾಗಿದೆ. ಪ್ರಸ್ತುತ ಸನ್ನಿವೇಶದಲ್ಲಿ ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯತೆ ಇದೆ. ಕೊಡಗು ಭಾಗದ ಪತ್ರಕರ್ತರು ಸೂಕ್ಷ್ಮ ಸಂವೇಧನಾಶೀಲರಾಗಿದ್ದಾರೆ. ಬೇರೆ ಜಿಲ್ಲೆಗೆ ಹೋಲಿಸಿದರೆ ಕೊಡಗು, ಮಲೆನಾಡು ಭಾಗದಲ್ಲಿ ಸಮಸ್ಯೆಗಳ ಸ್ವರೂಪ ಬೇರೆ ರೀತಿ ಇದೆ. ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆಯುವ ಪ್ರಯತ್ನ ಪತ್ರಕರ್ತರು ಮಾಡಬೇಕು. ಅಭಿವೃದ್ಧಿ, ಪರಿಸರ ಸಂರಕ್ಷಣೆ ಸುದ್ದಿ ಕಡೆ ಗಮನ ಹರಿಸಿಸಬೇಕು. ಪತ್ರಕರ್ತರಿಗೆ ನಿವೇಶನ ಕೊಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಹಿಂದೆಲ್ಲ ಮಕ್ಕಳಿಗೆ ಶಿಕ್ಷಣ ಒದಗಿಸುವ ಕುರಿತು ಪೋಷಕರಲ್ಲಿ ಗಂಭೀರ ಚಿಂತನೆಗಳಿರಲಿಲ್ಲ. ಆದರೆ, ಇಂದು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ ಬೆಳೆಸುತ್ತಿರುವುದು ಶ್ಲಾಘನೀಯ ವಿಷಯವಾಗಿದೆ ಎಂದು ಹೇಳಿದ ಅವರು, ೯೩ ವರ್ಷ ತುಂಬಿದ ಸಂಘಟನೆ ಹಲವು ಏಳು-ಬೀಳು ಕಂಡು ಇಂದು ಬೆಳೆದಿದೆ. ಆದರೆ, ನಮ್ಮ ಬೇಡಿಕೆಗಳು ಈಡೇರಲು ಇಷ್ಟು ಕಾಲ ಬೇಕಾಯಿತು ಎಂಬುದು ವಿಪರ್ಯಾಸ. ಮೂರು ದಶಕಗಳ ಹೋರಾಟದಿಂದ ಬಸ್ ಪಾಸ್ ಸೌಲಭ್ಯ ದೊರೆತಿದೆ. ಮಾಧ್ಯಮ ಸಂಜೀವಿನಿ ಯೋಜನೆಯೂ ಜಾರಿಯಾಗಿದೆ. ಪತ್ರಕರ್ತರ ಪಿಂಚಣಿ ಹೆಚ್ಚಾಗಿದೆ. ಪತ್ರಕರ್ತರ ನೆರವಿಗೆ ಸಕಾಲದಲ್ಲಿ ಸಂಘಟನೆ ಸ್ಪಂದಿಸುತ್ತಿದೆ ಎಂದರು. ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ಯುವಪೀಳಿಗೆ ಉತ್ತಮ ಪ್ರಜೆಯಾಗಿ ಸಮಾಜದ ಏಳಿಗೆಗೆ ಕೈ ಜೋಡಿಸಬೇಕೆಂದರು. ಲಿಟಲ್ ಸ್ಕಾಲರ್ ಅಕಾಡೆಮಿ ಮುಖ್ಯಸ್ಥೆ ಪೂಜಾ ಸಜೇಶ್ ಮಾತನಾಡಿ, ಮಕ್ಕಳೊಂದಿಗೆ ಪೋಷಕರು ಸ್ನೇಹಿತರಂತೆ ಇರಬೇಕು. ಅವರ ಕಲಿಕೆಗೆ ಪ್ರೋತ್ಸಾಹ ನೀಡಬೇಕು ಹೊರತು ಹೆಜ್ಜೆಹೆಜ್ಜೆಗೂ ಅಡಚಣೆಯಾಗಬಾರದು. ಸಕರಾತ್ಮಕ ಚಿಂತನೆಗಳನ್ನು ತುಂಬಬೇಕು ಎಂದು ಕರೆ ನೀಡಿದರು. ಸಮಾಜ ಸೇವಕ, ಎಸ್.ಎನ್.ಡಿ.ಪಿ. ತಾಲೂಕು ಅಧ್ಯಕ್ಷ ಟಿ.ಆರ್.ವಾಸುದೇವ್ ಮಾತನಾಡಿದರು. 28 ವಿದ್ಯಾರ್ಥಿಗಳಿಗೆ ಇದೇ ಸಂದರ್ಭ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ಕಳೆದ ೪೦ ವರ್ಷಗಳಿಂದ ಕುಶಾಲನಗರ, ಹಾರಂಗಿ ಭಾಗದಲ್ಲಿ ಪತ್ರಿಕಾ ವಿತರಕರಾಗಿ ಕಾರ್ಯನಿರ್ವಹಿಸುತ್ತಿರುವ ಆರ್.ಚಂದ್ರಯ್ಯ, ಗ್ರಾಮೀಣ ಪತ್ರಕರ್ತರಿಗೆ ಬಸ್ ಬಸ್ ಒದಗಿಸುವಲ್ಲಿ ಶ್ರಮಿಸಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾ ರೈ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ಕಾರ್ಯಕ್ರಮ ಸಂಚಾಲಕ ಪಳೆಯಂಡ ಪಾರ್ಥ ಚಿಣ್ಣಪ್ಪ ಹಾಜರಿದ್ದರು. ಕುಡೆಕಲ್ಲು ಗಣೇಶ್ ಪ್ರಾರ್ಥಿಸಿ, ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ ಸ್ವಾಗತಿಸಿ, ಪ್ರಭುದೇವ್ ನಿರೂಪಿಸಿ, ಶಿವರಾಜು ವಂದಿಸಿದರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.