Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
  • *ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*
  • *ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*
  • *ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯ ಪೌರ ಕಾರ್ಮಿಕರಿಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರ : ಶ್ರಮಿಕ ವರ್ಗ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯ ಪೌರ ಕಾರ್ಮಿಕರಿಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರ : ಶ್ರಮಿಕ ವರ್ಗ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಕರೆ*

ಜುಲೈ 28, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.28 NEWS DESK : ನ್ಯಾಷನಲ್ ಮೆಡಿಕೋಸ್ ಸಂಸ್ಥೆಯ ಕೊಡಗು ಘಟಕ ಮತ್ತು ಕೊಡಗು ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ವತಿಯಿಂದ ಮಡಿಕೇರಿ ನಗರಸಭೆ ಪೌರ ಕಾರ್ಮಿಕರಿಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರ ಹಾಗೂ ಔಷಧಿಗಳ ವಿತರಣಾ ಕಾರ್ಯಕ್ರಮ ನಡೆಯಿತು. ನಗರಸಭೆಯ ಸ್ಥಾಯಿ ಸಮತಿ ಸಭಾಂಗಣದಲ್ಲಿ ನಡೆದ ಶಿಬಿರವನ್ನು ಪೌರಾಯುಕ್ತ ಹೆಚ್.ಆರ್.ರಮೇಶ್ ಹಾಗೂ ಪೌರ ಕಾರ್ಮಿಕ ಸುಂದರ ಅವರು ಉದ್ಘಾಟಿಸಿದರು. ಪೌರಾಯುಕ್ತ ಹೆಚ್.ಆರ್.ರಮೇಶ್ ಮಾತನಾಡಿ ನಗರದ ಸ್ವಚ್ಛತೆಗಾಗಿ ಪೌರ ಕಾರ್ಮಿಕರು ಬೆಳಗ್ಗಿನಿಂದ ಸಂಜೆಯವರೆಗೆ ಶ್ರಮ ಪಡುತ್ತಾರೆ. ಶ್ರಮಿಕ ಜೀವಿಗಳು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದರು. ಪೌರ ಕಾರ್ಮಿಕರ ಆರೋಗ್ಯವನ್ನು ಕಾಪಾಡಬೇಕು ಎನ್ನುವ ಉದ್ದೇಶದಿಂದ ನ್ಯಾಷನಲ್ ಮೆಡಿಕೋಸ್ ಸಂಸ್ಥೆ ಮತ್ತು ಕೊಡಗು ಸಂಸ್ಕೃತಿ ಸಿರಿ ಬಳಗ ಆರೋಗ್ಯ ಶಿಬಿರವನ್ನು ಆಯೋಜಿಸಿರುವುದು ಶ್ಲಾಘನೀಯ. ಸಂಘಟಕರಿಗೆ ಪೌರ ಕಾರ್ಮಿಕರ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು. ಜಿಲ್ಲಾ ಆಸ್ಪತ್ರೆಯ ತುರ್ತು ಘಟಕ ಮತ್ತು ನ್ಯಾಷನಲ್ ಮೆಡಿಕೋಸ್ ಸಂಸ್ಥೆಯ ಮುಖ್ಯಸ್ಥ ಡಾ.ಮೋಹನ್ ಅಪ್ಪಾಜಿ ಕೋಲೆಯಂಡ ಅವರು ಮಾತನಾಡಿ ನಿರಂತರ ಸ್ವಚ್ಛತಾ ಕಾರ್ಯದ ಮೂಲಕ ಸಮಾಜದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆಯೂ ಎಚ್ಚರ ವಹಿಸಬೇಕು. ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುವ ವಿಚಾರದಲ್ಲಿ ಪೌರಾಯುಕ್ತರು ಹೆಚ್ಚು ಆಸಕ್ತಿ ತೋರಿ ಕೇವಲ ಮೂರು ದಿನಗಳಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಟ್ಟು ಸಹಕರಿಸಿರುವುದು ಹೆಮ್ಮೆ ಎನಿಸಿದೆ. ಪೌರ ಕಾರ್ಮಿಕರು ಈ ರೀತಿಯ ಆರೋಗ್ಯ ಶಿಬಿರಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ನ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಮಾತನಾಡಿ ಪೌರ ಕಾರ್ಮಿಕರು ಕೊರೆಯುವ ಚಳಿ, ಮಳೆಯನ್ನೂ ಲೆಕ್ಕಿಸದೆ ಪ್ರತಿ ದಿನ ಬೆಳಿಗ್ಗೆ ಮಡಿಕೇರಿ ನಗರದ ಸ್ವಚ್ಛತಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಇವರಿಗಾಗಿ ಆರೋಗ್ಯ ಶಿಬಿರವನ್ನು ಆಯೋಜಿಸುವ ಮೂಲಕ ಅಳಿಲು ಸೇವೆ ಮಾಡುವ ಭಾಗ್ಯ ನಮಗೆ ದೊರೆತ್ತಿದೆ ಎಂದು ತಿಳಿಸಿದರು. ನ್ಯಾಷನಲ್ ಮೆಡಿಕೋಸ್ ಸಂಸ್ಥೆಯ ಸಹಯೋಗದೊಂದಿಗೆ ಸಿರಿ ಬಳಗ ಟ್ರಸ್ಟ್ ಈಗಾಗಲೇ ಹಲವು ಶಿಬಿರಗಳನ್ನು ಆಯೋಜಿಸಿ ಯಶಸ್ವಿಯಾಗಿದೆ. ಸಮಾಜಮುಖಿಯಾಗಿ ಕಾರ್ಯನಿರ್ವಹಿಸುತ್ತಿರುವ ವೈದ್ಯರುಗಳು ಕೂಡ ಶಿಬಿರಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯವೆಂದರು. ಟ್ರಸ್ಟಿ ಹಾಗೂ ಸಮಾಜ ಸೇವಕ ಕೆ.ಎಂ.ಬಿ.ಗಣೇಶ್ ಅವರು ಮಾತನಾಡಿ ಭೂಮಿಯ ಮೇಲೆ ಜೀವಿಸುವ ಮಾನವರೆಲ್ಲರೂ ಒಂದೇ ಆಗಿದ್ದು, ಎಲ್ಲೂ ಮೇಲುಕೀಳೆಂಬ ಭೇದಭಾವ ಇರಬಾರದು. ನಾವೆಲ್ಲರೂ ಮನುಷ್ಯರು, ಮಾನವೀಯ ಧರ್ಮ ದೊಡ್ಡದು. ಇದೇ ಕಾರಣಕ್ಕೆ ಪೌರ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರ ಆರೋಗ್ಯದ ಮೇಲಿನ ಕಾಳಜಿಯಿಂದ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ನ್ಯಾಷನಲ್ ಮೆಡಿಕೋಸ್ ಸಂಸ್ಥೆಯ ವೈದ್ಯ ವಿದ್ಯಾರ್ಥಿ ಡಾ.ವಿಕ್ರಂ ಶೆಟ್ಟಿ ಮಾತನಾಡಿ ಸಂಸ್ಥೆಯು ಈಗಾಗಲೇ ಜಮ್ಮು ಕಾಶ್ಮೀರದಿಂದ ಕೇರಳದವರೆಗೆ ವಿವಿಧ ಭಾಗಗಳಲ್ಲಿ ಆರೋಗ್ಯ ಶಿಬಿರಗಳನ್ನು ನಡೆಸಿದೆ. ಸಂಸ್ಥೆ ಹಾಗೂ ವೈದ್ಯರು ಸ್ವಾರ್ಥ ರಹಿತವಾಗಿ ಸೇವೆ ಸಲ್ಲಿಸುತ್ತಿದ್ದು, ಪೌರ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಿ ಅಗತ್ಯ ಔಷಧಿಗಳನ್ನು ನೀಡಲಾಗುವುದು. ಹೆಚ್ಚಿನ ಚಿಕಿತ್ಸೆಯ ಅನಿವಾರ್ಯತೆ ಇದ್ದರೆ ವೈದ್ಯರ ಸಲಹೆಯಂತೆ ಸಹಕರಿಸಲಾಗುವುದು ಎಂದು ತಿಳಿಸಿದರು. ಪೌರಾಯುಕ್ತರು ಸೇರಿದಂತೆ 35ಕ್ಕೂ ಹೆಚ್ಚು ಪೌರಕಾರ್ಮಿಕರು ಆರೋಗ್ಯ ಶಿಬಿರದ ಲಾಭ ಪಡೆದರು. ಕೊಡಗು ಮೆಡಿಕಲ್ ಕಾಲೇಜ್ ನ ವೈದ್ಯರುಗಳಾದ ಡಾ.ಬಸವರಾಜು, ಡಾ.ಭರತ್, ಡಾ.ಮಹೇಶ್ವರ, ಡಾ.ಶಾಹಿಲ್, ವೈದ್ಯ ವಿದ್ಯಾರ್ಥಿಗಳು ಹಾಗೂ ಆರೋಗ್ಯ ಶ್ರುಶೂಷಕರು ಅರೋಗ್ಯ ತಪಾಸಣೆ ನಡೆಸಿದರು. ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ನ ಉಪಾಧ್ಯಕ್ಷರಾದ ನಿಶಾ ಮೋಹನ್, ಪ್ರಮುಖರಾದ ಈರಮಂಡ ವಿಜಯ್ ಉತ್ತಯ್ಯ, ಸದಸ್ಯರಾದ ಮಂಜುಳಾ ಶಿವಕುಮಾರ್, ಸರಿತಾ ಅಯ್ಯಪ್ಪ, ಸಿಂಧೂರ್ ಅನಿಲ್, ನಗರಸಭೆಯ ಸಿಬ್ಬಂದಿಗಳಾದ ರಂಗಪ್ಪ, ಅಕ್ರಂ ಮತ್ತಿತರರು ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.21 : ಯಾರಿಗೂ ಹೋಲಿಕೆಯಿಲ್ಲದ ಒಂದು ಅಪರೂಪದ ಮಾನವ ಸಂಕುಲವಾಗಿರುವ ಕೊಡವರು ತಮ್ಮತನವನ್ನು ಉಳಿಸಿಕೊಳ್ಳಲು ಹಕ್ಕುಗಳನ್ನು…

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026

*ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*

ಮಾರ್ಚ್ 21, 2026

*ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.