
ಚೆಯ್ಯಂಡಾಣೆ ಜು.28 NEWS DESK : ಕಕ್ಕಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ನೇ ತರಗತಿಯ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿಲ್ಪಾ ಲೋಕೇಶ್ ಶಾಲೆಗೆ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಆಂಗ್ಲ ಮಾಧ್ಯಮ ಶಾಲೆಗೆ ದಾಖಲಾತಿಯನ್ನು ಹೆಚ್ಚಿಸುವಂತೆ ಸಲಹೆ ನೀಡಿದರು. ಶಾಲೆಯ ಪ್ರಬಾರಿ ಮುಖ್ಯ ಶಿಕ್ಷಕಿ ರಝೀನ ಪ್ರಸ್ತಾವಿಕವಾಗಿ ಮಾತನಾಡಿ, ಕನ್ನಡ ಮಾಧ್ಯಮ ಶಾಲೆಯ ಜೊತೆಯಲ್ಲಿ ಆಂಗ್ಲ ಮಾದ್ಯಮ ಪ್ರಾರಂಭಿಸಲು ಸರಕಾರದಿಂದ ಆದೇಶ ಬಂದಿದೆ. ಅದು ನಮ್ಮಗೆಲ್ಲರಿಗೂ ಸಂತೋಷದ ವಿಚಾರ ಎಂದ ಅವರು ಆಂಗ್ಲ ಮಾಧ್ಯಮ ಶಾಲೆಗೆ ಈ ವ್ಯಾಪ್ತಿಯ ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ಸೇರ್ಪಡೆಯಾಗುವಂತಾಗಲಿ ಎಂದರು. ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಅರುಣ್ ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಂಜಿಲ ಕಕ್ಕಬೆ ಗ್ರಾ.ಪಂ ಸದಸ್ಯರಾದ ಇಂದಿರಾ, ಶೈಲಾ, ಅತಿಥಿ ಶಿಕ್ಷಕರಾದ ಸಾಜೀದ, ಮಮತ, ಆಶಿಕಾ, ಎಸ್ ಡಿ ಎಂಸಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ : ಅಶ್ರಫ್









