Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
  • *ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*
  • *ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*
  • *ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ರಸ್ತೆ ಸುರಕ್ಷತೆಗೆ ಗಮನಹರಿಸಿ, ಅಪಘಾತ ತಪ್ಪಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ರಸ್ತೆ ಸುರಕ್ಷತೆಗೆ ಗಮನಹರಿಸಿ, ಅಪಘಾತ ತಪ್ಪಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

ಜುಲೈ 28, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.28 NEWS DESK : ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ರಸ್ತೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಗತ್ಯವಿರುವ ಕಡೆಗಳಲ್ಲಿ ವೇಗ ನಿಯಂತ್ರಣ ಸಂಬಂಧ ಹಂಪ್‍ಗಳನ್ನು ಅಳವಡಿಸುವುದು. ಜೊತೆಗೆ ಎದ್ದು ಕಾಣುವಂತೆ ಬಿಳಿ ಪಟ್ಟೆ ಬರೆಯುವುದು. ರಸ್ತೆ ಬದಿ ಗಿಡಗಂಟೆಗಳನ್ನು ಕಡಿಯುವುದು, ಜೊತೆಗೆ ರಸ್ತೆ ತಿರುವು, ಉಬ್ಬು ರಸ್ತೆ ಮತ್ತಿತರ ಬಗ್ಗೆ ಸೂಚನಾ ಫಲಕ ಅಳವಡಿಸಿ, ರಸ್ತೆ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಎಂಜಿನಿಯರ್‍ಗಳಿಗೆ ತಾಕೀತು ಮಾಡಿದರು. ಚಾಲಕರಿಗೆ ರಸ್ತೆಗೆ ಸಂಬಂಧಿಸಿದಂತೆ ಮಾಹಿತಿ ದೊರೆಯುವಂತಾಗಬೇಕು. ಇದರಿಂದ ವೇಗ ನಿಯಂತ್ರಣಕ್ಕೆ ಸಹಕಾರಿಯಾಗಿ ಅಪಘಾತ ತಡೆಯಬಹುದಾಗಿದೆ. ಆ ನಿಟ್ಟಿನಲ್ಲಿ ತುರ್ತು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದರು. ಕುಶಾಲನಗರದಿಂದ ಸಂಪಾಜೆ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಹಲವು ಅಪಘಾತಗಳು ಸಂಭವಿಸುತ್ತಿದ್ದು, ಅಪಘಾತ ನಿಯಂತ್ರಣಕ್ಕೆ ಕ್ರಮವಹಿಸಬೇಕು. ಕೊಯನಾಡು ಬಳಿ ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಪದೇ ಪದೇ ಹೆದ್ದಾರಿಯಲ್ಲಿ ಅಪಘಾತ ಸಂಭವಿಸುತ್ತಿದ್ದು, ಈ ಬಗ್ಗೆ ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದರು. ವಿರಾಜಪೇಟೆ-ಗೋಣಿಕೊಪ್ಪ ಮಾರ್ಗದ ಆತೂರು ಜಂಕ್ಷನ್ ಬಳಿ ಸೂಚನಾ ಫಲಕ ಅಳವಡಿಸಬೇಕು. ಜೊತೆಗೆ ರಸ್ತೆ ಹಂಪ್‍ಗಳನ್ನು ಅಳವಡಿಸಬೇಕು. ವೇಗವಾಗಿ ವಾಹನ ಚಲಾಯಿಸುವುದರಿಂದ ಅಪಘಾತಗಳು ಹೆಚ್ಚಾಗಲಿವೆ. ಈ ಸಂಬಂಧ ಗಮನಹರಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ, ಪಂಚಾಯತ್ ಇಲಾಖೆ ವ್ಯಾಪ್ತಿಯ ರಸ್ತೆಗಳನ್ನು ಸರಿಯಾಗಿ ನಿರ್ವಹಣೆ ಮಾಡದೆ ಅಪಘಾತಗಳು ಸಂಭವಿಸಿದ್ದಲ್ಲಿ ತಮ್ಮ ಮೇಲೆ ಸೋಮೋಟೋ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು. ರಸ್ತೆ ಸುರಕ್ಷತೆ ಬಗ್ಗೆ ಎಂಜಿನಿಯರ್‍ಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಒಂದು ವಾರದಲ್ಲಿ ತಾಲ್ಲೂಕುವಾರು ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಮುಂದಿನ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಆಗಸ್ಟ್, 21 ರಂದು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಸಿದರು. ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಮಾತನಾಡಿ, ರಸ್ತೆ ಸುರಕ್ಷತೆ ಸಂಬಂಧಿಸಿದಂತೆ ಎಲ್ಲೆಲ್ಲಿ ಹಂಪ್‍ಗಳನ್ನು ಅಳವಡಿಸಬೇಕು. ಬಿಳಿ ಬಣ್ಣ ಬಳಿಯಬೇಕು ಎಂಬ ಬಗ್ಗೆ, ಹೆಚ್ಚಿನ ಅಫಘಾತ ಸಂಭವಿಸುವ ಸ್ಥಳದ ಬಗ್ಗೆ ಎರಡು ಮೂರು ದಿನದಲ್ಲಿ ಪಟ್ಟಿ ನೀಡಲಾಗುವುದು ಎಂದು ತಿಳಿಸಿದರು. ಅಪಘಾತದಿಂದ ಹಲವರು ಜೀವ ಕಳೆದುಕೊಳ್ಳುತ್ತಿದ್ದು, ಅಪಘಾತ ತಡೆಯುವುದು ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಅತೀ ಮುಖ್ಯ. ಪ್ರತಿಯೊಬ್ಬರ ಜೀವವು ಅಮೂಲ್ಯವಾಗಿದ್ದು, ಈ ಬಗ್ಗೆ ಗಮನಹರಿಸಬೇಕು. ಆ ನಿಟ್ಟಿನಲ್ಲಿ ಪೊಲೀಸ್, ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ, ಹೀಗೆ ವಿವಿಧ ಇಲಾಖೆಗಳ ಜವಾಬ್ದಾರಿ ಹೆಚ್ಚಿನದ್ದಾಗಿದೆ ಎಂದರು. ಅರ್ಧ ಕಿಲೋಮೀಟರ್ ಒಳಗೆ ಪದೇ ಪದೇ ಅಪಘಾತ ಸಂಭವಿಸಿದ್ದಲ್ಲಿ ‘ಬ್ಲಾಕ್ ಸ್ಪಾಟ್ ಎಂದು ಗುರುತಿಸಲಾಗುತ್ತದೆ ಎಂದು ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ ವಿಭಾಗದ ಎಂಜಿನಿಯರ್ ಜಿ.ಎಸ್.ಗಿರೀಶ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಪಂಚಾಯತ್ ರಾಜ್ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಜಿ.ಕೆ.ನಾಯಕ್ ಅವರು ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ ನೀಡಿದರು. ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ಪೌರಾಯುಕ್ತರಾದ ಎಚ್.ಆರ್.ರಮೇಶ್, ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕದ ಸಹಾಯಕ ಸಂಚಾರ ಅಧೀಕ್ಷಕರಾದ ಎ.ಈರಸಪ್ಪ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.21 : ಯಾರಿಗೂ ಹೋಲಿಕೆಯಿಲ್ಲದ ಒಂದು ಅಪರೂಪದ ಮಾನವ ಸಂಕುಲವಾಗಿರುವ ಕೊಡವರು ತಮ್ಮತನವನ್ನು ಉಳಿಸಿಕೊಳ್ಳಲು ಹಕ್ಕುಗಳನ್ನು…

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026

*ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*

ಮಾರ್ಚ್ 21, 2026

*ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.