Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಂಬೂರಿನಲ್ಲಿ ನಿವೇಶನ ರಹಿತ ನಿವೇಶನ ನೀಡಲು ಆಗ್ರಹ*
  • *ಜಂಬೂರುವಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*
  • *ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 
  • *ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*
  • *ಬೆನೆಡಿಕ್ಟ್ ಆರ್ ಸಲ್ಡಾನ ಅವರಿಗೆ ಬೀಳ್ಕೊಡುಗೆ*
  • *ವಿರಾಜಪೇಟೆ ಕಾವೇರಿ ಕಾಲೇಜಿನ ಪದವಿ ವಿಭಾಗದ ನೂತನ ಪ್ರಾಂಶುಪಾಲರಾಗಿ ಡಾ.ಕುಪ್ಪಂಡ ವೀಣಾ ಅಧಿಕಾರ ಸ್ವೀಕಾರ*
  • *ಸರ್ಕಾರ ಗ್ರಾ.ಪಂ ಅಭಿವೃದ್ಧಿಗೆ ನೀಡಿರುವ ಅಧಿಕಾರ ಚಲಾಯಿಸಿ : ಡಿ.ಆರ್.ಪಾಟೀಲ*
  • *ಮೇ 5 ರಂದು ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ*
  • *ಮೇ 16 ಮತ್ತು 17 ರಂದು ಮಡಿಕೇರಿಯಲ್ಲಿ ಕುಲಾಲ-ಕುಂಬಾರ ಬಾಂಧವರ ಕ್ರೀಡೋತ್ಸವ ಮತ್ತು ಸಮ್ಮಿಲನ*
  • *ಗೌಡ ಕುಟುಂಬಗಳ “ಕುಟುಂಬ-2026” ಪಂದ್ಯಾವಳಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ಮಳೆ ಕೊಂಚ ಇಳಿಮುಖ : ಕಡಿಮೆಯಾಗದ ಗಾಳಿಯ ತೀವ್ರತೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ಮಳೆ ಕೊಂಚ ಇಳಿಮುಖ : ಕಡಿಮೆಯಾಗದ ಗಾಳಿಯ ತೀವ್ರತೆ*

ಜುಲೈ 29, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.29 NEWS DESK : ಕಳೆದ ಒಂದು ವಾರದಿಂದ ಕೊಡಗಿನ ಜನರನ್ನು ಕಾಡಿದ ಮಹಾಮಳೆ ಇಂದು ಕೊಂಚ ಇಳಿಮುಖಗೊಂಡಿತು. ಆದರೆ ಗಾಳಿಯ ತೀವ್ರತೆ ಹಾಗೇ ಇದ್ದು, ಕೆಲವು ಭಾಗಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಶೀತ ಗಾಳಿ ಸಹಿತ ಸಾಧಾರಣ ಮಳೆಯಾಗುತ್ತಿದೆ. ಸೋಮವಾರಪೇಟೆ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನಲ್ಲಿ ಮಳೆ ಕಡಿಮೆಯಾಗಿದೆ. ನಿರಂತರ ಮಳೆಯ ಕಾರಣ ನದಿಗಳು ತುಂಬಿ ಹರಿಯುತ್ತಿದ್ದು, ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕೂಡಿಗೆ ಸೇತುವೆಯಲ್ಲಿ ಸಂಚಾರವನ್ನು ನಿಷೇಧಿಸಿ ಬಂದ್ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಗಾಳಿಯಿಂದ ಮರ ಮತ್ತು ವಿದ್ಯುತ್ ಕಂಬಗಳು ಬೀಳುತ್ತಲೇ ಇದ್ದು, ಮನೆಗಳಿಗೆ ಹಾನಿಯಾಗಿದೆ. ಅತ್ಯಂತ ಅಪಾಯಕಾರಿ ಪ್ರದೇಶಗಳಲ್ಲಿ ವಾಸವಿರುವ ಕುಟುಂಬಗಳಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಬಹುತೇಕ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ವಿದ್ಯುತ್ ಮಾರ್ಗಗಳ ದುರಸ್ತಿಯಲ್ಲಿ ಚೆಸ್ಕಾಂ ಸಿಬ್ಬಂದಿಗಳು ತೊಡಗಿಸಿಕೊಂಡಿದ್ದಾರೆ. ಕೊಡಗು ಜಿಲ್ಲೆ ಬೆಟ್ಟಗುಡ್ಡಗಳ ಪ್ರದೇಶವಾಗಿರುವುದರಿಂದ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿ ತ್ವರಿತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಡಿಕೇರಿ ನಗರದಲ್ಲಿ ಮೈಕೊರೆಯುವ ಚಳಿ ಇದ್ದು, ನಿರಂತರ ಮಳೆಯಿಂದ ಹಲವು ಕಡೆ ಬರೆಗಳು ಕುಸಿದು ಹಾನಿಯಾಗಿದೆ. ಎತ್ತರದ ಪ್ರದೇಶದಲ್ಲಿ ವಾಸವಿರುವ ಕುಟುಂಬಗಳಿಗೆ ಎಚ್ಚರಿಕೆಯಿಂದ ಇರುವಂತೆ ನಗರಸಭೆ ಸೂಚನೆ ನೀಡಿದೆ. *ಒಂದು ತಿಂಗಳು ಭಾರೀ ಮಳೆ* ಜಿಲ್ಲೆಯಲ್ಲಿ ಇನ್ನೂ ಒಂದು ತಿಂಗಳು ಭಾರೀ ಮಳೆಯಾಗುವುದರಿಂದ ಜಿಲ್ಲಾಡಳಿತ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರತಿ ಆಗಷ್ಟ್ ತಿಂಗಳಿನಲ್ಲಿ ಜಿಲ್ಲೆಯಲ್ಲಿ ಜಲಸ್ಫೋಟ, ಪ್ರವಾಹ ಮತ್ತು ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿರುವುದರಿಂದ ಸಂಬಂಧಿಸಿದ ಎಲ್ಲಾ ಇಲಾಖೆಗಳು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿದೆ. *ಮಳೆ ವಿವರ* ಕೊಡಗು ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 90 ಇಂಚು ಮಳೆಯಾಗಿದ್ದು, ಮಡಿಕೇರಿ ತಾಲ್ಲೂಕಿನಲ್ಲಿ ದಾಖಲೆಯ 130 ಇಂಚು ಮಳೆ ಸುರಿದಿದೆ. ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 13.86 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 5.33 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2089.90 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1949.47 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 14.88 ಮಿ.ಮೀ. ಕಳೆದ ವರ್ಷ ಇದೇ ದಿನ 4.92 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3124.64 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2635.91 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 5.75 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1914.05 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1775.75 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 9.90 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.77 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2000.94 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1862.09 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 28.95 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 14.85 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2367.27 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2269.71 ಮಿ.ಮೀ. ಮಳೆಯಾಗಿತ್ತು. ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 9.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1042.59 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1203.90 ಮಿ.ಮೀ. ಮಳೆಯಾಗಿತ್ತು. *ಹೋಬಳಿವಾರು ದಾಖಲಾಗಿರುವ ಮಳೆ* ಮಡಿಕೇರಿ ಕಸಬಾ 14, ನಾಪೋಕ್ಲು 7.20, ಸಂಪಾಜೆ 16.50, ಭಾಗಮಂಡಲ 21.80, ವಿರಾಜಪೇಟೆ 7, ಅಮ್ಮತ್ತಿ 4.50, ಹುದಿಕೇರಿ 11.40, ಶ್ರೀಮಂಗಲ 16.20, ಪೊನ್ನಂಪೇಟೆ 5, ಬಾಳೆಲೆ 7, ಸೋಮವಾರಪೇಟೆ 19, ಶನಿವಾರಸಂತೆ 38, ಶಾಂತಳ್ಳಿ 45, ಕೊಡ್ಲಿಪೇಟೆ 13.80, ಕುಶಾಲನಗರ 8.60, ಸುಂಟಿಕೊಪ್ಪ 11 ಮಿ.ಮೀ.ಮಳೆಯಾಗಿದೆ. *ಹಾರಂಗಿ ಜಲಾಶಯದ ನೀರಿನ ಮಟ್ಟ* ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2853.61 ಅಡಿಗಳು. ಕಳೆದ ವರ್ಷ ಇದೇ ದಿನ 2855.05 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 7.20 ಮಿ.ಮೀ., ಕಳೆದ ವರ್ಷ ಇದೇ ದಿನ 6.80 ಮಿ.ಮೀ., ಇಂದಿನ ನೀರಿನ ಒಳಹರಿವು 10107 ಕ್ಯುಸೆಕ್, ಕಳೆದ ವರ್ಷ ಇದೇ ದಿನ 10569 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 14458 ಕ್ಯುಸೆಕ್. ನಾಲೆಗೆ 350 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 10341 ಕ್ಯುಸೆಕ್.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಂಬೂರಿನಲ್ಲಿ ನಿವೇಶನ ರಹಿತ ನಿವೇಶನ ನೀಡಲು ಆಗ್ರಹ*

ಮೇ 4, 2026

*ಜಂಬೂರುವಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*

ಮೇ 3, 2026

*ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 

ಮೇ 3, 2026

*ಜಂಬೂರುವಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*

ಮೇ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 3 : ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಜಂಬೂರು ಗ್ರಾಮದ ಎಫ್ಎಂಸಿ ಲೇ ಔಟ್ ನ …

*ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 

ಮೇ 3, 2026

*ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*

ಮೇ 3, 2026

*ಬೆನೆಡಿಕ್ಟ್ ಆರ್ ಸಲ್ಡಾನ ಅವರಿಗೆ ಬೀಳ್ಕೊಡುಗೆ*

ಮೇ 3, 2026

*ವಿರಾಜಪೇಟೆ ಕಾವೇರಿ ಕಾಲೇಜಿನ ಪದವಿ ವಿಭಾಗದ ನೂತನ ಪ್ರಾಂಶುಪಾಲರಾಗಿ ಡಾ.ಕುಪ್ಪಂಡ ವೀಣಾ ಅಧಿಕಾರ ಸ್ವೀಕಾರ*

ಮೇ 3, 2026

*ಸರ್ಕಾರ ಗ್ರಾ.ಪಂ ಅಭಿವೃದ್ಧಿಗೆ ನೀಡಿರುವ ಅಧಿಕಾರ ಚಲಾಯಿಸಿ : ಡಿ.ಆರ್.ಪಾಟೀಲ*

ಮೇ 3, 2026

*ಮೇ 5 ರಂದು ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ*

ಮೇ 3, 2026

*ಮೇ 16 ಮತ್ತು 17 ರಂದು ಮಡಿಕೇರಿಯಲ್ಲಿ ಕುಲಾಲ-ಕುಂಬಾರ ಬಾಂಧವರ ಕ್ರೀಡೋತ್ಸವ ಮತ್ತು ಸಮ್ಮಿಲನ*

ಮೇ 3, 2026

*ಗೌಡ ಕುಟುಂಬಗಳ “ಕುಟುಂಬ-2026” ಪಂದ್ಯಾವಳಿ ಆರಂಭ*

ಮೇ 3, 2026

*ಕೊಡಗು ಬಂಟರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ : ಸಮುದಾಯ ಬಾಂಧವರ ಒಗ್ಗಟ್ಟಿಗೆ ಗಣ್ಯರ ಕರೆ*

ಮೇ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.