Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕ್ರಿಯೇಟಿವ್ ಕಾಲೇಜಿನಲ್ಲಿ ಅರ್ಥಶಾಸ್ತ್ರ ಕಾರ್ಯಾಗಾರ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಕ್ರಿಯೇಟಿವ್ ಕಾಲೇಜಿನಲ್ಲಿ ಅರ್ಥಶಾಸ್ತ್ರ ಕಾರ್ಯಾಗಾರ*

ಜುಲೈ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕಾರ್ಕಳ ಜು.29 NEWS DESK : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಅರ್ಥಶಾಸ್ತ್ರ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವೇದಿಕೆ ಹಾಗೂ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಅರ್ಥಶಾಸ್ತ್ರ ವಿಷಯದ ಪುನಶ್ಚೇತನ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ನಡೆದ ಕಾರ್ಯಾಗಾರವನ್ನು ಉದ್ಯಮಿ ಸೂರಜ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ “ಮನೆ ಬಜೆಟ್ ನಿಂದ ಹಿಡಿದು ರಾಷ್ಟ್ರದ ಬಜೆಟ್ ತನಕ ಎಲ್ಲದರ ಹಿಂದೆ ಅರ್ಥಶಾಸ್ತ್ರದ ತತ್ವಗಳು ಕಾರ್ಯನಿರ್ವಹಿಸುತ್ತವೆ. ಈ ಕ್ಷೇತ್ರದಲ್ಲಿ ಸಾಧನೆ ಮಾಡಲು ವಿಶ್ಲೇಷಣಾ ಕೌಶಲ್ಯ, ಆರ್ಥಿಕ ತರ್ಕ ಮತ್ತು ನಿರ್ಣಾಯಕತೆ ಅಗತ್ಯ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆಯ ಉಪನಿರ್ದೇಶಕ ಮಾರುತಿ ಅರ್ಥಶಾಸ್ತ್ರ ಮತ್ತು ಆರ್ಥಿಕತೆ ಎಂದರೆ ಕೇವಲ ಹಣದ ಚಲಾವಣೆ ಅಲ್ಲ, ಅದು ನಮ್ಮ ಆಯ್ಕೆಗಳು, ಆದ್ಯತೆಗಳು ಮತ್ತು ಜೀವನ ಪಾಠಗಳ ಚಿಹ್ನೆಯಾಗಿದೆ ಎಂದು ಹೇಳುತ್ತಾ ಜಾಗತಿಕ ಆರ್ಥಿಕತೆಯ ಪ್ರವಾಹದಲ್ಲಿ ಹೇಗೆ ಸಮತೋಲನ ವಹಿಸಬೇಕು ಎಂದು ತಿಳಿಸಿದರು. ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕರೂ ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಮಾತನಾಡಿ ಅರ್ಥಶಾಸ್ತ್ರದ ಮಹತ್ವ, ಅದರ ಪ್ರಾಯೋಗಿಕ ಬಳಕೆ ಹಾಗೂ ಅರ್ಥಶಾಸ್ತ್ರವನ್ನು ವೃತ್ತಿಯಾಗಿ ಹೇಗೆ ಆಚರಿಸಬಹುದು ಎಂಬುದರ ಕುರಿತು ಮಾತುಗಳನ್ನಾಡಿದರು. ಕಾರ್ಯಾಗಾರದಲ್ಲಿ 2025ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ 100 ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಅಲ್ಲದೆ 2025 ನೇ ಸಾಲಿನಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ಶೇ. 100 ಫಲಿತಾಂಶ ಸಾಧಿಸಿದ ಕಾಲೇಜುಗಳ ಉಪನ್ಯಾಸಕರನ್ನು ಪುರಸ್ಕರಿಸಿ ಗೌರವಿಸಲಾಯಿತು. 2025 ರಲ್ಲಿ ಅರ್ಥಶಾಸ್ತ್ರ ವಿಷಯದಿಂದ ಪ್ರಾಂಶುಪಾಲರಾಗಿ ಮುಂಬಡ್ತಿ ಹೊಂದಿದ ಶ್ರೀ ವಿನ್ಸೆಂಟ್ ವಿನೋದ್ ಡಿಸೋಜಾ, ಪ್ರಾಂಶುಪಾಲರು, ಸರ್ಕಾರಿ ಪದವಿಪೂರ್ವ ಕಾಲೇಜು, ಬೆಳ್ಮಣ್ಣು ಇವರನ್ನು ಅಭಿನಂದಿಸಲಾಯಿತು. 2025ನೇ ಸಾಲಿನಲ್ಲಿ ವಯೋನಿವೃತ್ತಿ ಹೊಂದುತ್ತಿರುವ ಶ್ರೀ ಗೋಪಾಲ್ ಭಟ್, ಪ್ರಾಂಶುಪಾಲರು, ಸರ್ಕಾರಿ ಪದವಿಪೂರ್ವ ಕಾಲೇಜು ಹೊಸಂಗಡಿ ಮತ್ತು ಶ್ರೀ ನಾಗರಾಜ್ ವೈದ್ಯ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಗೋಳಿಯಂಗಡಿ.ಇವರನ್ನು ಸನ್ಮಾನಿಸಲಾಯಿತು. ಕಾರ್ಯಾಗಾರದಲ್ಲಿ ಪೂರ್ವಾಹ್ನ “ಎರಡನೇ ವರ್ಷದ ಅರ್ಥಶಾಸ್ತ್ರದಲ್ಲಿ ಗಣಿತದ ಸಮಸ್ಯೆಗಳಿಗೆ ಪರಿಹಾರ” ಎಂಬ ವಿಚಾರದ ಕುರಿತು ಸರ್ಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರದ ಅರ್ಥಶಾಸ್ತ್ರ ಉಪನ್ಯಾಸಕರಾದ ದಿನಕರ ಶೆಟ್ಟಿ ವಿಚಾರ ಮಂಡಿಸಿದರು. ಅಪರಾಹ್ನ “ಹೊಸ ಪ್ರಶ್ನೆ ಬ್ಯಾಂಕ್ ಮತ್ತು ಪ್ರಶ್ನೆ ಪತ್ರಿಕೆ ತಯಾರಿಕೆಗೆ ಸಂಬಂಧಿಸಿದ ಮಾಹಿತಿಗಳು” ಎಂಬ ವಿಚಾರದ ಕುರಿತು ಸರ್ಕಾರಿ ಸ್ವತಂತ್ರ ಪಿ.ಯು.ಕಾಲೇಜು, ಹಾಸನದ ಅರ್ಥಶಾಸ್ತ್ರ ಉಪನ್ಯಾಸಕರಾದ ಧರ್ಮೇಂದ್ರ ಬಿ.ಜಿ ವಿಚಾರ ಮಂಡಿಸಿದರು. ಬಳಿಕ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಾಗಾರದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕ ಮಂಡಳಿ, ಉಡುಪಿ ಜಿಲ್ಲೆಯ ವಿವಿಧ ಕಾಲೇಜುಗಳ ಅರ್ಥಶಾಸ್ತ್ರ ಉಪನ್ಯಾಸಕರು, ಕ್ರಿಯೇಟಿವ್ ಕಾಲೇಜಿನ ಬೋಧಕ- ಬೋಧಕೇತರವೃಂದದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷೆ ಅನುರಾಧ. ಹೆಚ್. ರವರು ಸ್ವಾಗತಿಸಿ, ಉಪನ್ಯಾಸಕಿ ಜ್ಯೋತಿ ಕೊಲ್ಲೂರು ರವರು ವಂದಿಸಿದರು. ನಿಕಟಪೂರ್ವ ಜಿಲ್ಲಾ ಕಾರ್ಯದರ್ಶಿ ಅಕ್ಷಯ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರ್ವಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.