Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚನ್ನಯ್ಯನಕೋಟೆಯಲ್ಲಿ ಕಾರ್ಗಿಲ್ ವಿಜಯೋತ್ಸವ : ದೇಶಾಭಿಮಾನ ಮೈಗೂಡಿಸಿಕೊಳ್ಳಲು ಗಣ್ಯರ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚನ್ನಯ್ಯನಕೋಟೆಯಲ್ಲಿ ಕಾರ್ಗಿಲ್ ವಿಜಯೋತ್ಸವ : ದೇಶಾಭಿಮಾನ ಮೈಗೂಡಿಸಿಕೊಳ್ಳಲು ಗಣ್ಯರ ಕರೆ*

ಜುಲೈ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.29 NEWS DESK : ದೇಶ ರಕ್ಷಣೆಗಾಗಿ ತ್ಯಾಗ ಮಾಡಿದ ಯೋಧರನ್ನು ದಿನನಿತ್ಯ ಸ್ಮರಿಸುವ ಮೂಲಕ ದೇಶ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯೋಧರಿಗಾಗಿ ಪ್ರಾರ್ಥಿಸಬೇಕು ಮತ್ತು  ಪ್ರತಿಯೊಬ್ಬರು ಗೌರವಿಸುವಂತಾಗಬೇಕೆಂದು  ಗಣ್ಯರು ಕರೆ ನೀಡಿದರು. ಸರ್ವ ಸಹಾಯಿ ಮಿತ್ರ ಮಂಡಳಿ ವತಿಯಿಂದ ಚನ್ನಯ್ಯನಕೋಟೆ ಬಸ್ ನಿಲ್ದಾಣದ ಬಳಿ ನಿರ್ಮಿಸಲಾದ ಬೃಹತ್ ಕಾರ್ಗಿಲ್ ವಿಜಯೋತ್ಸವ ಹಾಗೂ ಡಾ. ಎಪಿಜೆ ಅಬ್ದುಲ್ ಕಲಾಂ ಪುಣ್ಯ ಸ್ಮರಣೆ ಫ್ಲಕ್ಸ್ ಗೆ ಪುಷ್ಪ ನಮನ ಸಲ್ಲಿಸಿ ಗೌರವಿಸಿದರು. ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೇಕೆರಿರ ಅರುಣ್ ಕುಮಾರ್ ಮಾತನಾಡಿ, ಗ್ರಾಮದಲ್ಲಿರುವ ಸರ್ವಸಹಾಯಿ ಮಿತ್ರ ಮಂಡಳಿ ಹಲವು ವರ್ಷಗಳಿಂದ ದೇಶ ಅಭಿಮಾನದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು,
ದೇಶ ರಕ್ಷಣೆಗಾಗಿ ಪ್ರಾಣತ್ಯಾಗ ಮಾಡಿದ ಯೋಧರನ್ನು ಸ್ಮರಿಸುವುದರೊಂದಿಗೆ ಅವರ ಕುಟುಂಬವನ್ನು ಗೌರವಿಸುವ ಮೂಲಕ ಜಿಲ್ಲೆಯಲ್ಲಿಯೇ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ. ಇಂತಹ ಕಾರ್ಯಕ್ರಮಗಳಿಗೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದರ ಮೂಲಕ ದೇಶ ಸೇವೆಯಲ್ಲಿರುವ ಯೋಧರಿಗೆ ಸ್ಪೂರ್ತಿ ತುಂಬಬೇಕೆಂದರು. ಕನ್ನಡ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾಧ್ಯಕ್ಷ ಕೇಶವ ಕಾಮತ್ ಮಾತನಾಡಿ, ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಚೆನ್ನಯ್ಯನಕೋಟೆ ಗ್ರಾಮದಲ್ಲಿ ಕಳೆದ 11 ವರ್ಷಗಳಿಂದ ಕಾರ್ಗಿಲ್ ವಿಜಯೋತ್ಸವ, ಡಾ ಎಪಿಜೆ ಅಬ್ದುಲ್ ಕಲಾಂ ಅವರ ಪುಣ್ಯಸ್ಮರಣೆ ಸೇರಿದಂತೆ ಯುದ್ಧದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಯೋಧರನ ಸ್ಮರಿಸುವ ಹಾಗೂ ಕುಟುಂಬವನ್ನ ಗೌರವಿಸುವ ದೇಶಾಭಿಮಾನದ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡು ಮುನ್ನಡೆಯುತ್ತಿರುವ ಸರ್ವ ಸಹಾಯಿ ಮಿತ್ರ ಮಂಡಳಿಯ ಪದಾಧಿಕಾರಿಗಳ ಸೇವಾ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಕಾವೇರಮ್ಮ ಮಾತನಾಡಿ ಯೋಧರ ತ್ಯಾಗ ಪರಿಶ್ರಮದಿಂದಲೇ ದೇಶದ ಜನರು ನೆಮ್ಮದಿಯ ಜೀವನ ನಡೆಸುವಂತಾಗಿದೆ. ಗಾಳಿ, ಮಳೆ, ಚಳಿ, ಬಿಸಿಲನ್ನು ಲೆಕ್ಕಿಸದೆ ತಮ್ಮ ಕುಟುಂಬವನ್ನು ಮರೆತು ದೇಶದ ರಕ್ಷಣೆಗಾಗಿ ಅಗಲಿರಳು ಸೇವೆ ಸಲ್ಲಿಸುತ್ತಿರುವ ಯೋಧರಿಗೆ ದಿನನಿತ್ಯ ಪ್ರಾರ್ಥಿಸಬೇಕಾಗಿದೆ ಎಂದರು. ಮಿಸೈಲ್ ಮ್ಯಾನ್’ ಎಂದೇ ಖ್ಯಾತರಾಗಿದ್ದ ಶ್ರೇಷ್ಠ ವಿಜ್ಞಾನಿ, ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಮಾರ್ಗದರ್ಶನವನ್ನು ಮೈಗೂಡಿಸಿಕೊಳ್ಳಬೇಕೆಂದು ಹೇಳಿ ಇತ್ತೀಚಿನ ದಿನಗಳಲ್ಲಿ ಯುವ ಸಮೂಹ ಸಾಮಾಜಿಕ ಜಾಲತಾಣಗಳಿಗೆ ಹೊಂದಿಕೊಂಡು ಮುನ್ನಡೆಯುತ್ತಿದ್ದು ದೇಶದ ಆಗುಹೋಗುಗಳ ಬಗ್ಗೆ ತಿಳಿದುಕೊಳ್ಳುವ ಸೌಜನ್ಯವೂ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.  ದೇಶಕ್ಕಾಗಿ ತ್ಯಾಗ ಹಾಗೂ ಸಾಧನೆ ಮಾಡಿದವರನ್ನು ಗೌರವಿಸುವ ಮೂಲಕ ಇಂತಹ ಕಾರ್ಯಕ್ರಮಗಳು ಪ್ರತಿ ಗ್ರಾಮಗಳಲ್ಲೂ ನಡೆಯುವಂತಾಗಬೇಕೆಂದು ಹೇಳಿದರು.  ಇದೇ ಸಂದರ್ಭ ಹುತಾತ್ಮರಾದ ಇಬ್ಬರು ಯೋಧರ ಕುಟುಂಬದವರಾದ ಶೋಭಾ ಹಾಗೂ ನೀಲಮ್ಮ ಹಾಗೂ ಮಾಜಿ ಯೋಧ ರೇವಣ್ಣ ಅವರನ್ನ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ದೇಶ ಕಾಯುವ ಯೋಧರ ಪರಿಶ್ರಮ ತ್ಯಾಗವನ್ನು ಸ್ಮರಿಸಿ ಹಾಡಿದ ಪಾಲಿಬೆಟ್ಟದ ನಾಸಿರ್ ಅವರ ಗಾಯನಕ್ಕೆ ನೆರೆದಿದ್ದವರು ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ವಸಹಾಯಿ ಮಿತ್ರ ಮಂಡಳಿ ಅಧ್ಯಕ್ಷ ವಿಜು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯರುಗಳಾದ ಅಜಿತ್ ಕರುಂಬಯ್ಯ, ಗಣೇಶ್, ಮಾಜಿ ಯೋಧರಾದ ಮಣಿ, ಲೋಕೇಶ್, ಜುಮ ಮಸೀದಿ ಅಧ್ಯಕ್ಷ ಮುಸ್ತಫ, ಪಂಚಾಯಿತಿ ಸದಸ್ಯರುಗಳಾದ ಶಿಲ್ಪಾ, ಗಣೇಶ್, ಶೀಲಾ ಪ್ರಮುಖರಾದ ದೊಡ್ಡಮ್ಮ, ಇಂದಿರಾ ಮುರ್ಗೇಶ್, ಸಲೀಂ, ಅಬ್ದುಲ್ ರಹಿಮಾನ್, ಶಶಿ ಅಚ್ಚುದನ್, ಮಾದೇವ,ಬನೊಜ್, ಸನಲ್, ರವೀಂದ್ರಬಾವೆ, ನಂಜಪ್ಪ ಪೂಜಾರಿ, ಅಪ್ಪು ಸುಬ್ರಮಣಿ, ಶಾಜಿ, ಕುಮಾರ್, ನಿಜಾಮುದ್ದೀನ್, ಮಹೀಂದ್ರ,ಶಿವಗಾಮಿ ಸೇರಿದಂತೆ ವಿದ್ಯಾರ್ಥಿಗಳು,ವಿವಿಧ ಸಂಘ ಸಂಸ್ಥೆಯ ಪ್ರಮುಖರು ಹಾಗು ಗ್ರಾಮಸ್ಥರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.