Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗಿನಲ್ಲಿ ನೆಲೆಸಿರುವ ಬಾಂಗ್ಲಾ ದೇಶಿಗರನ್ನು ಗಡಿಪಾರು ಮಾಡಲು ಬಿಜೆಪಿ ಆಗ್ರಹ : ಗ್ಲಾಸ್ ಬ್ರಿಡ್ಜ್ ಗೆ ತೀವ್ರ ವಿರೋಧ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗಿನಲ್ಲಿ ನೆಲೆಸಿರುವ ಬಾಂಗ್ಲಾ ದೇಶಿಗರನ್ನು ಗಡಿಪಾರು ಮಾಡಲು ಬಿಜೆಪಿ ಆಗ್ರಹ : ಗ್ಲಾಸ್ ಬ್ರಿಡ್ಜ್ ಗೆ ತೀವ್ರ ವಿರೋಧ

ಜುಲೈ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜು.29 NEWS DESK : ಅಸ್ಸಾಂ ರಾಜ್ಯಕ್ಕೆ ಸೇರಿದವರು ಎಂದು ಹೇಳಿಕೊಂಡು ನಕಲಿ ದಾಖಲೆಗಳ ಮೂಲಕ ಕೊಡಗು ಜಿಲ್ಲೆಯಲ್ಲಿ ನೆಲೆಸಿರುವ ಬಾಂಗ್ಲಾ ದೇಶಿಗರನ್ನು ತಕ್ಷಣ ಗಡಿಪಾರು ಮಾಡಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಆಗ್ರಹಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಕಾರ್ಮಿಕರ ಸೋಗಿನಲ್ಲಿ ಅಸ್ಸಾಂ ಮೂಲದವರೆಂದು ಹೇಳಿಕೊಂಡು ಕೊಡಗು ಜಿಲ್ಲೆಯಲ್ಲಿ ಅನೇಕರು ನೆಲೆಸಿದ್ದಾರೆ. ಜಿಲ್ಲಾ ಪೊಲೀಸ್ ಮತ್ತು ಜಿಲ್ಲಾಡಳಿತ ಕಾರ್ಮಿಕರ ದಾಖಲೆ ಪತ್ರಗಳನ್ನು ಪರಿಶೀಲಿಸಿ, ಅವುಗಳು ನಕಲಿಯಾಗಿದ್ದರೆ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ನುಸುಳುಕೋರರಿಂದ ಗೋ ಸಾಗಾಟ, ಕಳ್ಳತನ, ಹಲ್ಲೆ, ದರೋಡೆ ಪ್ರಕರಣಗಳು ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಮತ್ತು ಆಯಾ ಗ್ರಾಮ ಪಂಚಾಯ್ತಿಗಳು ಜಂಟಿಯಾಗಿ ತಮ್ಮ ವ್ಯಾಪ್ತಿಯಲ್ಲಿರುವ ಹೊರ ರಾಜ್ಯದ ಕಾರ್ಮಿಕರ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಬೇಕು. ಅಕ್ರಮವಾಗಿ ಜಿಲ್ಲೆಯಲ್ಲಿ ನೆಲೆಸಿರುವವರನ್ನು ಗಡಿಪಾರು ಮಾಡಬೇಕು, ನಿರ್ಲಕ್ಷ್ಯ ವಹಿಸಿದರೆ ಮುಂದೊಂದು ದಿನ ಅನಾಹುತ ಸಂಭವಿಸಬಹುದು ಎಂದು ಆತಂಕ ವ್ಯಕ್ತಪಡಿಸಿದರು. *ಮೂಡ ಮಾಹಿತಿ ನೀಡಲಿ* ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ(ಮೂಡ)ದಲ್ಲಿ ಭೂ ಪತಿವರ್ತನೆಗೆ ಸಾಕಷ್ಟು ಸಮಸ್ಯೆಗಳು ಉಂಟಾಗುತ್ತಿದೆ. ಏಕರೆಯೊಂದರ ಭೂ ಪರಿವರ್ತನೆಗೆ ಲಕ್ಷಾಂತರ ವೆಚ್ಚವಾಗುತ್ತಿದೆ. ಇದನ್ನು ಸ್ಥಳೀಯರಿಂದ ಭರಿಸಲು ಸಾಧ್ಯವಾಗುತ್ತಿಲ್ಲ, ಈ ಹಿನ್ನೆಲೆ ಭೂ ಪರಿವರ್ತನೆಯ ಯಾವೆಲ್ಲ ಕೆಲಸಗಳಿಗೆ ಎಷ್ಟು ಶುಲ್ಕ ಎನ್ನುವುದನ್ನು ಸಂಬಂಧಪಟ್ಟವರು ಸಾರ್ವಜನಿಕರಿಗೆ ಮಾಹಿತಿ ನೀಡಬೇಕೆಂದು ತಿಳಿಸಿದರು. ಮೂಡವು ಸರ್ಕಾರದ ನಿಯಮಗಳಂತೆ ಪ್ರತಿ 5 ವರ್ಷಕ್ಕೊಮ್ಮೆ ನಡೆಸಬೇಕಾದ ಭೂ ಉಪಯೋಗ ವಲಯ(ಸಿಡಿಪಿ ಪ್ಲಾನ್)ವನ್ನು ಪರಿಷ್ಕರಿಸಬೇಕು ಮತ್ತು ತನ್ನ ವ್ಯಾಪ್ತಿಗೆ ಒಳಪಡುವ ಮಡಿಕೇರಿ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಗ್ರಾಮಗಳಲ್ಲಿ ಗ್ರೀನ್ ಜೋನ್‍ನಿಂದ ಎಲ್ಲೋ ಜೋನ್ ಆಗಿ ಪರಿವರ್ತನೆಯಾದ ಜಾಗದ ಬಗ್ಗೆ ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿಯನ್ನು ನೀಡಬೇಕೆಂದು ರವಿ ಕಾಳಪ್ಪ ಆಗ್ರಹಿಸಿದರು. *ರಾಜಾಸೀಟ್ ಗೆ ಗ್ಲಾಸ್ ಬ್ರಿಡ್ಜ್ ಬೇಡ* ಮಡಿಕೇರಿ ನಗರದಲ್ಲಿರುವ ಪ್ರಖ್ಯಾತ ಪ್ರವಾಸಿತಾಣ ರಾಜಾಸೀಟ್ ಉದ್ಯಾನವನ ವ್ಯಾಪಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ‘ಗ್ಲಾಸ್ ಬ್ರ್ರಿಡ್ಜ್’ ಯೋಜನೆಗೆ ಬಿಜೆಪಿಯ ವಿರೋಧವಿದೆ. ಯಾವುದೇ ಕಾರಣಕ್ಕೂ ‘ಗ್ಲಾಸ್ ಬ್ರ್ರಿಡ್ಜ್’ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ರವಿ ಕಾಳಪ್ಪ ತಿಳಿಸಿದರು. ಗ್ಲಾಸ್ ಬ್ರಿಡ್ಜ್‍ಗೆ ಸಂಬಂಧಿಸಿದಂತೆ ಯಾರ ಗಮನಕ್ಕೂ ತಾರದೆ ಟೆಂಡರ್ ಪ್ರಕ್ರಿಯೆ ನಡೆಸಲಾಗಿದೆ. ಈ ವಿಚಾರವನ್ನು ನಗರಸಭೆಯ ಗಮನಕ್ಕೂ ತಂದಿಲ್ಲ. ಗ್ಲಾಸ್ ಬ್ರಿಡ್ಜ್‍ನ ಸಾಧಕ ಬಾಧಕಗಳ ಬಗ್ಗೆ ಅಗತ್ಯ ಚರ್ಚೆಗಳು ಇಲ್ಲಿಯವರೆಗೆ ನಡೆದಿಲ್ಲ. ಈ ಯೋಜನೆ ಕೇವಲ ಹಣ ಮಾಡುವ ಒಂದು ದಂಧೆಯಷ್ಟೆ ಎಂದು ಆರೋಪಿಸಿದ ಅವರು, ಕಾನೂನು ಹೋರಾಟಕ್ಕೂ ಸಿದ್ಧ ಎಂದು ಎಚ್ಚರಿಕೆ ನೀಡಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿ ಮಾತನಾಡಿ, ಗ್ಲಾಸ್ ಬ್ರಿಡ್ಜ್ ನಿರ್ಮಿಸುವುದಾದರೆ ಅದಕ್ಕೆ ನಗರಸಭೆಯ ಒಪ್ಪಿಗೆಯ ಅಗತ್ಯವಿದೆ. ಹೀಗಿದ್ದೂ ನಗರಸಭೆಯ ಗಮನಕ್ಕೂ ತಾರದೆ ಗಾಜಿನ ಸೇತುವೆ ನಿರ್ಮಿಸುವ ಪ್ರಯತ್ನ ನಡೆಯುತ್ತಿದ್ದು, ಇದು ಸರಿಯಾದ ಕ್ರಮವಲ್ಲ ಎಂದರು.
ಬಿಜೆಪಿ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ ಮಾತನಾಡಿ ಗ್ಲಾಸ್ ಬ್ರಿಡ್ಜ್ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿಲನ್, ಜಿಲ್ಲಾ ವಕ್ತಾರರಾದ ತಳೂರು ಕಿಶೋರ್ ಕುಮಾರ್ ಹಾಗೂ ಬಿ.ಕೆ.ಅರುಣ್ ಕುಮಾರ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ: ಜಾನಪದ ಕಲಾಪ್ರಕಾರಗಳ ಪ್ರದರ್ಶನಕ್ಕೆ ಮನಸೋತ ಜನತೆ; ಜಾನಪದ ಸಂಸ್ಕೃತಿಯ ಉಳಿವಿಗೆ ಹೆಚ್ಚಿನ ಕಾಳಜಿ ಅಗತ್ಯ: ಶಾಸಕ ಎ.ಎಸ್.ಪೊನ್ನಣ್ಣ ಕರೆ; ಕಲಾವಿದರು ಹಾಗೂ ಜಾನಪದ ವಸ್ತು ಸಂಗ್ರಹಕಾರರಿಗೆ ಸನ್ಮಾನ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.18 : ಕಾವೇರಿ ತೀರ್ಥೋದ್ಭವದ ದಿನವಾದ ಶನಿವಾರ ಕಾವೇರಿ ದರ್ಶನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಎ.ಎಸ್.ಪೊನ್ನಣ್ಣ ಹಾಗೂ…

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.