Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಸಿಎನ್‍ಸಿ ಯಿಂದ ಆ.2 ರಂದು 30ನೇ ವರ್ಷದ “ಕಕ್ಕಡ-18” ಆಚರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸಿಎನ್‍ಸಿ ಯಿಂದ ಆ.2 ರಂದು 30ನೇ ವರ್ಷದ “ಕಕ್ಕಡ-18” ಆಚರಣೆ

ಜುಲೈ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.29 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ 30ನೇ ವರ್ಷದ “ಕಕ್ಕಡ-18” ಆಚರಣೆ ಆ.2 ರಂದು ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಂದು ಬೆಳಿಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮದ ಆರಂಭದಲ್ಲಿ ಕೊಡವ ಗುರುಕಾರೋಣರನ್ನು ಸ್ಮರಿಸಿ ಪ್ರಾರ್ಥಿಸಲಾಗುವುದು ಮತ್ತು “ಕಕ್ಕಡ-18” ರ ವಿಶೇಷ ಖಾದ್ಯಗಳನ್ನು ಅರ್ಪಿಸಲಾಗುವುದು. ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಆದಿಮಸಂಜಾತ ಕೊಡವರು ಆರಾಧಿಸುವ ಪ್ರಕೃತಿ ಸಿರಿಯ ಕೊಡವ ಮಾತೃಭೂಮಿಯನ್ನು ಉಳಿಸಿಕೊಳ್ಳುವ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಲಾಗುವುದು. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಸ್ವಯಂ ಆಡಳಿತ ನೀಡಬೇಕು, ಆದಿಮಸಂಜಾತ ಕೊಡವರಿಗೆ ಎಸ್‍ಟಿ ಟ್ಯಾಗ್ ಘೋಷಿಸಬೇಕು, ಆರ್ಟಿಕಲ್371, 244ನೇ ವಿಧಿ ಮತ್ತು 6 ಮತ್ತು 8ನೇ ಶೆಡ್ಯೂಲ್ ಪ್ರಕಾರ ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕು ಒದಗಿಸಬೇಕು, ಆದಿಮಸಂಜಾತ ಏಕ ಜನಾಂಗೀಯ ಕೊಡವರ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಸೇರಿಸಬೇಕು, ಕೊಡವರು, ಅವರ ಪಾರಂಪರಿಕ ಭೂಮಿ, ಭಾಷೆ, ಪರಿಸರ, ಜಲಸಂಪನ್ಮೂಲ, ಜಾನಪದ ಪರಂಪರೆ, ರಾಜಕೀಯ ಅಸ್ಮಿತೆ ಮತ್ತು ಐತಿಹಾಸಿಕ ನಿರಂತರತೆ, ಸಾಂಪ್ರದಾಯಿಕ ಆವಾಸಸ್ಥಾನಗಳನ್ನು ಗುರುತಿಸಬೇಕು ಮತ್ತು ರಾಜ್ಯಾಂಗ ಖಾತ್ರಿ ನೀಡಬೇಕು. ಆದಿಮಸಂಜಾತ ಜನಾಂಗಗಳ ಹಕ್ಕುಗಳ ಸಂರಕ್ಷಣೆಗಾಗಿ ವಿಶ್ವ ರಾಷ್ಟ್ರ ಸಂಸ್ಥೆ ಯುಎನ್‍ಒ ಒಡಂಬಡಿಕೆಯಂತೆ ಅಂತರಾಷ್ಟ್ರೀಯ ಕಾನೂನಿನಡಿಯಲ್ಲಿ ಕೊಡವರ ಹಕ್ಕುಗಳನ್ನು ಘೋಷಿಸಬೇಕು ಮತ್ತು ಪೋಷಿಸಬೇಕು ಎಂದು ಹಕ್ಕೊತ್ತಾಯ ಮಂಡಿಸುವುದಾಗಿ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಅತ್ಯಂತ ಸೂಕ್ಷ್ಮ ಆದಿಮಸಂಜಾತ ಕೊಡವ ಬುಡಕಟ್ಟು ಸಮುದಾಯದ ಪ್ರಕೃತಿ ಆರಾಧನೆಗೆ ಪೂರಕವಾದ ಜಾನಪದೀಯ ವಿಶಿಷ್ಟ ಆಚರಣೆಯಾದ “ಕಕ್ಕಡ-18” ನ್ನು ಮುಂದಿನ ಕೊಡವ ಯುವ ಪೀಳಿಗೆಗೆ ಹಾಗೂ ವಿಶ್ವಕ್ಕೆ ಪರಿಚಯಿಸಬೇಕು ಎನ್ನುವ ಉದ್ದೇಶದಿಂದ ಸಿಎನ್‍ಸಿ ಸಂಘಟನೆ ಕಳೆದ 30 ವರ್ಷಗಳಿಂದ ಸಾರ್ವತ್ರಿಕವಾಗಿ ಆಚರಿಸಿಕೊಂಡು ಬರುತ್ತಿದೆ. ಮಾತೃಭೂಮಿ, ಜಲದೇವಿ, ವನದೇವಿ, ಕೃಷಿ ಪದ್ಧತಿ, ಯೋಧ ಪರಂಪರೆಯೊಂದಿಗೆ ಬೆಸೆದುಕೊಂಡಿರುವ ಕೊಡವರ ಜನಪದೀಯ ಧಾರ್ಮಿಕ ಮತ್ತು ಪ್ರಾಕೃತಿಕ ಆಚರಣೆಗಳಲ್ಲಿ “ಕಕ್ಕಡ-18” ಕೂಡ ಒಂದಾಗಿದೆ. ನಾಟಿ ಮತ್ತಿತರ ಕೃಷಿ ಕಾರ್ಯದ ಮೂಲಕ ಭೂದೇವಿಗೆ ನಮಿಸುವ ಕೊಡವ ರೈತರು ಪ್ರಕೃತಿದತ್ತವಾಗಿ ದೊರೆಯುವ 18 ವಿವಿಧ ಔಷಧೀಯ ಗುಣ ಹೊಂದಿರುವ ಮದ್ದು ಸೊಪ್ಪಿನಿಂದ ತಯಾರಿಸಿದ ಪಾಯಸ, ಮದ್ದುಪುಟ್ ಸೇರಿದಂತೆ ವಿವಿಧ ಖಾದ್ಯಗಳನ್ನು ಸವಿಯುತ್ತಾರೆ. ಇದು ದೇಹದ ಆರೋಗ್ಯವನ್ನು ಕಾಪಾಡುತ್ತದೆ, ಅಲ್ಲದೆ ಪ್ರಕೃತಿಗೆ ಪೂರಕವಾಗಿ ಹೊಂದಿಕೊಳ್ಳಲು ಸಹಾಯ ಮಾಡುತ್ತದೆ. ಕೊಡವ ಪೂರ್ವಜರು ಕೊಡವ ಭೂಮಿಯಲ್ಲಿ ದೊರೆಯುವ ಪ್ರಾಕೃತಿಕ ಗಿಡಮೂಲಿಕೆಗಳ ಸತ್ವ ಮತ್ತು ಆರೋಗ್ಯವರ್ಧಕ ಶಕ್ತಿಯ ಪರಿಚಯವನ್ನು ಈ ಸಮಾಜಕ್ಕೆ ಬಳುವಳಿಯಾಗಿ ನೀಡಿ ಹೋಗಿದ್ದಾರೆ. ಇದನ್ನು ಮುಂದಿನ ಪೀಳಿಗೆಗೆ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಆದ್ದರಿಂದ ಸಿಎನ್‍ಸಿ ಸಂಘಟನೆ ನಡೆಸುತ್ತಿರುವ ಸಾರ್ವತ್ರಿಕ “ಕಕ್ಕಡ-18” ಆಚರಣೆಯಲ್ಲಿ ಸರ್ವ ಕೊಡವ, ಕೊಡವತಿಯರು ಸಾಂಪ್ರದಾಯಿಕ ಕೊಡವ ಉಡುಪಿನಲ್ಲಿ ಪಾಲ್ಗೊಳ್ಳುವಂತೆ ಎನ್.ಯು.ನಾಚಪ್ಪ ಮನವಿ ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.