
ವಿರಾಜಪೇಟೆ ಜು.30 NEWS DESK : ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಾಲಯದ ಆವರಣದಲ್ಲಿರುವ ಶ್ರೀ ನಾಗ ದೇವರ ಗುಡಿಯಲ್ಲಿ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮುಂಜಾನೆಯಿಂದಲೆ ಪೂಜಾ ಕಾರ್ಯಕ್ರಮಗಳು ದೇವಸ್ಥಾನದಲ್ಲಿ ನಡೆಯಿತು. ಅರ್ಚಕರು ಸಂಕಲ್ಪ ಪೂಜೆ ಹಾಗೂ ಪ್ರಾರ್ಥನೆ ಮಾಡಿದರು. ನಂತರ ಅಲಂಕಾರ ಪೂಜೆ, ಕ್ಷೀರಾಭಿಷೇಕ, ಪಂಚಾಂಬ್ರುತ ಅಭಿಷೇಕ, ಕುಂಕುಮಾರ್ಚನೆ, ಸೀಯಾಳ ಅಭಿಷೇಕ, ನಾಗತಂಬಿಲ, ಮಹಾಪೂಜೆ ನಡೆಯಿತು. ಬಳಿಕ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ವಿವಿಧ ಕಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪೂಜೆ, ಪ್ರಾರ್ಥನೆ, ಹಾಲಿನ ಅಭಿಶೇಷ ನೆರವೇರಿಸಿದರು. ಪೂಜಾ ಕಾರ್ಯಕ್ರಮಗಳು ದೇವಸ್ಥಾನದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಹಾಗೂ ವಾಮನಮೂರ್ತಿ ಭಟ್ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.








