Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೆನ್ನಯ್ಯನಕೋಟೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ : ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಡಾ.ಜಾವೀದ್ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೆನ್ನಯ್ಯನಕೋಟೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ : ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಡಾ.ಜಾವೀದ್ ಸಲಹೆ*

ಜುಲೈ 30, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸಿದ್ದಾಪುರ ಜು.30 NEWS DESK : ಮಾನಸಿಕ ಒತ್ತಡ ಹಾಗೂ ದುಶ್ಚಟಗಳಿಂದ ದೂರವಿದ್ದು, ಗುಣಮಟ್ಟದ ಆಹಾರ ಸೇವನೆಯೊಂದಿಗೆ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕೆಂದು ಮೈಸೂರು ಅಲ್ ಅನ್ಸರ್ ಆಸ್ಪತ್ರೆಯ ವೈದ್ಯ ಡಾ.ಜಾವೀದ್ ಸಲಹೆ ನೀಡಿದ್ದಾರೆ. ಸರ್ವ ಸಹಾಯಿ ಮಿತ್ರ ಮಂಡಳಿ ವತಿಯಿಂದ ಚೆನ್ನಯ್ಯನ ಕೋಟೆಯಲ್ಲಿ  ಕಾರ್ಗಿಲ್ ವಿಜಯೋತ್ಸವ ಹಾಗೂ ಡಾ. ಎಪಿಜೆ ಅಬ್ದುಲ್ ಕಲಾಂ ಪುಣ್ಯ ಸ್ಮರಣೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕ ಆಯೋಜಿಸಲಾಗಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಕಲಬೆರಿಕೆಯ ಜಂಕ್ ಫುಡ್ ಗಳತ್ತ ಮುಖ ಮಾಡುತ್ತಿದ್ದು, ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹೆಚ್ಚಿನ ಸಂಖ್ಯೆಯ ಯುವ ಸಮೂಹ ದುಶ್ಚಟಗಳಿಗೆ ಮಾರುಹೋಗುತ್ತಿದ್ದು, ಸಮಾಜ ಸೇವಾ ಸಂಘಟನೆಗಳು ಆರೋಗ್ಯ ಮತ್ತು ಜಾಗೃತಿ ಶಿಬಿರಗಳನ್ನ ಆಯೋಜಿಸುವ ಮೂಲಕ ಆರೋಗ್ಯ ಕಾಳಜಿಯೊಂದಿಗೆ ಉತ್ತಮ ಭವಿಷ್ಯ ರೂಪಿಸಬೇಕಾಗಿದೆ. ಪ್ರತಿಯೊಬ್ಬರು ಆರೋಗ್ಯ ತಪಾಸಣೆಯೊಂದಿಗೆ ಆರೋಗ್ಯ ಕಾಳಜಿಯ ಸಲಹೆಗಳನ್ನು ಮನವರಿಕೆ ಮಾಡಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದರು. ಅಲ್ ಅನ್ಸರ್ ಆಸ್ಪತ್ರೆಯ ಶಿಬಿರ ಸಂಯೋಜಕ ಅಬ್ದುಲ್ ಕಲ್ಲಕ್ ಮಾತನಾಡಿ, ಕಳೆದ 12 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಆಸ್ಪತ್ರೆಯಲ್ಲಿ ಎಲ್ಲಾ ತರಹದ ಅತ್ಯಾಧುನಿಕ ವೈದ್ಯಕೀಯ ಸೇವೆಯನ್ನು ನೀಡಲಾಗುತ್ತಿದ್ದು ಕಳೆದ ಏಳು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ನೂರಾರು ಸಿಬಿರಗಳನ್ನು ಆಯೋಜಿಸಲಾಗಿದೆ. ಲಕ್ಷಾಂತರ ಜನರು ಶಿಬಿರದ ಪ್ರಯೋಜನ ಪಡೆದುಕೊಂಡಿದ್ದಾರೆ. ಗ್ರಾಮೀಣ ಭಾಗದ ಜನರ ಆರೋಗ್ಯದ ಕಾಳಜಿ ಬಗ್ಗೆ ಸರ್ವಸಹಾಯ ಮಿತ್ರ ಮಂಡಳಿ ಶಿಬಿರ ಆಯೋಜಿಸುವ ಮೂಲಕ ಸಮಾಜ ಸೇವೆಯನ್ನು ತೊಡಗಿಸಿಕೊಂಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಚೆನ್ನಯ್ಯನ ಕೋಟೆ  ಗ್ರಾಮ ಪಂಚಾಯಿತಿ ಅಧ್ಯಕ್ಷ ಮೇಕೆರಿರ ಅರುಣ್ ಕುಮಾರ್ ಮಾತನಾಡಿ, ಗ್ರಾಮದಲ್ಲಿರುವ ಸರ್ವಸಹಾಯ ಮಿತ್ರ ಮಂಡಳಿ ಹಲವು ವರ್ಷಗಳಿಂದ ದೇಶ ಅಭಿಮಾನದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು, ದೇಶ ರಕ್ಷಣೆಗಾಗಿ ಪ್ರಾಣತ್ಯಾಗ ಮಾಡಿದ ಯೋಧರನ್ನು ಸ್ಮರಿಸುವುದರೊಂದಿಗೆ ಅವರ ಕುಟುಂಬವನ್ನು ಗೌರವಿಸುವ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ. ಇಂತಹ ಕಾರ್ಯಕ್ರಮಗಳಿಗೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದರ ಮೂಲಕ ದೇಶ ಸೇವೆಯಲ್ಲಿರುವ ಯೋಧರಿಗೆ ಸ್ಪೂರ್ತಿ ತುಂಬಬೇಕೆಂದರು. ಕನ್ನಡ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾಧ್ಯಕ್ಷ ಕೇಶವ ಕಾಮತ್ ಮಾತನಾಡಿ, ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಚೆನ್ನಯ್ಯನಕೋಟೆ ಗ್ರಾಮದಲ್ಲಿ ಕಳೆದ 11 ವರ್ಷಗಳಿಂದ ಕಾರ್ಗಿಲ್ ವಿಜಯೋತ್ಸವ, ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಪುಣ್ಯಸ್ಮರಣೆ ಸೇರಿದಂತೆ ಯುದ್ಧದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಯೋಧರನ ಸ್ಮರಿಸುವ ಹಾಗೂ ಕುಟುಂಬವನ್ನ ಗೌರವಿಸುವ ದೇಶಾಭಿಮಾನದ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡು ಮುನ್ನಡೆಯುತ್ತಿರುವ ಸರ್ವ ಸಹಾಯ ಮಿತ್ರ ಮಂಡಳಿಯ ಪದಾಧಿಕಾರಿಗಳ ಸೇವಾ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಸರ್ವಸಹಾಯಿ ಮಿತ್ರ ಮಂಡಳಿ ಅಧ್ಯಕ್ಷ ವಿಜು, ಉಪಾಧ್ಯಕ್ಷೆ ದೊಡ್ಡಮ್ಮ, ಪ್ರಧಾನ ಕಾರ್ಯದರ್ಶಿ ಇಂದಿರಾ ಮುರ್ಗೇಶ್, ಗೌರವಾಧ್ಯಕ್ಷ ಸಲೀಂ, ಗೌರವ ಸಲಹೆಗಾರ ಅಬ್ದುಲ್ ರಹಿಮಾನ್, ಖಜಾಂಚಿ ಶಶಿ ಅಚ್ಚುದನ್, ಸಂಘನಾ ಕಾರ್ಯದರ್ಶಿ ಮಾದೇವ, ಸ್ವಾಗತ ಸಮಿತಿ ಅಧ್ಯಕ್ಷ ಬನೊಜ್, ಪ್ರಮುಖರಾದ ಸನಲ್, ಸುಶೀಲಾ, ಮಹೇಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.