Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶನಿವಾರಸಂತೆಯಲ್ಲಿ ಬಸವ ಪಂಚಮಿ ಆಚರಣೆ : ಮೌಢ್ಯತೆಯಿಂದ ಹೊರ ಬರಲು ಜೆ.ಎಲ್.ಜನಾರ್ಧನ್ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶನಿವಾರಸಂತೆಯಲ್ಲಿ ಬಸವ ಪಂಚಮಿ ಆಚರಣೆ : ಮೌಢ್ಯತೆಯಿಂದ ಹೊರ ಬರಲು ಜೆ.ಎಲ್.ಜನಾರ್ಧನ್ ಕರೆ*

ಜುಲೈ 30, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜು.30 : ಸೋಮವಾರಪೇಟೆ ತಾಲ್ಲೂಕು ಮಾನವ ಬಂಧುತ್ವ ವೇದಿಕೆ ವತಿಯಿಂದ ಶನಿವಾರಸಂತೆ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಬಸವ ಪಂಚಮಿಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್.ಜನಾರ್ಧನ್ ಅವರು ನಾಗರಪಂಚಮಿ ಎನ್ನುವುದು ಮೌಢ್ಯತೆಯ ಆಚರಣೆಯಾಗಿರುವುದರಿಂದ ಇದರ ಬದಲಾಗಿ ಬಸವ ಪಂಚಮಿ ಆಚರಿಸಲಾಗುತ್ತಿದೆ ಎಂದರು. ಹುತ್ತದ ಹಾವಿಗೆ ಹಾಲೆರೆಯುವ ಬದಲು ಬೆಳೆಯುವ ಮಕ್ಕಳಿಗೆ ಹಾಲನ್ನೆರೆದರೆ ಭವಿಷ್ಯದಲ್ಲಿ ವೈಚಾರಿಕತೆಯ ಪ್ರಜ್ಞೆಯನ್ನು ಮೂಡಿಸುವ ಜವಾಬ್ದಾರಿಯನ್ನು ಮಕ್ಕಳು ನಿಭಾಯಿಸುತ್ತಾರೆ. ಈ ರೀತಿಯ ಸಾಮಾಜಿಕ ಪರಿವರ್ತನೆಯ ಕೆಲಸಗಳನ್ನು ಮಾನವ ಬಂಧುತ್ವ ವೇದಿಕೆ ಜನಪ್ರತಿನಿಧಿ ಸತೀಶ್ ಜಾರಕಿಹೊಳಿ ಅವರ ಆಶಯದಂತೆ ಮಾಡುತ್ತಿದ್ದು, ಮೌಲ್ಯಯುತ ಆದರ್ಶಗಳನ್ನು ಮಕ್ಕಳಲ್ಲಿ ತುಂಬುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದರು. ದಲಿತ ಸಂಘರ್ಷ ಸಮಿತಿಯ ಒಕ್ಕೂಟದ ಜಿಲ್ಲಾಧ್ಯಕ್ಷ ಜೆ.ಆರ್.ಪಾಲಾಕ್ಷ ಅವರು ಮಾತನಾಡಿ ಮಕ್ಕಳಲ್ಲಿ ವೈಜ್ಞಾನಿಕ ಪ್ರಜ್ಞೆಯನ್ನು ಮೂಡಿಸುವ ಅಗತ್ಯವಿದೆ. ಈ ನಾಡಿನಲ್ಲಿ ನಡೆಯುವ ಎಲ್ಲಾ ಆಚರಣೆಗಳ ಮೂಲ ಉದ್ದೇಶಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಮೂಢನಂಬಿಕೆಗಳನ್ನು ತ್ಯಜಿಸಿ ವಿಜ್ಞಾನದಲ್ಲಿ ಆಸಕ್ತಿ ವಹಿಸಬೇಕು. ಶೈಕ್ಷಣಿಕ ಗುರಿ ಸಾಧನೆಯ ಮೂಲಕ ತಂದೆ, ತಾಯಿಗಳಿಗೆ ಹಾಗೂ ಶಿಕ್ಷಕರಿಗೆ ಕೀರ್ತಿ ತರಬೇಕು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾನವ ಬಂಧುತ್ವ ವೇದಿಕೆಯ ಸೋಮವಾರಪೇಟೆ ತಾಲ್ಲೂಕು ಸಂಚಾಲಕÀ ಎಂ.ಎಸ್.ವೀರೇಂದ್ರ ಅವರು ಮಾತನಾಡಿ  ಭಾರತದ ಮೂಲ ಜನಾಂಗದವರಾದ ನಾಗ ಜನರು ನಾಗ ಪಂಚಮಿಯನ್ನು ಆಚರಿಸುತ್ತಿದ್ದರು. ಬೌದ್ಧ ಧರ್ಮದ ಆಚರಣೆಗಳನ್ನು ಮಾಡುತ್ತಿದ್ದ ಸಂದರ್ಭದಲ್ಲಿ 18ನೇ ಬುದ್ಧ ಎಂದು ಕೀರ್ತಿ ಪಡೆದ ಕಿಸುತಿ ಎಂಬ ವ್ಯಕ್ತಿ ನಾಗ ಪಂಚಮಿ ಎಂಬ ಹಬ್ಬವನ್ನು ಬೌದ್ಧ ಧರ್ಮದ ಸಡಗರವನ್ನಾಗಿ ಆಚರಿಸುತ್ತಿದ್ದರು ಎಂದರು. ನಂತರ ದಿನಗಳಲ್ಲಿ ಇದನ್ನು ನಾಗರ ಪಂಚಮಿ ಎಂದು ಬದಲಾಯಿಸಿದ ಜನ ಹಾವಿಗೆ ಹಾಲರೆಯುವ ಪದ್ಧತಿಯನ್ನಾಗಿ ರೂಢಿಸಿದರು. 12ನೇ ಶತಮಾನದಲ್ಲಿ ಬಸವಣ್ಣ ಅವರು ಹಬ್ಬದ ಮೂಲ ಉದ್ದೇಶ ಮತ್ತು ಆಶಯವನ್ನು ಜನರಿಗೆ ತಿಳಿಸಿ ಮೌಢ್ಯದ ಬಗ್ಗೆ ಜಾಗೃತಿ ಮೂಡಿಸಿದರು. ಈ ಒಂದು ಅಂಶವನ್ನು ಪರಿಗಣಿಸಿದ ಜನಪ್ರಿಯ ಜನಸೇವಕ ಸತೀಶ್ ಜಾರಕಿಹೊಳಿ ಅವರು ನಾಗರಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಪರಿವರ್ತಿಸಿದರು. ಹುತ್ತಕ್ಕೆ ಹಾಲೆರೆಯುವ ಬದಲು ಪೌಷ್ಟಿಕತೆಗಾಗಿ ಮಕ್ಕಳಿಗೆ ಹಾಲನ್ನು ನೀಡುವ ಪದ್ಧತಿಯನ್ನು ಕಾರ್ಯಕ್ರಮವನ್ನಾಗಿ ರೂಪಿಸಿದರು ಎಂದು ವಿವರಿಸಿದರು. ಸ್ಥಳೀಯ ಸಹಕಾರಿ ಬ್ಯಾಂಕ್ ನ ನಿರ್ದೇಶಕ ಮಂಜಯ್ಯ, ಮಾನವ ಬಂಧುತ್ವ ವೇದಿಕೆ ಸದಸ್ಯರಾದ ವಿಶ್ವ, ತವಿದ್, ಬಾಲಕಿಯ ವಿದ್ಯಾರ್ಥಿನಿಲಯದ ಮೇಲ್ವಿಚಾರಕರಾದ ಜಲಜಾಕ್ಷಿ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಹಾಲು ಮತ್ತು ಸಿಹಿಯನ್ನು ವಿತರಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.