Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸಾಧಕರಿಗೆ ಕಾವೇರಿ ರತ್ನ ಪ್ರಶಸ್ತಿ ಪ್ರದಾನ : ಸಮಾಜ ಸುಧಾರಣೆಯಲ್ಲಿ ಪತ್ರಕರ್ತರ ಪಾತ್ರ ಮುಖ್ಯ : ಗಣ್ಯರ ಅಭಿಮತ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸಾಧಕರಿಗೆ ಕಾವೇರಿ ರತ್ನ ಪ್ರಶಸ್ತಿ ಪ್ರದಾನ : ಸಮಾಜ ಸುಧಾರಣೆಯಲ್ಲಿ ಪತ್ರಕರ್ತರ ಪಾತ್ರ ಮುಖ್ಯ : ಗಣ್ಯರ ಅಭಿಮತ* 

ಜುಲೈ 31, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ ಜು.31 NEWS DESK : ಸಾಮಾಜಿಕ ಕಳಕಳಿಯೊಂದಿಗೆ ಪ್ರಾಮಾಣಿಕ  ಸೇವಾ ಮನೋಭಾವದ ಮೂಲಕ ಪತ್ರಕರ್ತರು ವಸ್ತುನಿಷ್ಠ ವರದಿ ಮಾಡಿದಲ್ಲಿ ಮಾತ್ರ  ಸಮಾಜ ಸುಧಾರಣೆ ಕಾಣಲು ಸಾಧ್ಯವಾಗಲಿದೆ ಎಂದು  ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಅಭಿಪ್ರಾಯಪಟ್ಟರು.   ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ, ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್, ಸಂಗಮ ಟಿ.ವಿ.,  ವಂಶಿ ನ್ಯೂಸ್ ಹಾಗೂರಾಷ್ಟ್ರೀಯ ಅಪರಾದ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ ಬೆಂಗಳೂರು ಇವರ ಸಹಯೋಗದೊಂದಿಗೆ ಎ.ಪಿ.ಸಿ.ಎಂ.ಎಸ್ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ  ಪತ್ರಿಕಾ ದಿನಾಚರಣೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ನೀಡಲಾಗುವ ಕಾವೇರಿ ರತ್ನ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ದೇಶದಲ್ಲಿ ನಾವೆಲ್ಲರೂ ಸಂವಿಧಾನವನ್ನು ಪಾಲಿಸುವ ಮೂಲಕ ಸಮಾಜವನ್ನು ಸದೃಢಗೊಳಿಸಬೇಕು.  ಇಂದಿನ ಸಮಾಜದ ಪ್ರಗತಿಗೆ ಪತ್ರಿಕಾ ರಂಗದ‌ ಪಾತ್ರ ಮಹತ್ವದ್ದಾಗಿದೆ. ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗದ ಜೊತೆಗೆ  ಪತ್ರಿಕಾ ರಂಗವೂ  ಗುರುತಿಸಿಕೊಂಡಿದೆ.  ಯಾವುದೇ ಕ್ಷೇತ್ರದಲ್ಲಿ ಲೋಪ ದೋಷಗಳು ಕಂಡುಬಂದಲ್ಲಿ   ಪತ್ರಿಕಾ ರಂಗ ತನ್ನ ವರದಿಯ ಮೂಲಕ  ತಿದ್ದುವಂತ ಕೆಲಸ ಮಾಡುತ್ತದೆ. ವಂಶಿ ನ್ಯೂಸ್ ನೇತ್ರತ್ವದಲ್ಲಿ ಕಳೆದ ಹಲವು  ವರ್ಷಗಳಿಂದ ಅಂತರಾಷ್ಟ್ರೀಯ  ಪತ್ರಿಕಾ ದಿನಾಚರಣೆಯೊಂದಿಗೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ  ಗಣ್ಯರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಮಾದರಿ ಕಾರ್ಯಕ್ರಮ ಮಾಡುತ್ತಿರುವ ಬಗ್ಗೆ ಮೆಚ್ಚಿಗೆ ವ್ಯಕ್ತಪಡಿಸಿದ್ದರು. ಕೊಡ್ಲಿಪೇಟೆ ಶ್ರೀ ಕ್ಷೇತ್ರ ಕೇರಿಕೂಡ್ಲಿಮಠದ  ಶ್ರೀ ಸದಾಶಿವ ಸ್ವಾಮೀಜಿ  ಸಾನಿಧ್ಯ ವಹಿಸಿ ಮಾತನಾಡಿ, ಸಮಾಜದಲ್ಲಿ ಶಿಕ್ಷಕ, ವಿಜ್ಞಾನಿ, ಪತ್ರಕರ್ತ, ಕೃಷಿಕ, ಸೈನಿಕ ಹಾಗೂ ವೈದ್ಯರ  ಪಾತ್ರ ಬಹಳ ಮುಖ್ಯವಾದುದು. ಸಮಾಜದ ನಾಲ್ಕನೇ ಅಂಗವಾದ ಪತ್ರಿಕಾ ರಂಗಕ್ಕೆ ತನ್ನದೇ ಆದ ಸ್ಥಾನವಿದ್ದು, ಇದರ ಪಾವಿತ್ರ್ಯತೆಯನ್ನು ಕಾಪಾಡುವ ಮೂಲಕ ಸಮಾಜದಲ್ಲಿ ಸಾಮಾಜಿಕ ನ್ಯಾಯ ಕಾಪಾಡಬೇಕು. ಇಂದು ವಿಜ್ಞಾನ ಕ್ಷೇತ್ರ ಸಾಕಷ್ಟು ಬೆಳೆದಿದ್ದರೂ ಇಂದು ಸಮಾಜದಲ್ಲಿ ಮೇಲು- ಕೀಳು, ಬಡವ – ಶ್ರೀಮಂತ ಎಂಬ ಬೇಧ- ಭಾವ ಇನ್ನೂ ಜೀವಂತವಾಗಿರುವುದು ದುರದೃಷ್ಟಕರ. ಸಮಾಜದಲ್ಲಿರುವ ಇಂತಹ ಸಾಮಾಜಿಕ ಅನಿಷ್ಟ ಪದ್ಧತಿಗಳು ಬದಲಾವಣೆ ಆಗದ ಹೊರತು ಸಮಾಜದ ಬದಲಾವಣೆ ಸಾಧ್ಯವಿಲ್ಲ ಎಂದರು. ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ  ಎಲೆಮರೆಕಾಯಿಯಂತೆ  ತಮ್ಮದೇ ಆದ  ವಿವಿಧ ಕ್ಷೇತ್ರದಲ್ಲಿ  ಸಾಧನೆ ಮಾಡಿದ್ದರು ಗುರುತಿಸಿಕೊಳ್ಳಲು ಮುಂದೆ ಬರುವುದಿಲ್ಲ ಅಂಥವರನ್ನ   ಗುರುತಿಸಿ ಗೌರವಿಸುವ ಕೆಲಸ ಮಾಡುತ್ತಿರುವ  ವಂಶಿ ನ್ಯೂಸ್  ಬಳಗದ ಸಂಸ್ಥೆಯವರ ಅಪಾರ ಕಾಳಜಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಶಿಕ್ಷಣ ಆರೋಗ್ಯ ಕ್ರೀಡೆ ಸೇರಿದಂತೆ  ಸಾಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡು ಮುನ್ನಡೆದಲ್ಲಿ  ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದರು. ಸಾಹಿತಿ ಹಾಗೂ ನಿವೃತ್ತ ಪ್ರಾಂಶುಪಾಲ ಡಾ ಜೆ.ಸೋಮಣ್ಣ ಮಾತನಾಡಿ, ಪತ್ರಿಕೆಗಳು ಇಂದು ಪ್ರಚಲಿತ ವಿದ್ಯಮಾನಗಳು ಹಾಗೂ ಸಮಸ್ಯೆಗಳ ಬಗ್ಗೆ ವಿರೋಧ ಪಕ್ಷದ ರೀತಿಯಲ್ಲಿ ಕೆಲಸ ಮಾಡುವ ಮೂಲಕ ಜನರ ಸಮಸ್ಯೆಗಳ ಬೆಳಕು ಚೆಲ್ಲಿ ಸಾಮಾಜಿಕ ನ್ಯಾಯವನ್ನು ಒದಗಿಸಬೇಕು ಎಂದರು. ಮಹಾತ್ಮ ಗಾಂಧಿ ಹಾಗೂ ಡಾ ಬಿ.ಆರ್.ಅಂಬೇಡ್ಕರ್ ಅವರು ಸ್ವಾತಂತ್ರ್ಯ ಪೂರ್ವದಲ್ಲಿ ಪತ್ರಿಕೆಗಳನ್ನು ಅತ್ಯಂತ ಪ್ರಾಮಾಣಿಕತೆ ಹಾಗೂ ವಸ್ತುನಿಷ್ಠವಾಗಿ ನಡೆಸುವ ಮೂಲಕ ಜನರ ಧ್ವನಿಯಾಗಿ ಛಾಪು ಮೂಡಿಸಿದ್ದರು ಎಂದರು. ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಿಕೆಗಳ ಪಾತ್ರ ಮಹತ್ತರವಾದುದು. ಈ ದಿಸೆಯಲ್ಲಿ ಪತ್ರಕರ್ತರ ಜವಾಬ್ದಾರಿ ಕೂಡ ಹೆಚ್ಚಿದ್ದು, ಸಮಾಜದಲ್ಲಿ ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಡಬೇಕಿದೆ ಎಂದು ಹೇಳಿದ ಅವರು. ಸಮಾಜದಲ್ಲಿ ಬೇರೂರಿರುವ ಜಾತಿ ವ್ಯವಸ್ಥೆ ಮತ್ತು ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಡಾ.ಸೋಮಣ್ಣ ಹೇಳಿದರು. ರಾಷ್ಟ್ರೀಯ ಅಪರಾಧ ತಡೆ ಮತ್ತು ಮಾನವ ಹಕ್ಕುಗಳ ಭಾರತ್ ಪರಿಷತ್ ರಾಷ್ಟ್ರೀಯ ಸಂಯೋಜಕ ಜೆ  ಅಲ್ಬರ್ಟ್  ಮನೋರಾಜ್  ಮಾತನಾಡಿ  ಇತ್ತೀಚಿನ ದಿನಗಳಲ್ಲಿ ಅಪರಾಧ, ಮಾನವ ಹಕ್ಕುಗಳ ಉಲ್ಲಂಘನೆ, ಭ್ರಷ್ಟಾಚಾರ ಸೇರಿದಂತೆ  ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು  ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ರಾಜಕೀಯ ಹಾಗೂ ವಿವಿಧ ಚಟುವಟಿಕೆಗಳಿಗೆ  ಯುವ ಸಮೂಹವನ್ನು  ಕರತಂದು ದಾರಿ ತಪ್ಪಿಸುವ ಕೆಲಸವಾಗುತ್ತಿದೆ. ದುಶ್ಚಟಗಳಿಂದ  ದೂರ ಮಾಡಲು  ಪೋಷಕರು ತಮ್ಮ ಮಕ್ಕಳನ್ನು  ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಲು ಮುಂದಾಗ ಬೇಕೆಂದು ಸಲಹೆ ನೀಡಿದ ಅವರು  ಭ್ರಷ್ಟಾಚಾರ ಮುಕ್ತ ದೇಶವನ್ನಾಗಿಸಲು  ನಮ್ಮೊಂದಿಗೆ ಕೈಜೋಡಿಸಬೇಕೆಂದರು. ವಂಶಿ ನ್ಯೂಸ್ ಸಂಸ್ಥೆಯ ಪ್ರಮುಖ  ಡಾ.ಎಚ್.ಎಂ.ರಘುಕೋಟಿ  ಮಾತನಾಡಿ  ವಿವಿಧ ಸಂಘ ಸಂಸ್ಥೆಗಳೊಂದಿಗೆ ಕೈಜೋಡಿಸಿ  ಹಲವು ವರ್ಷಗಳಿಂದ  ಅಂತರಾಷ್ಟ್ರೀಯ ಪತ್ರಿಕಾ ದಿನಾಚರಣೆಯೊಂದಿಗೆ  ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು  ಗೌರವಿಸುವ ಕೆಲಸ ಮಾಡಲಾಗುತ್ತಿದೆ ಎಂದರು. ಇದೇ ಸಂದರ್ಭ ಜಿಲ್ಲೆ ಹಾಗೂ ರಾಜ್ಯದ ನಾನಾ ಭಾಗಗಳ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ  ಸಾಧಕರಿಗೆ ಕಾವೇರಿ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಸಂದರ್ಭ  ಕುಶಾಲನಗರ ತಾಸಿಲ್ದಾರ್  ಕಿರಣ್ ಜೆ ಗೌರಯ್ಯ, ಮಾನವ ಹಕ್ಕುಗಳ ಭಾರತ್ ಪರಿಷತ್ ನ ಸಂಸ್ಥಾಪಕ ಅಧ್ಯಕ್ಷ ಡಾ ಜಾನ್ ಜೆ ಸಮುವೆಲ್ ಕಿಮ್, ಸಮಾಜ ಸೇವಕರಾದ  ಕೆ ಕೆ ಮಂಜುನಾಥ್, ಹೆಬ್ಬಾಲೆ ನಟೇಶ್ ಗೌಡ, ಕುಶಾಲ್ ನಗರ ಪ್ರಸ್ ಕ್ಲಬ್ ಗೌರವಾಧ್ಯಕ್ಷ ಬರಮಣ್ಣ ಟಿ ಬೆಟಗೇರಿ, ಮಾನವ ಹಕ್ಕುಗಳ ಭಾರತ್ ಪರಿಷತ್ತಿನ  ರಾಜ್ಯ ಮಹಿಳಾ ಅಧ್ಯಕ್ಷ  ಅನಿತಾ ಅಕ್ಷರ, ಮಹಿಳಾ ಸಂಘಟನೆಯ ಹೋರಾಟಗಾರ್ತಿ ರೋಹಿಣಿ ಎಸ್ ದೀಕ್ಷಿತ್,  ಕುರುಬ ರೈತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಡಿ ಆರ್ ಪ್ರಭಾಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಜಂಕರ್ ಮೆಲೋಡಿಸ್‌ನ ರವಿ ನೇತೃತ್ವದ  ತಂಡದವರಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ: ಜಾನಪದ ಕಲಾಪ್ರಕಾರಗಳ ಪ್ರದರ್ಶನಕ್ಕೆ ಮನಸೋತ ಜನತೆ; ಜಾನಪದ ಸಂಸ್ಕೃತಿಯ ಉಳಿವಿಗೆ ಹೆಚ್ಚಿನ ಕಾಳಜಿ ಅಗತ್ಯ: ಶಾಸಕ ಎ.ಎಸ್.ಪೊನ್ನಣ್ಣ ಕರೆ; ಕಲಾವಿದರು ಹಾಗೂ ಜಾನಪದ ವಸ್ತು ಸಂಗ್ರಹಕಾರರಿಗೆ ಸನ್ಮಾನ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.18 : ಕಾವೇರಿ ತೀರ್ಥೋದ್ಭವದ ದಿನವಾದ ಶನಿವಾರ ಕಾವೇರಿ ದರ್ಶನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಎ.ಎಸ್.ಪೊನ್ನಣ್ಣ ಹಾಗೂ…

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.