Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಆ.2 ರಂದು ಸಿಎನ್‍ಸಿಯ “ಕಕ್ಕಡ-18” ಕಾರ್ಯಕ್ರಮದಲ್ಲಿ ಬಿ.ಕೆ.ಹರಿಪ್ರಸಾದ್ ಭಾಗಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಆ.2 ರಂದು ಸಿಎನ್‍ಸಿಯ “ಕಕ್ಕಡ-18” ಕಾರ್ಯಕ್ರಮದಲ್ಲಿ ಬಿ.ಕೆ.ಹರಿಪ್ರಸಾದ್ ಭಾಗಿ

ಜುಲೈ 31, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜು.31 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಮಡಿಕೇರಿಯ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ಆ.2 ರಂದು ನಡೆಯುವ “ಕಕ್ಕಡ-18” ಕಾರ್ಯಕ್ರಮದಲ್ಲಿ ರಾಜ್ಯಸಭಾ ಮಾಜಿ ಸದಸ್ಯ ಹಾಗೂ ವಿಧಾನ ಪರಿಷತ್ ನ ವಿರೋಧ ಪಕ್ಷದ ಮಾಜಿ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಿರಿಯ ಮುತ್ಸದಿ ಬಿ.ಕೆ.ಹರಿಪ್ರಸಾದ್ ಅವರು ಕೊಡವರ ನೈಜ ಆಪತ್ಪಾಂಧವರಾಗಿದ್ದಾರೆ. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಸ್ವಯಂ ಆಡಳಿತಕ್ಕಾಗಿ ಸಿಎನ್‍ಸಿ ನಡೆಸುತ್ತಿರುವ ಶಾಂತಿಯುತ ಹೋರಾಟಕ್ಕೆ ಸುದೀರ್ಘ ಕಾಲದಿಂದ ಬೆಂಬಲ ನೀಡುತ್ತಾ ಬಂದಿದ್ದಾರೆ. ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್ ಗೆ ಸೇರಿಸುವುದು, ಕೊಡವರ ಧಾರ್ಮಿಕ ಸಂಸ್ಕಾರ ಬಂದೂಕು/ಗನ್ ಹಕ್ಕುಗಳ ಮಹತ್ವದ ಕುರಿತು ಪಾರ್ಲಿಮೆಂಟ್ ನಲ್ಲಿ ದೇಶದ ಸರಕಾರದ ಗಮನ ಸೆಳೆದಿದ್ದಾರೆ. 2019 ರ ಎಸ್‍ಸಿ ಎಸ್‍ಟಿ ಸಂವಿಧಾನ ತಿದ್ದುಪಡಿ ಮಸೂದೆಯ ಸಮಯದಲ್ಲಿ ಕೊಡವ ಬುಡಕಟ್ಟು ವರ್ಗೀಕರಣದ ಕಾಳಜಿಯನ್ನು ಮುನ್ನಲೆಗೆ ತಂದರು. “ಕಕ್ಕಡ-18” ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳುತ್ತಿರುವುದು ಹೆಮ್ಮೆ ಎನಿಸಿದೆ ಎಂದು ವಿವರಿಸಿದ್ದಾರೆ. ಕಾರ್ಯಕ್ರಮದ ಆರಂಭದಲ್ಲಿ ಕೊಡವ ಗುರುಕಾರೋಣರನ್ನು ಸ್ಮರಿಸಿ ಪ್ರಾರ್ಥಿಸಲಾಗುವುದು ಮತ್ತು “ಕಕ್ಕಡ-18” ರ ವಿಶೇಷ ಖಾದ್ಯಗಳನ್ನು ಅರ್ಪಿಸಲಾಗುವುದು. ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಆದಿಮಸಂಜಾತ ಕೊಡವರು ಆರಾಧಿಸುವ ಪ್ರಕೃತಿ ಸಿರಿಯ ಕೊಡವ ಮಾತೃಭೂಮಿಯನ್ನು ಉಳಿಸಿಕೊಳ್ಳುವ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಲಾಗುವುದು. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಸ್ವಯಂ ಆಡಳಿತ ನೀಡಬೇಕು, ಆದಿಮಸಂಜಾತ ಕೊಡವರಿಗೆ ಎಸ್‍ಟಿ ಟ್ಯಾಗ್ ಘೋಷಿಸಬೇಕು, ಆರ್ಟಿಕಲ್371, 244ನೇ ವಿಧಿ ಮತ್ತು 6 ಮತ್ತು 8ನೇ ಶೆಡ್ಯೂಲ್ ಪ್ರಕಾರ ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕು ಒದಗಿಸಬೇಕು, ಆದಿಮಸಂಜಾತ ಏಕ ಜನಾಂಗೀಯ ಕೊಡವರ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಸೇರಿಸಬೇಕು, ಕೊಡವರು, ಅವರ ಪಾರಂಪರಿಕ ಭೂಮಿ, ಭಾಷೆ, ಪರಿಸರ, ಜಲಸಂಪನ್ಮೂಲ, ಜಾನಪದ ಪರಂಪರೆ, ರಾಜಕೀಯ ಅಸ್ಮಿತೆ ಮತ್ತು ಐತಿಹಾಸಿಕ ನಿರಂತರತೆ, ಸಾಂಪ್ರದಾಯಿಕ ಆವಾಸಸ್ಥಾನಗಳನ್ನು ಗುರುತಿಸಬೇಕು ಮತ್ತು ರಾಜ್ಯಾಂಗ ಖಾತ್ರಿ ನೀಡಬೇಕು. ಆದಿಮಸಂಜಾತ ಜನಾಂಗಗಳ ಹಕ್ಕುಗಳ ಸಂರಕ್ಷಣೆಗಾಗಿ ವಿಶ್ವ ರಾಷ್ಟ್ರ ಸಂಸ್ಥೆ ಯುಎನ್‍ಒ ಒಡಂಬಡಿಕೆಯಂತೆ ಅಂತರಾಷ್ಟ್ರೀಯ ಕಾನೂನಿನಡಿಯಲ್ಲಿ ಕೊಡವರ ಹಕ್ಕುಗಳನ್ನು ಘೋಷಿಸಬೇಕು ಮತ್ತು ಪೋಷಿಸಬೇಕು ಎಂದು ಹಕ್ಕೊತ್ತಾಯ ಮಂಡಿಸುವುದಾಗಿ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಅತ್ಯಂತ ಸೂಕ್ಷ್ಮ ಆದಿಮಸಂಜಾತ ಕೊಡವ ಬುಡಕಟ್ಟು ಸಮುದಾಯದ ಪ್ರಕೃತಿ ಆರಾಧನೆಗೆ ಪೂರಕವಾದ ಜಾನಪದೀಯ ವಿಶಿಷ್ಟ ಆಚರಣೆಯಾದ “ಕಕ್ಕಡ-18” ನ್ನು ಮುಂದಿನ ಕೊಡವ ಯುವ ಪೀಳಿಗೆಗೆ ಹಾಗೂ ವಿಶ್ವಕ್ಕೆ ಪರಿಚಯಿಸಬೇಕು ಎನ್ನುವ ಉದ್ದೇಶದಿಂದ ಸಿಎನ್‍ಸಿ ಸಂಘಟನೆ ಕಳೆದ 30 ವರ್ಷಗಳಿಂದ ಸಾರ್ವತ್ರಿಕವಾಗಿ ಆಚರಿಸಿಕೊಂಡು ಬರುತ್ತಿದೆ.   ಮಾತೃಭೂಮಿ, ಜಲದೇವಿ, ವನದೇವಿ, ಕೃಷಿ ಪದ್ಧತಿ, ಯೋಧ ಪರಂಪರೆಯೊಂದಿಗೆ ಬೆಸೆದುಕೊಂಡಿರುವ ಕೊಡವರ ಜನಪದೀಯ ಧಾರ್ಮಿಕ ಮತ್ತು ಪ್ರಾಕೃತಿಕ ಆಚರಣೆಗಳಲ್ಲಿ “ಕಕ್ಕಡ-18” ಕೂಡ ಒಂದಾಗಿದೆ. ನಾಟಿ ಮತ್ತಿತರ ಕೃಷಿ ಕಾರ್ಯದ ಮೂಲಕ ಭೂದೇವಿಗೆ ನಮಿಸುವ ಕೊಡವ ರೈತರು ಪ್ರಕೃತಿದತ್ತವಾಗಿ ದೊರೆಯುವ 18 ವಿವಿಧ ಔಷಧೀಯ ಗುಣ ಹೊಂದಿರುವ ಮದ್ದು ಸೊಪ್ಪಿನಿಂದ ತಯಾರಿಸಿದ ಪಾಯಸ, ಮದ್ದುಪುಟ್ ಸೇರಿದಂತೆ ವಿವಿಧ ಖಾದ್ಯಗಳನ್ನು ಸವಿಯುತ್ತಾರೆ. ಇದು ದೇಹದ ಆರೋಗ್ಯವನ್ನು ಕಾಪಾಡುತ್ತದೆ, ಅಲ್ಲದೆ ಪ್ರಕೃತಿಗೆ ಪೂರಕವಾಗಿ ಹೊಂದಿಕೊಳ್ಳಲು ಸಹಾಯ ಮಾಡುತ್ತದೆ. ಕೊಡವ ಪೂರ್ವಜರು ಕೊಡವ ಭೂಮಿಯಲ್ಲಿ ದೊರೆಯುವ ಪ್ರಾಕೃತಿಕ ಗಿಡಮೂಲಿಕೆಗಳ ಸತ್ವ ಮತ್ತು ಆರೋಗ್ಯವರ್ಧಕ ಶಕ್ತಿಯ ಪರಿಚಯವನ್ನು ಈ ಸಮಾಜಕ್ಕೆ ಬಳುವಳಿಯಾಗಿ ನೀಡಿ ಹೋಗಿದ್ದಾರೆ. ಇದನ್ನು ಮುಂದಿನ ಪೀಳಿಗೆಗೆ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಆದ್ದರಿಂದ ಸಿಎನ್‍ಸಿ ಸಂಘಟನೆ ನಡೆಸುತ್ತಿರುವ ಸಾರ್ವತ್ರಿಕ “ಕಕ್ಕಡ-18” ಆಚರಣೆಯಲ್ಲಿ ಸರ್ವ ಕೊಡವ, ಕೊಡವತಿಯರು ಸಾಂಪ್ರದಾಯಿಕ ಕೊಡವ ಉಡುಪಿನಲ್ಲಿ ಪಾಲ್ಗೊಳ್ಳುವಂತೆ ಎನ್.ಯು.ನಾಚಪ್ಪ ಮನವಿ ಮಾಡಿದ್ದಾರೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ: ಜಾನಪದ ಕಲಾಪ್ರಕಾರಗಳ ಪ್ರದರ್ಶನಕ್ಕೆ ಮನಸೋತ ಜನತೆ; ಜಾನಪದ ಸಂಸ್ಕೃತಿಯ ಉಳಿವಿಗೆ ಹೆಚ್ಚಿನ ಕಾಳಜಿ ಅಗತ್ಯ: ಶಾಸಕ ಎ.ಎಸ್.ಪೊನ್ನಣ್ಣ ಕರೆ; ಕಲಾವಿದರು ಹಾಗೂ ಜಾನಪದ ವಸ್ತು ಸಂಗ್ರಹಕಾರರಿಗೆ ಸನ್ಮಾನ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.18 : ಕಾವೇರಿ ತೀರ್ಥೋದ್ಭವದ ದಿನವಾದ ಶನಿವಾರ ಕಾವೇರಿ ದರ್ಶನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಎ.ಎಸ್.ಪೊನ್ನಣ್ಣ ಹಾಗೂ…

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.