Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವ್ಯಸನ ಮುಕ್ತ ದಿನಾಚರಣೆ : ವ್ಯಸನಮುಕ್ತ ಸಮಾಜಕ್ಕೆ ಡಾ.ಮಹಾಂತ ಶಿವಯೋಗಿಗಳ ಜೋಳಿಗೆ ಯೋಜನೆ ನಾಂದಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವ್ಯಸನ ಮುಕ್ತ ದಿನಾಚರಣೆ : ವ್ಯಸನಮುಕ್ತ ಸಮಾಜಕ್ಕೆ ಡಾ.ಮಹಾಂತ ಶಿವಯೋಗಿಗಳ ಜೋಳಿಗೆ ಯೋಜನೆ ನಾಂದಿ

ಆಗಷ್ಟ್ 1, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಆ.1 NEWS DESK : ಅರಿವೆಯ ಚೀಲವನ್ನು ಹಿಡಿದು ಮನೆಯಿಂದ ಮನೆಗೆ ಹೋಗಿ ಕುಟುಂಬ- ಸಮಾಜ- ದೇಶವನ್ನೇ ಹಾಳು ಮಾಡುವ ದುವ್ರ್ಯಸನ ಹಾಗೂ ದುಶ್ಚಟಗಳ ದಾಸ್ಯದಿಂದ ಜನಸಾಮಾನ್ಯರನ್ನು ಹೊರತರಲು ಜನರ ಎಲ್ಲಾ ದುಶ್ಚಟಗಳ ವಸ್ತುಗಳನ್ನು ತಮ್ಮ ಜೋಳಿಗೆಗೆ ಹಾಕಿಸಿಕೊಂಡು, ಇನ್ನೆಂದೂ ಅವುಗಳನ್ನು ಬಳಸುವುದಿಲ್ಲ ಎಂದು ಪ್ರಮಾಣ ಮಾಡಿಸಿದವರು ಡಾ.ಮಹಾಂತ ಶಿವಯೋಗಿ ಅವರು ಹಲವಾರು ಸಮಾಜ ಸುಧಾರಣೆ ಕಾರ್ಯಗಳೊಂದಿಗೆ ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿಯೂ ತಮ್ಮನ್ನು ಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ತೊಡಗಿಸಿಕೊಂಡಿದ್ದ ಮಹಾಂತ ಸ್ವಾಮಿಗಳು ಸಮಾಜ ಸುಧಾರಣೆಯ ಮೊದಲ ಹಾಗೂ ಅತಿಮುಖ್ಯ ಹೆಜ್ಜೆ ಮನಃಪರಿವರ್ತನೆ ಎಂಬುದನ್ನು ಅರಿತಿದ್ದರು. ಅಜ್ಞಾನ, ಅನಾರೋಗ್ಯ, ಅಪರಾಧ, ಅಸಮಾನತೆ ಯಂತಹ ಸಾಮಾಜಿಕ ಪಿಡುಗುಗಳಿಂದ ಮುಕ್ತರಾಗಲು ಮೊದಲು ಮನಸ್ಸನ್ನು ಈ ಪಿಡುಗುಗಳಿಂದ ಮುಕ್ತಗೊಳಿಸಬೇಕು ಎಂದು ಅವರು ನಂಬಿದ್ದರು. ವಿಜಯಪುರ ಜಿಲ್ಲೆಯ (ಇಂದಿನ ಬಾಗಲಕೋಟೆ ಜಿಲ್ಲೆ) ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಆಗಸ್ಟ್ 1, 1930 ರಲ್ಲಿ ಜನಿಸಿದ ಡಾ|| ಮಹಾಂತ ಶಿವಯೋಗಿಗಳು ತಮ್ಮ 10ನೇ ವಯಸ್ಸಿಗೆ ಸವದಿಯ ವಿರಕ್ತಮಠದ ಕಿರಿಯ ಸ್ವಾಮೀಜಿಗಳಾದರು. ಪೂಜ್ಯರ ಬಾಲ್ಯದ ಹೆಸರು ಮಹಾಂತಯ್ಯ. ಮುಧೋಳ ಗವಿಮಠದಲ್ಲಿ ಸಂಸ್ಕೃತ ಪಾಠಶಾಲೆಗೆ ಸೇರಿದ ಮಹಾಂತಯ್ಯ ಅವರು ಅಲ್ಲಿ ಮೂರು ವರ್ಷಗಳ ಕಾಲ ಅಧ್ಯಯನ ಮಾಡಿ ನಂತರ 1944 ರಲ್ಲಿ ಶಿವಯೋಗ ಮಂದಿರದಲ್ಲಿ ಆರು ವರ್ಷಗಳ ಕಾಲ ಸಂಸ್ಕೃತ-ಕನ್ನಡ ವಿದ್ಯಾಭ್ಯಾಸ ಮಾಡಿದರು. ಮುಂದಿನ ವಿದ್ಯಾಭ್ಯಾಸಕ್ಕಾಗಿ ಬನಾರಸ ಅಂದರೆ ಕಾಶಿಗೆ ತೆರಳಿ ಅಲ್ಲಿ ಜಂಗಮವಾಡಿ ಮಠದಲ್ಲಿದ್ದು, ಸಂಸ್ಕೃತ, ಹಿಂದಿ, ಯೋಗ, ಶಾಸ್ತ್ರೀಯ ಸಂಗೀತದಲ್ಲಿ ವಿಶೇಷ ಪರಿಣತಿ ಸಾಧಿಸಿದರು. ನಿರಂತರ ಅನ್ನ ದಾಸೋಹ, ವಚನ ಮಾಂಗಲ್ಯ, ದೇವದಾಸಿ ವಿಮೋಚನಾ ಸಂಸ್ಥೆ, ದೇವದಾಸಿಯರ ಮಕ್ಕಳಿಗೆ ಟ್ರಸ್ಟ್ ಸ್ಥಾಪನೆ, ನಿರುದ್ಯೋಗಿಗಳಿಗೆ ಮತ್ತು ವಿಧವೆಯರಿಗೆ ಕಾಯಕ ಸಂಜೀವಿನಿ ಸಂಸ್ಥೆ, ನಿಸರ್ಗ ಚಿಕಿತ್ಸೆ-ಯೋಗ ಕೇಂದ್ರ ಸ್ಥಾಪಿಸಿದ ಜೊತೆಗೆ ಶಾಖಾ ಮಠಗಳಿಗೆ ಪ.ಜಾತಿ ಮತ್ತು ಪಂಗಡಗಳ ಯುವಕರಿಗೆ ಧರ್ಮ ಸಂಸ್ಕಾರ ನೀಡಿ ಪಟ್ಟಾಭಿಷೇಕ ಮಾಡಿದ್ದು, ಮಹಿಳಾ ಸಾಧಕಿಯರಿಗೆ ಜಂಗಮ ದೀಕ್ಷೆ ನೀಡಿ ಮಠಾಧಿಕಾರಿಯನ್ನಾಗಿ ಮಾಡಿದ್ದು, ಮಠದ ನೂರಾರು ಎಕರೆ ಭೂಮಿಯನ್ನು ಆಯಾಯ ಗ್ರಾಮಗಳ ರೈತರಿಗೆ ಕೃಷಿ ಮಾಡಿ ಬದುಕಲು ನೀಡಿದ್ದು ಮುಂತಾದ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡಿದರು. ಇದೇ ಸಂದರ್ಭದಲ್ಲಿ ಉತ್ತರ ಕರ್ನಾಟಕದಲ್ಲಿ ಭೀಕರ ಬರಗಾಲ ಉಂಟಾಗಿ ಮಳೆ ಬೆಳೆ ಇಲ್ಲದೆ ಹಳ್ಳಿಯ ಜನರು, ದನ ಕರುಗಳಿಗೆ ಆಹಾರ-ನೀರು ಇಲ್ಲದೇ ಸಂಕಷ್ಟಕ್ಕೆ ಒಳಗಾಗಿರುವುದನ್ನು ತಿಳಿದು ಕಾಶಿಯಿಂದ ಹಿಂದಿರುಗಿದ ಅವರು ನೂರಾರು ಗ್ರಾಮಗಳಲ್ಲಿ ಕಾಳಜಿ ಕೇಂದ್ರ ಆರಂಭಿಸಿ ದಾಸೋಹ ಮಾಡಿದ್ದು ಮಾತ್ರವಲ್ಲದೇ ಗೋಶಾಲೆಗಳನ್ನು ಆರಂಭಿಸಿ ಮೇವು ಮತ್ತು ನೀರಿನ ವ್ಯವಸ್ಥೆ ಮಾಡಿದರು. ಈ ಎಲ್ಲ ಸೇವೆಗಳಿಗಿಂತ ಹೆಚ್ಚಾಗಿ ಮತ್ತೊಂದು ಮಹತ್ತರ ಸಮಾಜ ಸುಧಾರಕ ಸೇವೆ ಅವರ ಹೆಸರನ್ನು ಸರ್ಕಾರ ಗುರುತಿಸುವಂತೆ ಮಾಡಿದೆ. ಅದೇ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಪ್ರಾರಂಭಿಸಿದ ಮಹಾಂತ ಜೋಳಿಗೆ ಯೋಜನೆ. ಮನಸ್ಸು, ದೇಹ, ಕುಟುಂಬ ಹಾಗೂ ದೇಶದ ಸ್ವಾಸ್ಥ್ಯ ಹಾಳು ಮಾಡುವ ವ್ಯಸನ ದಾಸ್ಯವೂ ಸಾಮಾಜಿಕ ಪಿಡುಗುಗಳಲ್ಲಿ ಒಂದು. ಕುಡಿತದ ಚಟದಿಂದ ಪ.ಜಾತಿಯ ಯುವಕನೊಬ್ಬ ಜೀವ ಕಳೆದುಕೊಂಡ ಸುದ್ದಿ ಕೇಳಿ ಅವನ ಕೇರಿಗೆ ಸಾಂತ್ವನ ಹೇಳಲು ತೆರಳಿದ್ದ ಮಹಾಂತ ಶಿವಯೋಗಿ ಸ್ವಾಮಿಗಳಿಗೆ ಆತನ ಪತ್ನಿ ಮತ್ತು ಮಕ್ಕಳು ಉಪವಾಸದಿಂದ ದು:ಖಿಸುವುದನ್ನು ಕಂಡು ಇಂತಹ ಸಾವಿರಾರು ಕುಟುಂಬಗಳ ಕುಡಿತ ಮತ್ತು ಇತರೇ ದುಶ್ಚಟಗಳಿಂದ ಹಾಳಾಗಿರುವುದನ್ನು ಅರಿತರು. ಇಂತಹ ದುಶ್ಚಟಗಳಿಗೆ ಒಳಗಾಗಿರುವವರನ್ನು ವ್ಯಸನ ಮುಕ್ತಗೊಳಿಸುವ ಉದ್ದೇಶದಿಂದ ಮಹಾಂತ ಜೋಳಿಗೆ ಯೋಜನೆಯನ್ನು 1975 ರಿಂದ ಆರಂಭಿಸಿ ಯಶಸ್ಸು ಕಂಡರು. ಪ್ರಾಣತೆತ್ತ ಆ ಪ.ಜಾತಿಯ ಯುವಕನ ಕೇರಿಯಿಂದಲೇ ಈ ಯೋಜನೆಯನ್ನು ಪ್ರಾರಂಭಿಸಿದ ಸ್ವಾಮೀಜಿ ಅಲ್ಲಿನ ಗುಡಿಸಲು ಮನೆಗಳಿಗೆ ತೆರಳಿ ಮದ್ಯಪಾನ, ತಂಬಾಕು ಸೇರಿದಂತೆ ಎಲ್ಲಾ ರೀತಿಯ ದುಶ್ಚಟಗಳ ಬಗ್ಗೆ ಅಲ್ಲಿನ ಜನತೆಗೆ ಮನ ಮುಟ್ಟುವಂತೆ ತಿಳುವಳಿಕೆ ನೀಡಿದರು. ಸ್ವಾಮಿಗಳ ಮಾತುಗಳಿಗೆ ಮನ ಕರಗಿ ಪರಿವರ್ತನೆಯಾದ ಜನರು ತಮ್ಮ ಎಲ್ಲಾ ದುಶ್ಚಟಗಳ ವಸ್ತುಗಳನ್ನು ಸ್ವಾಮೀಜಿಯವರ ಜೋಳಿಗೆಗೆ ಹಾಕಿ, ಇನ್ಮುಂದೆ ಅವುಗಳನ್ನು ಬಳಸುವುದಿಲ್ಲ ಎಂದು ಪ್ರಮಾಣ ಮಾಡಿದರು. ಜೊತೆಗೆ “ಶರಣ ಸಿದ್ಧಾಂತ ವಿದ್ಯಾಪೀಠದ ಶಿವಾನುಭವ ತರಬೇತಿ ಶಿಬಿರ” ಗಳನ್ನು ಏರ್ಪಡಿಸಿ ನಾಡಿನ ಪ್ರಖ್ಯಾತ ವೈದ್ಯರು, ಸಮಾಜ ವಿಜ್ಞಾನಿಗಳು, ಸಾಹಿತಿಗಳು, ಸಾಮಾಜಿಕ ಕಳಕಳಿ ಹೊಂದಿರುವ ಕವಿಗಳು, ಧರ್ಮ ಗುರುಗಳನ್ನು ಆಹ್ವಾನಿಸಿ ಅವರಿಂದ ಉಪನ್ಯಾಸಗಳನ್ನು ಮಾಡಿಸುವ ಮೂಲಕ ವ್ಯಸನಗಳ ಮನಪರಿವರ್ತನೆ ಮಾಡುವುದರ ಜೊತೆಗೆ ಮಕ್ಕಳು, ವಿದ್ಯಾರ್ಥಿಗಳು- ಯುವ ಜನಾಂಗ ಇಂತಹ ಚಟಗಳಿಗೆ ಬಲಿಯಾಗದಂತೆ ಅರಿವು ಮೂಡಿಸುತ್ತಿದ್ದರು. ಇದರಿಂದಾಗಿ ಲಕ್ಷಾಂತರ ಜನ ವ್ಯಸನಗಳಿಂದ ಮುಕ್ತರಾಗಿ ಅವರ ಕುಟುಂಬಗಳು ನೆಮ್ಮದಿಯ ಜೀವನ ಸಾಗಿಸುತ್ತಿವೆ. ಡಾ.ಮಹಾಂತ ಶಿವಯೋಗಿ ಅವರ ಜನ್ಮದಿನವಾದ ಆಗಸ್ಟ್ 1 ನ್ನು ರಾಜ್ಯ ಸರ್ಕಾರವು ರಾಜ್ಯಾದ್ಯಂತ ವ್ಯಸನ ಮುಕ್ತ ದಿನವನ್ನಾಗಿ ಆಚರಿಸಲು 2022 ರಲ್ಲಿ ನಿರ್ಧರಿಸಿ ಆದೇಶಿಸಿದ್ದು, ಕರ್ನಾಟಕ ರಾಜ್ಯವನ್ನು ವ್ಯಸನ ಮುಕ್ತ ರಾಜ್ಯವಾಗಿ ಮಾಡಲು ಸಾರ್ವಜನಿಕರು ಹಾಗೂ ಯುವಜನತೆ ವ್ಯಸನಗಳಿಂದ ಮುಕ್ತವಾಗಲು ಈ ದಿನಾಚರಣೆಯು ಪ್ರೇರಣೆಯಾಗಲಿದೆ. ಇಂದು ಆಧುನಿಕ ತಂತ್ರಜ್ಞಾನದ ಹತ್ತಾರು ವ್ಯಸನಗಳಿಗೆ ಸಿಲುಕಿರುವ ಯುವಪೀಳಿಗೆಯ ಮನಸ್ಸನ್ನೂ ವ್ಯಸನಮುಕ್ತಗೊಳಿಸಲು ಇಂತಹ ಕಾರ್ಯಕ್ರಮಗಳು ಅತ್ಯಂತ ಪ್ರಸ್ತುತ ಹಾಗೂ ಅಗತ್ಯ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ: ಜಾನಪದ ಕಲಾಪ್ರಕಾರಗಳ ಪ್ರದರ್ಶನಕ್ಕೆ ಮನಸೋತ ಜನತೆ; ಜಾನಪದ ಸಂಸ್ಕೃತಿಯ ಉಳಿವಿಗೆ ಹೆಚ್ಚಿನ ಕಾಳಜಿ ಅಗತ್ಯ: ಶಾಸಕ ಎ.ಎಸ್.ಪೊನ್ನಣ್ಣ ಕರೆ; ಕಲಾವಿದರು ಹಾಗೂ ಜಾನಪದ ವಸ್ತು ಸಂಗ್ರಹಕಾರರಿಗೆ ಸನ್ಮಾನ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.18 : ಕಾವೇರಿ ತೀರ್ಥೋದ್ಭವದ ದಿನವಾದ ಶನಿವಾರ ಕಾವೇರಿ ದರ್ಶನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಎ.ಎಸ್.ಪೊನ್ನಣ್ಣ ಹಾಗೂ…

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.