

ನಾಪೋಕ್ಲು ಆ.1 NEWS DESK : ನಾಪೋಕ್ಲು ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ವತಿಯಿಂದ ಆ.3 ರಂದು ಕಕ್ಕಡ-18 ತೀನಿ ನಮ್ಮೆ ಪೈಪೋಟಿ ಮತ್ತು ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ನಡೆಯಲಿದೆ. ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಳೆಯಡ ನಿಷಾ ಮೇದಪ್ಪ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದು,್ದ ಕೊಳಕೇರಿಯ ಕಾಫಿ ಬೆಳೆಗಾರ್ತಿ ಬಿದ್ದಾಟಂಡ ಸುಮನ್ ಪ್ರದೀಪ್ ಉದ್ಘಾಟಿಸಲಿದ್ದಾರೆ. ತಿನಿಸುಗಳ ಪ್ರದರ್ಶನವನ್ನು ನೆಲಜಿ ಮಹಿಳಾ ಸಮಾಜದ ಮಾಜಿ ಅಧ್ಯಕ್ಷೆ ಮಣವಟ್ಟಿರ ಕಮಲ ಬೆಳ್ಳಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬ್ಯಾಂಕ್ ಆಫ್ ಮಹಾರಾಷ್ಟ್ರದ ನಿವೃತ್ತ ವ್ಯವಸ್ಥಾಪಕಿ ಕೋಡಿಮಣಿಯಂಡ ರಚನ ಕುಟ್ಟಪ್ಪ, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ನರ್ಸಿಂಗ್ ಸೂಪರಿಟೆಂಡೆಂಟ್ ಬಾಳೆಯಡ ರತಿ ಪೆಮ್ಮಯ್ಯ ಹಾಗೂ ಗೋಣಿಕೊಪ್ಪದ ಕಾವೇರಿ ಕಾಲೇಜಿನ ಉಪನ್ಯಾಸಕಿ ಚೀಯಕಪೂವಂಡ ಸವಿತ ಅಪ್ಪಚ್ಚು ಅವರನ್ನು ಸನ್ಮಾನಿಸಲಾಗುವುದು. ಕಕ್ಕಡ ತೀನಿರ ಭೋಜ ಎಂಬ ವಿಷಯದ ಕುರಿತು ಪುಲಿಕೋಟು ಗ್ರಾಮದ ಲೇಖಕಿ ಕರವಂಡ ಸೀಮಾ ಗಣಪತಿ ವಿಚಾರ ಮಂಡಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೊಡವ ತೀನಿ ಪೈಪೋಟಿ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ವರದಿ : ದುಗ್ಗಳ ಸದಾನಂದ.








