
ಸುಂಟಿಕೊಪ್ಪ ಆ.1 NEWS DESK : ಕಂಬಿಬಾಣೆ, ಅತ್ತೂರು, ನಲ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸರಕಾರದ ವತಿಯಿಂದ ನೀಡಲಾಗುವ ಶೂ ಮತ್ತು ಸಾಕ್ಸ್‍ಗಳನ್ನು ವಿತರಿಸಲಾಯಿತು. ಕಂಬಿಬಾಣೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾದ ಆರ್.ಆರ್.ಮೋಹನ್ ಅವರು ಅತ್ತೂರು ನಲ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 66 ಮಕ್ಕಳಿಗೆ ಶೂ ಮತ್ತು ಸಾಕ್ಸ್ ಅನ್ನು ವಿತರಿಸಿ ಮಾತನಾಡಿದ ಅವರು, ಸರಕಾರವು ಪ್ರತಿಯೊಬ್ಬ ಮಕ್ಕಳು ಶಿಕ್ಷಣವನ್ನು ಪಡಯಲೇಬೇಕೆಂಬ ಮುಖ್ಯಉದ್ದೇಶವನ್ನು ಇರಿಸಿಕೊಂಡು ಮಕ್ಕಳ ಶಿಕ್ಷಣಕ್ಕಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅದನ್ನು ಪಡೆದುಕೊಂಡು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುವ ಮೂಲಕ ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಮತ್ತು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು. ಈ ಸಂದರ್ಭ ಶಾಲಾ ಮುಖ್ಯೋಪಾದ್ಯಾಯನಿ ನಯನ ಹಾಗೂ ಸಹಶಿಕ್ಷಕರು ವಿದ್ಯಾರ್ಥಿಗಳು ಇದ್ದರು.








