Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಿಮ್ಮೊಂದಿಗೆ ನಾವಿದ್ದೇವೆ : ಶಾಸಕ ಡಾ.ಮಂತರ್ ಗೌಡ ಭರವಸೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಿಮ್ಮೊಂದಿಗೆ ನಾವಿದ್ದೇವೆ : ಶಾಸಕ ಡಾ.ಮಂತರ್ ಗೌಡ ಭರವಸೆ*

ಆಗಷ್ಟ್ 1, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

 

ಮಡಿಕೇರಿ ಆ.1 NEWS DESK : ನಗರದ ರೆಡ್‍ಕ್ರಾಸ್ ಭವನದ ಕಾಳಜಿ ಕೇಂದ್ರಕ್ಕೆ ಶಾಸಕ ಡಾ.ಮಂತರ್ ಗೌಡ ಅವರು ಶುಕ್ರವಾರ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿದರು. ನಗರದ ಸಮೀಪದಲ್ಲಿರುವ ಹೆದ್ದಾರಿ ತಡೆಗೋಡೆ ಬಿರುಕಿನಿಂದ 5 ಕುಟುಂಬಗಳು ರೆಡ್‍ಕ್ರಾಸ್ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಂಡಿರುವ ಹಿನ್ನೆಲೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದ ಶಾಸಕರು ನಿಮ್ಮೊಂದಿಗೆ ನಾವಿದ್ದೇವೆ ಎಂದು ಭರವಸೆ ನೀಡಿದರು. ತಡೆಗೋಡೆ ಬಿರುಕು ಬಿಟ್ಟಿರುವ ಹಿನ್ನೆಲೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾದಲ್ಲಿ ತೊಂದರೆಗೆ ಸಿಲುಕಬೇಕಾಗುತ್ತದೆ. ಆದ್ದರಿಂದ ತಾತ್ಕಾಲಿಕವಾಗಿ ಕಾಳಜಿ ಕೇಂದ್ರದಲ್ಲಿ ಇರುವಂತೆ ಮನವಿ ಮಾಡಿದರು. ಈಗಾಗಲೇ 2018 ಮತ್ತು 2019 ರಲ್ಲಿ ಸಂತ್ರಸ್ತರಿಗೆ ಮನೆ ನೀಡಿರುವ ಜಾಗದಲ್ಲಿ ಮನೆ ಖಾಲಿ ಇದ್ದಲ್ಲಿ, ಮನೆ ಒದಗಿಸುವ ಸಂಬಂಧ ಪರಿಶೀಲಿಸಿ ಕ್ರಮವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ಶಾಸಕರು ಸಲಹೆ ಮಾಡಿದರು. ಇಂತಹ ಕುಟುಂಬಗಳು ಸಂತ್ರಸ್ತ ಕುಟುಂಬಗಳ ಮನೆ ಪಟ್ಟಿಯಿಂದ ಏಕೆ ಕೈಬಿಟ್ಟಿವೆ ಎಂದು ತಿಳಿಯುತ್ತಿಲ್ಲ. ಆದ್ದರಿಂದ ಮರು ಪರಿಶೀಲಿಸಿ ಮನೆ ನೀಡಲು ಕ್ರಮವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಸಲಹೆ ನೀಡಿದರು. ಕಾಳಜಿ ಕೇಂದ್ರಕ್ಕೆ ಶಾಸಕರು ಭೇಟಿ ನೀಡುತ್ತಿದ್ದಂತೆ ಅಳಲು ತೋಡಿಕೊಂಡ ಸಂತ್ರಸ್ತರಾದ ರತ್ನಮ್ಮ ಅವರು ನಮ್ಮ 5 ಕುಟುಂಬದವರಿಗೆ ಮನೆಯಾದರೆ ಸಾಕು, ಇನ್ನೇನೂ ಬೇಡ, ಇಲ್ಲಿನ ಐದು ಕುಟುಂಬಗಳು ಕೋಳಿ, ಹಂದಿ ಸಾಕಿಕೊಂಡು ಜೀವನ ನಡೆಸುತ್ತಿದ್ದೇವೆ ಎಂದು ದುಃಖಿತರಾದರು. ಈ ಸಂದರ್ಭದಲ್ಲಿ ಧೈರ್ಯ ಹೇಳಿದ ಶಾಸಕರು ನಿಮ್ಮ ಅಳಲು ನಮಗೆ ಸಂಕಟ ತರುತ್ತದೆ. ಆದ್ದರಿಂದ ಮನೆ ಒದಗಿಸಲು ಪ್ರಯತ್ನಿಸಲಾಗುವುದು. ಸದ್ಯ ಮುನ್ನೆಚ್ಚರ ವಹಿಸಬೇಕಿರುವುದರಿಂದ ಕಾಳಜಿ ಕೇಂದ್ರದಲ್ಲಿ ಇರುವಂತೆ ಕೋರಿದರು. ಸೂಕ್ಷ್ಮ ಪ್ರದೇಶವಾಗಿರುವುದರಿಂದ ಮುನ್ನೆಚ್ಚರ ವಹಿಸುವುದು ಅತ್ಯಗತ್ಯವಾಗಿದೆ ಎಂದು ಡಾ.ಮಂತರ್ ಗೌಡ ಅವರು ಹೇಳಿದರು. ಮಾನವೀಯ ದೃಷ್ಟಿಯಿಂದ ಪ್ರತಿಯೊಬ್ಬರ ಜೀವ ರಕ್ಷಣೆ ಮಾಡುವುದು ಆದ್ಯ ಕರ್ತವ್ಯವಾಗಿದೆ. ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಕಾಳಜಿ ಕೇಂದ್ರದಲ್ಲಿ ಇರುವಂತೆ ಮನವಿ ಮಾಡಿದರು. ಬದಲಿ ಜಾಗ/ನಿವೇಶನ, ಮನೆ ನೀಡಿದಲ್ಲಿ ಈಗಿರುವ ಜಾಗವನ್ನು ಬಿಡಬೇಕು ಎಂದು ಇದೇ ಸಂದರ್ಭದಲ್ಲಿ ಶಾಸಕರು ತಿಳಿಸಿದರು. ಇದೇ ಸಂದರ್ಭದಲ್ಲಿ ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ಅಡುಗೆಗೆ ಬೇಕಾದ ಸಾಮಾಗ್ರಿಗಳು, ಬೆಡ್‍ಶೀಟ್, ಟಾರ್ಪಲ್ ಹಾಗೂ ಕೊಡೆ ಮತ್ತಿತರ ಒಳಗೊಂಡ ಕಿಟ್‍ನ್ನು ಶಾಸಕರಾದ ಡಾ.ಮಂತರ್ ಗೌಡ ಅವರು ವಿತರಿಸಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಈಗಾಗಲೇ ಹಂಚಿಕೆ ಮಾಡಲಾಗಿರುವ ಮನೆಗಳನ್ನು ಮರು ಪರಿಶೀಲಿಸುವಂತಾಗಬೇಕು. ಜೊತೆಗೆ ಇನ್ಪೋಸಿಸ್ ಸಂಸ್ಥೆಯ ಮನೆ ಸಹ ಬಳಸಿಕೊಳ್ಳುವಂತಾಗಬೇಕು. ಇಂತಹ ಸಂತ್ರಸ್ತರಿಗೆ ಕೂಡಲೇ ಮನೆ ಒದಗಿಸುವಂತಾಗಬೇಕು ಎಂದು ಹೇಳಿದರು. ಹೆಚ್ಚಿನ ಮಳೆಯಿಂದ ತೊಂದರೆಗೆ ಸಿಲುಕಿರುವವರು ಹತ್ತಿರದ ಗ್ರಾ.ಪಂ.ಅಥವಾ ಕಂದಾಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರವಾಗಬೇಕು ಎಂದು ಮನವಿ ಮಾಡಿದರು.  ಇದೇ ಸಂದರ್ಭದಲ್ಲಿ ಶಾಸಕರಾದ ಡಾ.ಮಂತರ್ ಗೌಡ ಅವರು ಸಂತ್ರಸ್ತರಿಗೆ ಊಟ ಬಡಿಸಿದರು. ನಂತರ ಶಾಸಕರು, ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೇರಿದಂತೆ ಎಲ್ಲರೂ ಸಂತ್ರಸ್ತರ ಜತೆ ಊಟ ಸವಿದರು. ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ಬಿ.ಕೆ.ರವೀಂದ್ರ ರೈ ಅವರು ಮಾತನಾಡಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯು ಪ್ರಾಕೃತಿಕ ವಿಕೋಪ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದಂತೆ ವಿವಿಧ ವಿಪತ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ಸ್ಪಂದಿಸುತ್ತಾ ಬಂದಿದೆ ಎಂದು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ತಹಶೀಲ್ದಾರ್ ಶ್ರೀಧರ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಉಪ ಸಭಾಪತಿ ಎಚ್.ಟಿ.ಅನಿಲ್, ಕಾರ್ಯದರ್ಶಿ ಧನಂಜಯ, ರೆಡ್‍ಕ್ರಾಸ್ ಸಂಸ್ಥೆಯ ಉತ್ತಯ್ಯ, ತೆನ್ನಿರಾ ಮೈನಾ, ಪ್ರಮುಖರಾದ ಜಗದೀಶ್, ಪ್ರಕಾಶ್ ಆಚಾರ್ಯ, ಪ್ರಭು ರೈ,  ಮುದ್ದುರಾಜ್, ಸದಾಮುದ್ದಪ್ಪ, ಮೀನಾಜ್, ರವಿಗೌಡ, ನಗರಸಭೆ ಎಂಜಿನಿಯರ್‍ಗಳಾದ ಸತೀಶ್, ಹೇಮಂತ್ ಕುಮಾರ್, ತಾಹಿರ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.