Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ವ್ಯಸನ ಮುಕ್ತ ದಿನಾಚರಣೆ : ಒಳ್ಳೆಯ ಜೀವನ ರೂಪಿಸಿಕೊಳ್ಳುವತ್ತ ಗಮನಹರಿಸಿ : ಉಪ ಪೊಲೀಸ್ ವರಿಷ್ಠಾಧಿಕಾರಿ ಪಿ.ಎ.ಸೂರಜ್ ಕರೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ವ್ಯಸನ ಮುಕ್ತ ದಿನಾಚರಣೆ : ಒಳ್ಳೆಯ ಜೀವನ ರೂಪಿಸಿಕೊಳ್ಳುವತ್ತ ಗಮನಹರಿಸಿ : ಉಪ ಪೊಲೀಸ್ ವರಿಷ್ಠಾಧಿಕಾರಿ ಪಿ.ಎ.ಸೂರಜ್ ಕರೆ

ಆಗಷ್ಟ್ 1, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಆ.1 NEWS DESK : ಯುವ ಜನರು ದುಶ್ಚಟಗಳಿಗೆ ತುತ್ತಾಗದೆ, ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಪಿ.ಎ.ಸೂರಜ್ ಕರೆ ನೀಡಿದ್ದಾರೆ.  ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಕಾರದಲ್ಲಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ಡಾ.ಮಹಾಂತ ಶಿವಯೋಗಿ ಅವರ ಜನ್ಮ ದಿನದ ಪ್ರಯುಕ್ತ ಶುಕ್ರವಾರ ನಡೆದ ‘ವ್ಯಸನ ಮುಕ್ತ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.  ಯುವಜನರು ಮದ್ಯ ಹಾಗೂ ಮಾದಕ ವಸ್ತುಗಳಿಗೆ ದಾಸರಾದಲ್ಲಿ ಭವಿಷ್ಯವನ್ನು ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಮದ್ಯ ಹಾಗೂ ಮಾದಕ ವಸ್ತುಗಳ ಬಗ್ಗೆ ಯೋಚಿಸಲೇ ಬಾರದು ಎಂದರು.  ‘ಪೊಲೀಸ್ ಇಲಾಖೆಯು ವಿವಿಧ ಇಲಾಖೆಗಳ ಸಹಕಾರದಲ್ಲಿ ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ ಬಗ್ಗೆ ಒಂದು ಕಡೆ ಜಾಗೃತಿ ಮೂಡಿಸುತ್ತದೆ. ಮತ್ತೊಂದು ಕಡೆ ಇಂತಹ ಪ್ರಕರಣಗಳನ್ನು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತದೆ. ಹಾಗೆಯೇ ಖಚಿತವಾದಲ್ಲಿ ದಂಡ ವಿಧಿಸಲಿದೆ ಎಂದು ಹೇಳಿದರು.’ ಜಿಲ್ಲೆಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ಖಚಿತವಾದಲ್ಲಿ 10 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಜೊತೆಗೆ ಸಂಬಂಧಪಟ್ಟವರ ವಾಹನ ಚಾಲನಾ ಪರವಾನಿಗೆಯನ್ನು ಅಮಾನತು ಮಾಡಲಾಗುತ್ತದೆ. ಹಾಗೆಯೇ ಎರಡನೇ ಬಾರಿ ಪ್ರಕರಣ ದಾಖಲಾದಲ್ಲಿ ವಾಹನ ಚಾಲನಾ ಪರವಾನಿಗೆಯನ್ನೇ ರದ್ದು ಮಾಡಲಾಗುತ್ತದೆ ಎಂದು ಎಚ್ಚರಿಸಿದರು. ಇತ್ತೀಚೆಗೆ ಮೈಸೂರಿನಲ್ಲಿ ಮಹಾರಾಷ್ಟ್ರ ಪೊಲೀಸರ ಕಾರ್ಯಾಚರಣೆ ಮೂಲಕ ಬೆಳಕಿಗೆ ಬಂದಿರುವ ಮಾದಕ ವಸ್ತು ತಯಾರಿಕೆ ಹಾಗೂ ಮಾರಾಟ ಜಾಲ ಒಂದು ರೀತಿ ಗಾಬರಿ ಹುಟ್ಟಿಸುವಂತಿದೆ ಎಂದು ಸೂರಜ್ ಹೇಳಿದರು.  ಸಮಾಜದಲ್ಲಿ ಯಾವುದೇ ರೀತಿಯ ಆಗುಹೋಗುಗಳಿಗೆ ಸಂಬಂಧಿಸಿದಂತೆ ದೂರುಗಳನ್ನು 112 ಕ್ಕೆ ನೀಡಬಹುದಾಗಿದೆ ಎಂದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಚಿದಾನಂದ ಕುಮಾರ್ ಅವರು ಮಾತನಾಡಿ ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಮದ್ಯ ಹಾಗೂ ಮಾದಕ ವ್ಯಸನಗಳಿಂದ ದೂರವಿರಬೇಕು ಎಂದರು.  ಬಾಯಿಗೆ ರುಚಿ ಇದೆ ಎಂದು ಹಲವು ರೀತಿಯ ತಿನಿಸುಗಳನ್ನು ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದಲ್ಲ. ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಅವರು ತುಂಬಾ ಶ್ರಮವಹಿಸಿದ್ದಾರೆ ಎಂದು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸನತ್ ಕುಮಾರ್ ಅವರು ಮಾತನಾಡಿ ಯುವ ಜನರಲ್ಲಿ ಚಂಚಲ ಮನಸ್ಸು ಹೆಚ್ಚು. ಆದ್ದರಿಂದ ಓದಿನ ಕಡೆ ಗಮನ ನೀಡುವಂತಾಗಬೇಕು ಎಂದು ಸಲಹೆ ನೀಡಿದರು. ಮದ್ಯ ಹಾಗೂ ಮಾದಕ ವ್ಯಸನಕ್ಕೆ ತುತ್ತಾದಲ್ಲಿ ಮೆದುಳು, ಅಂಗಾಂಗ, ಜ್ಞಾಪಕ ಶಕ್ತಿ ಕಡಿಮೆಯಾಗುತ್ತದೆ. ಆದ್ದರಿಂದ ಈ ಬಗ್ಗೆ ಎಚ್ಚರವಹಿಸಬೇಕು ಎಂದರು. ರಾಷ್ಟ್ರದ ಅಭಿವೃದ್ಧಿಗೆ ಯುವಜನರ ಪಾತ್ರ ಅತ್ಯಮೂಲ್ಯವಾಗಿದೆ. ಆದ್ದರಿಂದ ಯಾವುದೇ ರೀತಿಯ ವ್ಯಸನಕ್ಕೆ ತುತ್ತಾಗಬಾರದು. ಬದುಕಿನ ದೂರದೃಷ್ಟಿ ಚಿಂತನೆ ಒಳಗೊಂಡಿರಬೇಕು ಎಂದರು.  ಪ್ರಾಂಶುಪಾಲರಾದ ವಿಜಯ ಅವರು ಮಾತನಾಡಿ ಜೀವ ಇದ್ದರೆ ಮಾತ್ರ ಜೀವನ, ಯುವಜನರು ಒಳ್ಳೆಯ ಕೆಲಸಗಳಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದರು. ‘ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮನೋವೈದ್ಯರಾದ ಡಾ.ಡೆವಿನ್ ಕರ್ಕಡ ಅವರು ಮಾತನಾಡಿ ಮದ್ಯ ಹಾಗೂ ಮಾದಕ ವಸ್ತುಗಳಿಗೆ ತುತ್ತಾದಲ್ಲಿ ದೈಹಿಕ ಮತ್ತು ಮಾನಸಿಕ ಅನಾರೋಗ್ಯಕ್ಕೆ ತುತ್ತಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.’ ಮಾದಕ ವಸ್ತು ಬಳಕೆ ಮತ್ತು ಸಾಗಾಣಿಕೆಯು ಒಂದು ಶಿಕ್ಷಾರ್ಹ ಅಪರಾಧವಾಗಿದ್ದು, ಆರೋಗ್ಯ ಮತ್ತು ಮನಸ್ಸಿಗೆ ಮಾರಕವಾಗಿದೆ ಎಂದು ತಿಳಿಸಿದರು. ರಾಷ್ಟ್ರೀಯ ಟೆಲಿ ಮಾನಸಿಕ ಆರೋಗ್ಯ ಕಾರ್ಯಕ್ರಮದಲ್ಲಿ ಟೆಲಿ ಮನಸ್ಸು ಜಾರಿಗೊಳಿಸಿದ್ದು, ಶುಲ್ಕ ರಹಿತ ದೂರವಾಣಿ ಸಂಖ್ಯೆ 14416 ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದರು.  ಪರೀಕ್ಷಾ ಒತ್ತಡಕ್ಕೆ ಒಳಗಾದವರು, ಕೌಟುಂಬಿಕ ಸಮಸ್ಯೆಗೆ ತುತ್ತಾದವರು, ಮಾದಕ ವಸ್ತು ವ್ಯಸನದ ಸಮಸ್ಯೆಯಲ್ಲಿ ಇರುವವರು, ಜ್ಞಾಪಕ ಶಕ್ತಿ ತೊಂದರೆ ಉಳ್ಳವರು, ಇತರೆ ಯಾವುದೇ ಮಾನಸಿಕ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವವರು 14416 ಸಹಾಯವಾಣಿಗೆ ಕರೆ ಮಾಡಬಹುದಾಗಿದೆ ಎಂದು ತಿಳಿಸಿದರು.  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ಸ್ವಾಗತಿಸಿದರು. ಉಪನ್ಯಾಸಕರಾದ ಚಿದಾನಂದ ನಿರೂಪಿಸಿದರು. ಕಾಲೇಜಿನ ವಿದ್ಯಾರ್ಥಿ ನಿಯರು ಪ್ರಾರ್ಥಿಸಿದರು. ಉಪನ್ಯಾಸಕರಾದ ಪೂರ್ಣಿಮ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ: ಜಾನಪದ ಕಲಾಪ್ರಕಾರಗಳ ಪ್ರದರ್ಶನಕ್ಕೆ ಮನಸೋತ ಜನತೆ; ಜಾನಪದ ಸಂಸ್ಕೃತಿಯ ಉಳಿವಿಗೆ ಹೆಚ್ಚಿನ ಕಾಳಜಿ ಅಗತ್ಯ: ಶಾಸಕ ಎ.ಎಸ್.ಪೊನ್ನಣ್ಣ ಕರೆ; ಕಲಾವಿದರು ಹಾಗೂ ಜಾನಪದ ವಸ್ತು ಸಂಗ್ರಹಕಾರರಿಗೆ ಸನ್ಮಾನ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.18 : ಕಾವೇರಿ ತೀರ್ಥೋದ್ಭವದ ದಿನವಾದ ಶನಿವಾರ ಕಾವೇರಿ ದರ್ಶನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಎ.ಎಸ್.ಪೊನ್ನಣ್ಣ ಹಾಗೂ…

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.