
ಸುಂಟಿಕೊಪ್ಪ NEWS DESK ಜು.3 : ಭಾರೀ ಗಾಳಿ ಮಳೆಯಿಂದ ಮನೆಯ ಮೇಲೆ ಮರ ಬಿದ್ದು ನಷ್ಟವುಂಟಾಗಿದ್ದ ಕೆಂಚೆಟ್ಟಿ ನಿವಾಸಿ ಎನ್.ಆರ್.ನಂಜಪ್ಪ ಅವರ ನಿವಾಸಕ್ಕೆ ಶಾಸಕ ಡಾ.ಮಂತರ್‌ಗೌಡ ಅವರು ಭೇಟಿ ನೀಡಿ ಪರಿಶೀಲಿಸಿ ಧೈರ್ಯ ತುಂಬಿದರು. ಮರವೊAದು ಮನೆಯ ಮೇಲೆ ಬಿದ್ದ ಪರಿಣಾಮ ಮನೆಯ ಮೇಲ್ಚಾವಣಿ ಹಾಗೂ ಮನೆಯ ಗೋಡೆ ಸೇರಿದಂತೆ ಸಿಂಟೆಕ್ಸ್ ನೀರಿನ ಟ್ಯಾಂಕ್ ಹಾನಿಗೀಡಾಗಿತ್ತು. ನಷ್ಟದ ಕುರಿತು ಮಾಹಿತಿ ಪಡೆದ ಶಾಸಕರು ಪರಿಹಾರದ ಮೊತ್ತವನ್ನು ಆದಷ್ಟು ಶೀಘ್ರ ಒದಗಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಹಶೀಲ್ದಾರ್ ಕಿರಣ್ ಗೌರಯ್ಯ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್, ಗ್ರಾ.ಪಂ ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಸದಸ್ಯ ರಫೀಕ್‌ಖಾನ್, ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಮಂಜುನಾಥ್, ಉಪತಹಶೀಲ್ದಾರ್ ಪ್ರಶಾಂತ್, ಸುಂಟಿಕೊಪ್ಪ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಉಷಾ ಮತ್ತಿತರರು ಹಾಜರಿದ್ದರು.








