
ನಾಪೋಕ್ಲು ಆ.4 NEWS DESK : ನಾಪೋಕ್ಲು ಬಿಲ್ಲವ ಸಮಾಜದ ವತಿಯಿಂದ ಆ.10 ರಂದು ಸ್ಥಳೀಯ ಕೊಡವ ಸಮಾಜದಲ್ಲಿ ಆಟಿಡೊಂಜಿ ದಿನ-2025 ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಬೃಹತ್ ರಕ್ತದಾನ ಶಿಬಿರ, ಬಿಲ್ಲವ ಸಮಾಜದ ಮಹಾಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಲು ತೀರ್ಮಾನಿಸಲಾಗಿದೆ ಎಂದು ನಾಪೋಕ್ಲು ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ.ಪ್ರತೀಪ ಹೇಳಿದರು. ಪಟ್ಟಣದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ,ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿದಾನ ಸಭಾ ಕ್ಷೇತ್ರದ ಶಾಸಕರಾದ ಡಾ.ಮಂಥರ್ ಗೌಡ, ರಾಮನಗರ ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ವಿಖ್ಯಾತಾನಂದ ಸ್ವಾಮೀಜಿ, ನಾರಾಯಣ ಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸೂರತ್ಕಲ್ ಪಾಲ್ಗೊಳ್ಳಲಿರುವರು ಎಂದರು. ಅಂದು ಬೆಳಿಗ್ಗೆ 10 ಗಂಟೆಗೆ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಲಾಗುವುದು. ಬಳಿಕ ಆಟಿಡೊಂಜಿ ದಿನ -2025 ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಬಿಲ್ಲವ ಸಮಾಜದ ಸಾಧಕರನ್ನು ಸನ್ಮಾನಿಸಲಾಗುವುದು. ಬಳಿಕ ಆಟಿ ಮಾಸದ ಸಾಂಪ್ರದಾಯಿಕ ತಿನಿಸುಗಳ ಪ್ರದರ್ಶನ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಬಿಲ್ಲವ ಸಮಾಜದ ಮಹಾಸಭೆ ಬಳಿಕವೈ ವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆಯ ರಕ್ತ ನಿಧಿ ಅಧಿಕಾರಿ ಡಾ.ಕರು0ಬಯ್ಯ, ಭಾಜಪ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ, ಕೊಡಗು ಜಿಲ್ಲಾ ಬಿಲ್ಲವ ಸಮಾಜದ ಅಧ್ಯಕ್ಷ ಲಿಂಗಪ್ಪ ,ಮಕ್ಕಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ,ಉದ್ಯಮಿ ರಮೇಶ್, ಮಡಿಕೇರಿ ತಾಲೂಕು ಬಿಲ್ಲವ ಸಮಾಜದ ಅಧ್ಯಕ್ಷೆ ಲೀಲಾವತಿ, ಸೋಮವಾರಪೇಟೆ ಬಿಲ್ಲವ ಸಮಾಜದ ಅಧ್ಯಕ್ಷ ಚಂದ್ರಹಾಸ, ವಿರಾಜಪೇಟೆ ಬಿಲ್ಲವ ಸಮಾಜದ ಅಧ್ಯಕ್ಷ ಬಿ ಎಂ ಗಣೇಶ್, ಕುಶಾಲನಗರ ಬಿಲ್ಲವ ಸಮಾಜದ ಅಧ್ಯಕ್ಷ ಸುದೀರ್, ಸುಂಟಿಕೊಪ್ಪ ಬಿಲ್ಲವ ಸಮಾಜದ ಅಧ್ಯಕ್ಷ ಮಣಿ ಮುಖೇಶ್, ಸಿದ್ದಾಪುರ ಬಿಲ್ಲವ ಸಮಾಜದ ಅಧ್ಯಕ್ಷ ಬಿ.ವಿ ರಂಜನ್ ಹಾಗೂ ಬಂಟ್ವಾಳದ ವಾಗ್ಮಿ ಕುಮಾರಿ ಶ್ರೀನಿಧಿ ಪಾಲ್ಗೊಳ್ಳಲಿರುವರು ಎಂದು ತಿಳಿಸಿದರು. ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ನಾಪೋಕ್ಲು ಬಿಲ್ಲವ ಸಮಾಜದ ಉಪಧ್ಯಕ್ಷ ಬಿ.ಆರ್ ವಸಂತ, ಕಾರ್ಯದರ್ಶಿ ಲೋಹಿತ್ ಕೆ.ಎಸ್, ಸಮಿತಿ ಸದಸ್ಯರಾದ ಧನಂಜಯ, ಪುನೀತ್ ಉಪಸ್ಥಿತರಿದ್ದರು.
ವರದಿ : ದುಗ್ಗಳ ಸದಾನಂದ.








