
ಮಡಿಕೇರಿ ಆ.4 NEWS DESK : ಮರಗೋಡು ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಭಾರ ಸಾಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಎದೆ ಹಾಲಿನ ಮಹತ್ವವನ್ನು ತಿಳಿಸಿದರು. :: ಬೀಳ್ಕೊಡುಗೆ :: ಇದೇ ಸಂದರ್ಭ ಕತ್ತಲೆಕಾಡು ಅಂಗನವಾಡಿ ಕೇಂದ್ರದಲ್ಲಿ 31 ವರ್ಷಗಳ ಕಾಲ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ಕೆ.ಸುಶೀಲಾ ಅವರನ್ನು ಅಂಗನವಾಡಿ ಕಾರ್ಯಕತೆಯರು ಮತ್ತು ಸಹಾಯಕಿಯರು ಆತ್ಮೀಯವಾಗಿ ಬೀಳ್ಕೊಟ್ಟರು. ಕಡಗದಾಳು ಅಂಗನವಾಡಿ ಕಾರ್ಯಕರ್ತೆ ಕೆ.ಆರ್.ಅನಿಲ ಸ್ವಾಗತಿಸಿದರು. ಮರಗೋಡು ಅಂಗನವಾಡಿ ಕಾರ್ಯಕರ್ತೆ ಅಕ್ಕಮ್ಮ ವಂದಿಸಿದರು.








