
ನಾಪೋಕ್ಲು ಆ.5 NEWS DESK : ಚೋನಕೆರೆ ಹಾಗೂ ಅಜ್ಜಿಮುಟ್ಟ ಅಂಗನವಾಡಿ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ಚೋನಕೆರೆ ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹವನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಸದಸ್ಯರಾದ ಬಿ.ಎಂ.ಪ್ರತೀಪ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಎಲ್ಲರೂ ಮಕ್ಕಳ ಶ್ರೇಯಾ ಅಭಿವೃದ್ಧಿಗೆ ಶ್ರಮಿಸಬೇಕೆಂದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯ ಮೇಲ್ವಿಚಾರಕಿ ಹಾಗೂ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿಗಳಾದ ಶೀಲಾ ಅಶೋಕ್ ಪ್ರಾಸ್ತಾವಿಕ ನುಡಿಗಳನ್ನಾಡಿ ಎದೆಹಾಲಿನ ಮಹತ್ವದ ಬಗ್ಗೆ ಹಾಗೂ ಇಲಾಖೆಯ ಸೌಲಭ್ಯಗಳಾದ ಭಾಗ್ಯಲಕ್ಷ್ಮಿ, ಮಾತೃ ವಂದನಾ ಇನ್ನಿತರ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಕಿರಿಯ ಆರೋಗ್ಯ ಕಾರ್ಯಕರ್ತೆಯವರಾದ ಉಮಾಮಹೇಶ್ವರಿ ಅವರು ಆರೋಗ್ಯ ಇಲಾಖೆಯಿಂದ ದೊರೆಯುವ ಸೌಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಅಜ್ಜಿಮುಟ್ಟ ಪ್ರಾಥಮಿಕ ಶಾಲೆಯ ಶಿಕ್ಷಕಿ ಪುಷ್ಪಾವತಿ, ಆಶಾ ಕಾರ್ಯಕರ್ತೆಯರು, ಮಕ್ಕಳ ತಾಯಂದಿರು, ಗ್ರಾಮಸ್ಥರು ಹಾಗೂ ಪುಟಾಣಿ ಮಕ್ಕಳು ಹಾಜರಿದ್ದರು. ಚೋನಕೆರೆ ಅಂಗನವಾಡಿ ಕಾರ್ಯಕರ್ತೆಯವರಾದ ಸಿ.ಯು.ಪವಿತ್ರ ಸ್ವಾಗತಿಸಿ, ನಿರೂಪಿಸಿದರು. ಅಜ್ಜಿಮುಟ್ಟ ಅಂಗನವಾಡಿ ಕಾರ್ಯಕರ್ತೆಯರಾದ ಸುಜಾತ ಯು.ಎನ್ ವಂದಿಸಿದರು.
ವರದಿ : ದುಗ್ಗಳ ಸದಾನಂದ.








