Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೈಸೂರು ಕೊಡಗು ಗೌಡಸಮಾಜದಲ್ಲಿ ಆಟಿ ಗೌಜಿ ಸಂಭ್ರಮ : ಕೊಡಗಿನ ಶ್ರೇಷ್ಠ ಸಂಸ್ಕೃತಿ ಎಲ್ಲರಿಗೂ ಪರಿಚಯವಾಗಲಿ : ಕೆ.ವಿ.ಶ್ರೀಧರ್ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೈಸೂರು ಕೊಡಗು ಗೌಡಸಮಾಜದಲ್ಲಿ ಆಟಿ ಗೌಜಿ ಸಂಭ್ರಮ : ಕೊಡಗಿನ ಶ್ರೇಷ್ಠ ಸಂಸ್ಕೃತಿ ಎಲ್ಲರಿಗೂ ಪರಿಚಯವಾಗಲಿ : ಕೆ.ವಿ.ಶ್ರೀಧರ್ ಅಭಿಮತ*

ಆಗಷ್ಟ್ 5, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಆ.5 NEWS DESK : ತಮ್ಮದೇ ಸಂಸ್ಕೃತಿ ಸಂಪ್ರದಾಯವನ್ನು ಹೊಂದಿರುವ ಕೊಡಗು ಗೌಡ ಸಮುದಾಯದವರು ತಮ್ಮ ಶ್ರೇಷ್ಠ ಸಂಸ್ಕೃತಿ ಪರಂಪರೆಯನ್ನು ಸಾರ್ವಜನಿಕ ಸಮಾರಂಭಗಳ ಮೂಲಕ ಇತರರಿಗೂ ಪಸರಿಸುವ ಪ್ರಯತ್ನ ಮಾಡಬೇಕೆಂದು ಮೈಸೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರು ಹಾಗೂ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕರಾದ ಕೆ.ವಿ.ಶ್ರೀಧರ್ ಅಭಿಪ್ರಾಯಪಟ್ಟರು. ಆಟಿ 18ರ ಪ್ರಯುಕ್ತ ಮೈಸೂರು ಕೊಡಗು ಗೌಡ ಸಮಾಜದಲ್ಲಿ ಏರ್ಪಡಿಸಿದ್ದ ಆಟಿ ಗೌಜಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕೊಡಗು ಗೌಡರ ಶ್ರೇಷ್ಠ ಭಾಷೆ, ಸಂಸ್ಕೃತಿ, ಆಹಾರ, ಪದ್ಧತಿ ಕ್ರಮಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮೂಲಕ, ತಮ್ಮ ಸಂಸ್ಕೃತಿ ಇತರರಿಗೂ ಹಂಚಿಕೆಯಾಗಿ ಅದು ಶಾಶ್ವತವಾಗಿರುವಂತೆ ನೋಡಿಕೊಳ್ಳಬೇಕೆಂದು ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮೈಸೂರು ಕೊಡಗು ಗೌಡ ಸಮಾಜದ ಅಧ್ಯಕ್ಷ ಕೊಂಬಾರನ ಬಸಪ್ಪ ಮಾತನಾಡಿ, ಕೊಡಗಿನಲ್ಲಿ ಮಳೆಗಾಲದ ವಾತಾವರಣದಲ್ಲಿ ಪರಿಸರದಲ್ಲಿ ಸಿಗುವ ಆಹಾರ ಉತ್ಪನ್ನಗಳನ್ನು ಬಳಸಿ ಜನರು ಆರೋಗ್ಯವನ್ನು ಕಾಪಾಡಿಕೊಳ್ಳುತ್ತಾರೆ, ಮೈಸೂರಿನಲ್ಲಿ ನೆಲೆಸಿರುವ ನಮ್ಮ ಸಮುದಾಯದ ಜನರಿಗೆ ಈ ಆರೋಗ್ಯದಾಯಕ ಆಹಾರವನ್ನು ಒದಗಿಸುವ ಉದ್ದೇಶದಿಂದ ಆಟಿ ಗೌಜಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಕೊಡಗು ಗೌಡ ಮಹಿಳಾ ಒಕ್ಕೂಟದ ನಡುಬೆಟ್ಟಿ ಗೀತಾ ಲಕ್ಷ್ಮಣ ಮಾತನಾಡಿ ಆಟಿ ಗೌಜಿ ಕಾರ್ಯಕ್ರಮದ ಪ್ರಯುಕ್ತ ವಿವಿಧ ಮಳಿಗೆಗಳಲ್ಲಿ ವಿವಿಧ ಆರೋಗ್ಯದಾಯಕ ಆಹಾರ ಪದಾರ್ಥಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ಇಡಲಾಗಿದ್ದು ಸಮುದಾಯದ ಬಾಂಧವರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಸಮಾಜದ ಹಿರಿಯರಾದ ಕುಯ್ಯುಮುಡಿ ರಾಮಪ್ಪ, ಹಾಗೂ ನಡುಮನೆ ರುಕ್ಮಿಣಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕೊಡಗು ಗೌಡ ಸಮಾಜದ ಕಾರ್ಯದರ್ಶಿ ಪೆÇನ್ನೆಟಿ ನಂದ ಹಾಗೂ ಕೊಡಗು ಗೌಡ ಮಹಿಳಾ ಒಕ್ಕೂಟದ ಕಾರ್ಯದರ್ಶಿ ಕುಂಟುಪಣಿ ಶೀಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೊಡಗು ಗೌಡ ಸಮಾಜದ ನಿರ್ದೇಶಕ ಪಟ್ಟಡ ಶಿವಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕರ್ಣಯ್ಯನ ಸುನಿತಾ ಪ್ರಾರ್ಥಿಸಿದರು.  ಹೊಸೂರು ಮಮತ ವಂದಿಸಿದರು. ಆಟಿ ಗೌಜಿ ಕಾರ್ಯಕ್ರಮದ ಪ್ರಯುಕ್ತ 18 ಮಳಿಗೆಗಳಲ್ಲಿ ವಿವಿಧ ಬಗೆಯ ಕೊಡಗಿನ ಆಹಾರ ಪದಾರ್ಥಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕಿಡಲಾಗಿತ್ತು. ಆಟಿ-ಪಾಯಸ, ಪತ್ರೊಡೆ, ಕೂಗಲೆ ಹಿಟ್ಟು, ಸೂಸಲೇ ಹಿಟ್ಟು, ಎಳ್ಳು ಮೆಂತೆ ಮೊದಲಾದ ಪದಾರ್ಥಗಳು ಮಾರಾಟವಾದವು, ಕೊಡಗಿನ ವಿಶೇಷ ಮಾಂಸಹಾರವು ಬಹು ಬೇಡಿಕೆಗಳಿಸಿತ್ತು. ಪ್ರದರ್ಶನ ಆರಂಭವಾದ ಒಂದು ಗಂಟೆಯೊಳಗೆ ಬಹುತೇಕ ಆಹಾರ ಪದಾರ್ಥಗಳು ಖಾಲಿಯಾಗಿ, ಮಳಿಗೆ ದಾರರು ಹರ್ಷ ವ್ಯಕ್ತಪಡಿಸಿದರು. ಇದೇ ಸಂದರ್ಭ ಕೊಡಗು ಗೌಡ ಯುವ ವೇದಿಕೆಯವರು, ಸಮುದಾಯದ ಜನರು ಪ್ರಾಚೀನ ಕಾಲದಲ್ಲಿ ಬಳಸುತ್ತಿದ್ದ ಪರಿಕರಗಳ ಪ್ರದರ್ಶನ ಗಮನ ಸೆಳೆಯಿತು.

ವರದಿ : ದುಗ್ಗಳ ಸದಾನಂದ.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.