
ನಾಪೋಕ್ಲು ಆ.6 NEWS DESK : ಮೂರ್ನಾಡು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘ ಹಾಗೂ ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸ್ವಚ್ಛತಾ ಶ್ರಮದಾನ ನಡೆಯಿತು. ಮೂರ್ನಾಡಿನ ಸರಕಾರಿ ಪ್ರೌಢ ಶಾಲೆಗೆ ಸುಣ ಬಣ್ಣ ಹೊಡೆದು ಆವರಣದಲ್ಲಿದ್ದ ಮರ ಗಿಡಗಳನ್ನು ಕಡಿದು ಸ್ವಚ್ಛಗೊಳಿಸಲಾಯಿತು. ಸರಕಾರಿ ಪ್ರೌಢ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಎಸ್.ಎಂ.ದೇಚಮ್ಮ ಹರ್ಷ ವ್ಯಕ್ತಪಡಿಸಿ, ಸಂಘದಿಂದ ಉತ್ತಮ ಕೆಲಸ ಆಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಾಜಮುಖಿ ಕಾರ್ಯಕ್ರಮ ನಡೆಯುವಂತಾಗಲಿ ಎಂದು ಹಾರೈಸಿದರು. ಕಾಂತೂರು-ಮೂರ್ನಾಡು ಗ್ರಾ.ಪಂ ಅಧ್ಯಕ್ಷ ಕುಶನ್ ರೈ ಮತ್ತು ಕೊಡಗು ಜಿಲ್ಲಾ ಶಾಲಾಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಸಿ.ರಂಗಧಾಮಪ್ಪ, ತ್ರೀನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಸಜನ್ ಗಣಪತಿ, ಪದಾಧಿಕಾರಿಗಳು, ಸದಸ್ಯರು ಹಾಗೂ ನಿವೃತ್ತ ಶಿಕ್ಷಕ ಕೆ.ಪಿ.ಗುರುರಾಜು, ದೈಹಿಕ ಶಿಕ್ಷಣ ಶಿಕ್ಷಕರಾದ ಪಿ.ಬಿ.ಕಸ್ತೂರಿ, ಸಿಬ್ಬಂದಿಗಳು ವಿದ್ಯಾರ್ಥಿಗಳು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ









